Tel: 7676775624 | Mail: info@yellowandred.in

Language: EN KAN

    Follow us :


ಎಸ್‍ಎಲ್‍ಎನ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಸಮಾರಂಭ

Posted date: 06 Feb, 2018

Powered by:     Yellow and Red

ಎಸ್‍ಎಲ್‍ಎನ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಸಮಾರಂಭ

ರಾಮನಗರ: ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ಮತ್ತು ಉತ್ತಮ ಪರಿಸರವನ್ನು ನಿರ್ಮಾಣ ಮಾಡುವ ಹೊಣೆ ಶಿಕ್ಷಕರು ಮತ್ತು ಪೋಷಕರದ್ದಾಗಿದೆ ಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮರೀಗೌಡ ತಿಳಿಸಿದರು.
ಬಿಡದಿಯ ಎಸ್‍ಎಲ್‍ಎನ್ ಶಾಲೆಯಲ್ಲಿ ನಡೆದ ಸಂಭ್ರಮ-2018ರ ವಾರ್ಷಿಕೋತ್ಸವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದು ಪೋಷಕರು ಶಿಕ್ಷಣ ಸಂಸ್ಥೆಗಳಿಗೆ ಮಕ್ಕಳನ್ನು ಹಾಜರಾತಿ ಪಡಿಸಿದರೆ ಅಷ್ಟೆ ಸಾಲದಾಗಿದ್ದು, ಮಕ್ಕಳ ಬೌದ್ಧಿಕ ಗುಣ ಮಟ್ಟವನ್ನು ಆಗಾಗೆ ತಿಳಿದುಕೊಳ್ಳುವ ಅಗತ್ಯತೆಯಿದೆ. ಪ್ರತಿಯೊಬ್ಬ ಮಗುವಿನಲ್ಲಿ ತನ್ನದೆ ಆದ ಪ್ರತಿಭೆಯಿದೆ. ಆ ಪ್ರತಿಭೆಗೆ ತಂದೆತಾಯಿಯರು ನೀರೆರೆದು ಪೋಷಿಸಬೇಕು. ಆಗ ಮಗು ತಾನು ಹಾಕಿಕೊಂಡಿರುವ ಗುರಿ ಸಾಧಿಸಲು ಮತ್ತು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಪಂಚಾಯಿತಿ ಸದಸ್ಯ ಎ.ಮಂಜು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿ ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾದ ದಿನಗಳಾಗಿದ್ದು, ಹುಟ್ಟಿನಿಂದ ಸಾಯುವವರೆಗೆ ನಾವು ಸಮಾಜಕ್ಕೆ ಕೊಡಬೇಕಾದ ಕೊಡುಗೆಯನ್ನು ನೀಡಲು ಗುರಿಯನ್ನು ಹಾಕಿಕೊಳ್ಳುವ ಸುವರ್ಣ ದಿನಗಳಾಗಿವೆ. ವಿದ್ಯಾರ್ಥಿಗಳು ಓದಿನ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಆಶಕ್ತಿ ಬೆಳೆಸಿಕೊಂಡು ಗುರುಗಳು ಮತ್ತು ಪೋಷಕರ ಮಾರ್ಗದರ್ಶನ ಪಡೆದು ಹಾಕಿಕೊಂಡ ಗುರಿ ಸಾಧಸಿ ಪೋಷಕರು ಮತ್ತು ಶಿಕ್ಷಣ ಸಂಸ್ಥೆಗೆ ಉತ್ತಮ ಹೆಸರು ತರುವಂತೆ ಇದೆ ಸಂಧರ್ಭದಲ್ಲಿ ಮನವಿ ಮಾಡಿದರು.
ಅರ್ಚಕರಹಳ್ಳಿ ಅಂಧರಶಾಲಾ ಮಠದ ಅನ್ನದಾನೇಶ್ವರ ಸ್ವಾಮೀಜಿ ಆರ್ಶೀವಚನ ನೀಡಿ ಮಾತನಾಡಿ ಬುದ್ಧಿ ಹೇಳದ ತಂದೆ, ವಿದ್ಯೆ ಕಲಿಸದ ಗುರು, ಬಿದ್ದಿರಲು ಬಂದು ನೋಡದ ತಾಯಿ, ಈ ಮೂರು ಪದಗಳು ಮನುಷ್ಯ ಕುಲದ ವೈರಿಗಳಾಗಿದ್ದು, ಸಮಾಜದ ಪರಿಪೂರ್ಣತೆಗಾಗಿ ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸಬೇಕಿದೆ. ಸಂಸ್ಕಾರವಿಲ್ಲದವನ ಬದುಕು ನಾವಿಕನಿಲ್ಲದ ದೋಣಿಯಾದಂತಾಗುತ್ತದೆ. ಆದ್ದರಿಂದ ಹಿರಿಯರು ಮತ್ತು ಶಿಕ್ಷಕ ವರ್ಗ ಸಂಸ್ಕಾರ, ಧ್ಯಾನ ಮತ್ತು ಆಧ್ಯಾತ್ಮಿಕ ವಿಷಯಗಳ ಬಗ್ಗೆ ಮಕ್ಕಳಲ್ಲಿ ಮನದಟ್ಟು ಮಾಡುವಂತೆ ಕಿವಿ ಮಾತು ಹೇಳಿದರು. 
ಮುಖ್ಯ ಅತಿಥಿಗಳಾಗಿ ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಕಾಶ್, ಪುರಸಭಾ ಸದಸ್ಯರಾದ ದೇವರಾಜು, ಕನಕಪುರ ತಾಪಂ ಸದಸ್ಯ ಕೆ.ಎನ್ ರಾಮು, ಪ್ರೌಢಶಾಲಾ ಸಹ ಶಿಕ್ಷಕರ ಸಂಘÀದ ಜಿಲ್ಲಾ ಕಾರ್ಯದರ್ಶಿ ಎಂ,ಎನ್,ದೇವರಾಜು,  ಮುಖಂಡರಾದ ರಾಜಣ್ಣ, ಸುರೇಶ್, ಇಟ್ಟಮಡು ಗೋಪಾಲ್, ಮುತ್ತಯ್ಯ, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ.ಚಿಕ್ಕಯ್ಯ, ಕಾರ್ಯದರ್ಶಿ ಪಾರ್ವತಿ, ಶಿಕ್ಷಕರಾದ ಟಿ.ಸಿ.ರಾಜು, ಬಸವರಾಜಯ್ಯ, ಗಿರೀಶ್ ಮತ್ತಿತರರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑