ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನಾವಣೆಯಲ್ಲಿ ರಾಮನಗರ ಜಿಲ್ಲೆಯಲ್ಲಿ ಶೇ.95.77 ಪ್ರತಿಶತ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು, ಜಿಲ್ಲೆಯ 9 ಮತಗಟ್ಟೆಯಲ್ಲಿ ಶಾಂತಿಯುತ ಮತದಾನವಾಗಿದೆ.
ಜಿಲ್ಲೆಯಲ್ಲಿ 1,447 ಪುರುಷ
ಮತದಾರರ ಪೈಕಿ 1,388 ಹಾಗೂ 1,085 ಮಹಿಳಾ ಮತದಾರರ ಪೈಕಿ 1,037 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು, ಒಟ್ಟಾರೆ 2,532 ಮತಗಳ ಪೈಕಿ 2,425 ಮತಗಳು ಚಲಾವಣೆಗೊಂಡಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟಾರೆ ಶೇ. 95.77 ಮತದಾನವಾಗಿದೆ.
*ಮತಗಟ್ಟೆಗಳ ವಿವರ:*
ರಾಮನಗರ ತಾಲ್ಲೂಕಿನಲ್ಲಿ ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸ್ಥಾಪಿಸಲಾಗಿದ್ದ 2 ಮತಗಟ್ಟೆಗಳಲ್ಲಿ 654 ಮತದಾರರಿದ್ದು, ಈ ಪೈಕಿ ಒಟ್ಟು 622 ಮತದಾರರು ಹಕ್ಕು ಚಲಾಯಿಸಿದ್ದಾರೆ. ಅವರಲ್ಲಿ 337 ಪುರಷರು ಹಾಗೂ 285 ಮಹಿಳೆಯರು ತಮ್ಮ ಮತ ಚಲಾಯಿಸಿದ್ದಾರೆ.
ಮಾಗಡಿ ತಾಲ್ಲೂಕಿನ ಕುದೂರು ಗ್ರಾಮ ಪಂಚಾಯತ್ ಕಚೇರಿ ಹಾಗೂ ತಹಶೀಲ್ದಾರರ ಕಚೇರಿಯ ಕೋರ್ಟ್ ಆವರಣದಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆ ವ್ಯಾಪ್ತಿಯಲ್ಲಿ ಒಟ್ಟು 464 ಮತದಾರರ ಪೈಕಿ 450 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಅವರಲ್ಲಿ 273 ಪುರುಷರು ಹಾಗೂ 177 ಮಹಿಳೆಯರು ಮತ ಚಲಾಯಿಸಿದ್ದಾರೆ.
*ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ:ಮೊ. ನಂ: 9742424949*
ಚನ್ನಪಟ್ಟಣ ತಾಲ್ಲೂಕಿನ ತಾಲ್ಲೂಕು ಆಡಳಿತ ಸೌಧದ ತಹಶೀಲ್ದಾರ್ ಕಚೇರಿ ಹಾಗೂ ಕೋಡಂಬಳ್ಳಿಯ ನಾಡಕಚೇರಿಯಲ್ಲಿ ರಚಿಸಲಾಗಿರುವ ಮತಗಟ್ಟೆಯಲ್ಲಿ ಒಟ್ಟು 771 ಮತದಾರರಿದ್ದು. ಅವರ ಪೈಕಿ 729 ಮತದಾರರು ಹಕ್ಕು ಚಲಾಯಿಸಿದ್ದಾರೆ. 406 ಪುರುಷರು ಹಾಗೂ 323 ಮಹಿಳೆಯರು ಸೇರಿದ್ದಾರೆ.
ಹಾರೋಹಳ್ಳಿ ತಾಲೂಕಿನ ಕೆಪಿಎಸ್ ಜಿಎಚ್ಪಿಎಸ್ ಮಾಡಲ್ ಹೈಯರ್ ಪ್ರೈಮರಿ ಸ್ಕೂಲ್ನಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆ ವ್ಯಾಪ್ತಿಯಲ್ಲಿದ್ದ 126 ಜನ ಮತದಾರರ ಪೈಕಿ 125 ಜನರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. 74 ಪುರುಷರು ಹಾಗೂ 51 ಮಹಿಳೆಯರು ಮತ ಚಲಾಯಿಸಿದ್ದಾರೆ.
ಕನಕಪುರ ತಾಲ್ಲೂಕಿನ ತಾಲ್ಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ರಚಿಸಲಾಗಿದ್ದ ಎರಡು ಮತಗಟ್ಟೆಗಳಲ್ಲಿ 528 ಜನ ಮತದಾರರಿದ್ದರು. ಅವರಲ್ಲಿ 499 ಜನರು ಹಕ್ಕು ಚಲಾಯಿಸಿದ್ದಾರೆ. ಪುರುಷರು 298 ಹಾಗೂ 201 ಮಹಿಳೆಯರು ಮತ ಚಲಾಯಿಸಿದ್ದಾರೆ ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139,
Recent news in ramanagara-district »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.
ರಾಮನಗರ: ಉದ್ದೇಶ ಪೂರ್ವಕವಾಗಿ ಹಾಗೂ ವ್ಯಕ್ತಿಯೋರ್ವರನ್ನು ತಮ್ಮ ಅವಶ್ಯಕತೆಗನುಗುಣವಾಗಿ ಬಳಸಿಕೊಳ್ಳಲು ಸಾಲ ಕೊಡುವುದು ಅಥವಾ ಜೀತದಾಳಾಗಿ ದುಡಿಮೆ ಮಾಡಲು ಇರ
ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ
ರಾಮನಗರ:ಚನ್ನಪಟ್ಟಣ; ಚನ್ನಪಟ್ಟಣ ನಗರದ ಎಲೇಕೇರಿ (ಗೆಂಡೆಮಡು)ಯಲ್ಲಿನ ಶ್ರೀ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಫೆ.10 ಮತ್ತು
ಯುರೋ ಕಿಡ್ಸ್, ಪ್ರೀ ಸ್ಕೂಲ್ ವತಿಯಿಂದ ಮೆಗಾ ವಾಕಥಾನ್
ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಏಳನೇ ಕ್ರಾಸ್ನಲ್ಲಿರುವ ಯೂರೋ ಕಿಡ್ಸ್, ಪ್ರೀ ಸ್ಕ
ಪ್ರತಿಕ್ರಿಯೆಗಳು