Tel: 7676775624 | Mail: info@yellowandred.in

Language: EN KAN

    Follow us :


ಯಾರ ಒತ್ತಡಕ್ಕೂ ಮಣಿಯದೇ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ನಿಮ್ಮ ರಕ್ಷಣೆ ನನ್ನ ಹೊಣೆ ಕುಮಾರಸ್ವಾಮಿ

Posted date: 12 Sep, 2019

Powered by:     Yellow and Red

ಚನ್ನಪಟ್ಟಣ:.ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ, ಯಾರದೋ ‌ಒತ್ತಡಕ್ಕೆ ಮಣಿದು ಕೆಲಸ ಮಾಡಬೇಡಿ, ನಿಮ್ಮ ರಕ್ಷಣೆಗೆ ನಾನಿದ್ದೀನಿ, ಕೋಟ್೯ ಗೆ ಸಂಬಂಧಿಸಿದ ಕೆಲಸ ಬಿಟ್ಟು ಮಿಕ್ಕೆಲ್ಲ ಕೆಲಸಗಳಿಗೆ ಕಂದಾಯ ಮತ್ತು ಇತರ ಇಲಾಖೆಯವರು ರೈತರ ಹಾಗೂ ಜನಸಾಮಾನ್ಯರ ಕೆಲಸವನ್ನು ಮಾಡಿಕೊಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಹೆಚ್ ಡಿ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಅವರು ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕೆಡಿಪಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.


ನೀರಾವರಿ ಇಲಾಖೆಯವರು ಹೆಚ್ಚು ಕೆಲಸ ಮಾಡಿ, ಚನ್ನಪಟ್ಟಣದ ರಾಜಕೀಯ ನಿಂತಿರುವುದೇ ನೀರಿನ ಮೇಲೆ, ಈಗ ನೀರಿನ ಕೊರತೆ ಇಲ್ಲ, ಆದರೂ ಏಕೆ ಸಕಾಲದಲ್ಲಿ ಎಲ್ಲಾ ಕೆರೆಗಳಿಗೂ ನೀರು ತುಂಬಿಸುತ್ತಿಲ್ಲ ಎಂದು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.


ಪೋಲೀಸ್ ಇಲಾಖೆಗೆ ಕಿವಿಮಾತು ಹೇಳಿದ ಅವರು ನಾನೆಂದೂ ಯಾರ ಪರವಾಗಿಯೂ ನಿಮಗೆ ಫೋನ್ ಮಾಡುವುದಿಲ್ಲ, ನನ್ನ ಕಾರ್ಯಕರ್ತ ರು ಮರಳುಗಾರಿಕೆ  ಮಾಡಿದರೂ ನಾನು ಹೇಳುವುದಿಲ್ಲ. ಅದು ಯಾವುದೇ ರೀತಿಯ ದಾವೆಯಾದರೂ ಸರಿ

ಎಫ್ ಐ ಆರ್ ಹಾಕಿ ನ್ಯಾಯಾಲಯಕ್ಕೆ ಅಲೆಸುವ ಬದಲು ಇಬ್ಬರನ್ನೂ ರಾಜಿ ಮಾಡಿ ಕಳುಹಿಸುವ ಪ್ರಯತ್ನ ಮಾಡಿ ಎಂದು ಹೇಳಿದರು.


ನಾನು ಯಾವ ಅಧಿಕಾರಿಗೂ ಏಕವಚನದಲ್ಲಿ ಮಾತನಾಡುವುದಿಲ್ಲ. ಬಹುತೇಕ ದೂರುಗಳು ಕಂದಾಯ ಮತ್ತು ರೆವಿನ್ಯೂ ಇಲಾಖೆಗೆ ಸಂಬಂಧಿಸಿದ್ದು ಶೀಘ್ರವಾಗಿ ಬಗೆಹರಿಸಿ.

ನಿಮ್ಮ ಅಧಿಕಾರವನ್ನು ಪ್ರಾಮಾಣಿಕವಾಗಿ ಬಳಸಿಕೊಂಡು ಒಳ್ಳೆಯ ಕೆಲಸ ಮಾಡಿ, ನಿಮ್ಮ ಮೇಲೆ ಯಾರೇ ಒತ್ತಡ ಹೇರಿದರೆ, ತಿಂಗಳ ವಂತಿಗೆ ಕೇಳಿದರೆ ಕೊಡಬೇಡಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ.

ನನಗೆ ಜಾತಿ ಇಲ್ಲ, ಜಾತಿ ಪರ ಕೆಲಸ ಮಾಡುವುದಿಲ್ಲ ಕೆಲಸ ಮಾಡುವ ಅಧಿಕಾರಿಗಳ ಪರ ಇರುತ್ತೇನೆ, ಜನರ ವಿಶ್ವಾಸಗಳಿಸಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.


ಪ್ರತಿ ಇಲಾಖೆಯ ಅಧಿಕಾರಿಗಳ ಅಹವಾಲನ್ನು ಕೇಳಿ ತಿಳಿದುಕೊಂಡ ಶಾಸಕರು ತಮ್ಮ ಇಲಾಖೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ದಾಖಲೆ ಸಮೇತ ನನಗೆ ಸಲ್ಲಿಸಿ, ಎಲ್ಲಾ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಪ್ರಯತ್ತಿಸುತ್ತೇನೆ ಎಂದರು.

ತಹಶಿಲ್ದಾರ್ ಸುದರ್ಶನ್ ರವರು ಋಣ ಮುಕ್ತ ಕಾಯ್ದೆಯ ಐದು ಸಾವಿರ ಅರ್ಜಿಗಳನ್ನು ಸಾರ್ವಜನಿಕರಿಗೆ ವಿರಿಸಲಾಗಿದೆ, ಕಂದಾಯ ಇಲಾಖೆಗೆ ಸಂಬಂಧಿಸಿದ ಸಹಸ್ರಾರು ಅರ್ಜಿಗಳನ್ನು ಈಗಾಗಲೇ ವಿಲೇವಾರಿ ಮಾಡಿದ್ದು ಬಾಕಿ ಇರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲಾಗುವುದು ಎಂದರು.


ಸಭೆಯಲ್ಲಿ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ, ತಹಶಿಲ್ದಾರ್ ಸುದರ್ಶನ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ, ಎ ಸಿ ಕೃಷ್ಣಮೂರ್ತಿ, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑