Tel: 7676775624 | Mail: info@yellowandred.in

Language: EN KAN

    Follow us :


ಗಾಂಧೀಜಿಯವರ ಗ್ರಾಮೀಣಾಭಿವೃದ್ಧಿ ಕನಸನ್ನು ನನಸು ಮಾಡುತ್ತಿರುವ ವೀರೇಂದ್ರ ಹೆಗ್ಗಡೆಯವರು ಹರೂರು ರಾಜಣ್ಣ

Posted date: 05 Oct, 2019

Powered by:     Yellow and Red

ಗಾಂಧೀಜಿಯವರ ಗ್ರಾಮೀಣಾಭಿವೃದ್ಧಿ ಕನಸನ್ನು ನನಸು ಮಾಡುತ್ತಿರುವ ವೀರೇಂದ್ರ ಹೆಗ್ಗಡೆಯವರು ಹರೂರು ರಾಜಣ್ಣ

ಚನ್ನಪಟ್ಟಣ: ಗ್ರಾಮೀಣಾಭಿವೃದ್ಧಿ ಯೋಜನೆಯನ್ನು ಸ್ವಾತಂತ್ರ್ಯ ಪೂರ್ವದಲ್ಲೇ ಗಾಂಧೀಜಿಯವರ ಜೊತೆಗೆ ಡಾ ರಾಧಾಕೃಷ್ಣನ್ ರವರು ಕನಸು ಕಾಣುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ್ದರು. ಮಹಾತ್ಮರ ಕನಸನ್ನು ಇಂದು ಧರ್ಮಸ್ಥಳ ದ ಶ್ರೀ ವೀರೇಂದ್ರ ಹೆಗ್ಗಡೆಯವರು ನನಸು ಮಾಡುವತ್ತ ಮುನ್ನುಗ್ಗುತ್ತಿದ್ದಾರೆ. ಗಾಂಧಿ ಕಂಡ ಮತ್ತೊಂದು ಕನಸು ವ್ಯಸನಮುಕ್ತ ಕುಟುಂಬ ಅದನ್ನು ಸಹ ನನಸಾಗಿಸುವತ್ತ ಸಂಸ್ಥೆ ಟೊಂಕ ಕಟ್ಟಿ ನಿಂತಿರುವುದು ನಮ್ಮೆಲ್ಲರ ಸೌಭಾಗ್ಯ , ನಾವುಗಳು ಸೋಮಾರಿಯಾಗದೆ ಸಂಘಟನೆಯ ಜೊತೆ ಕೈಜೋಡಿಸಿ ಮಹಾತ್ಮರ ಕನಸನ್ನು ನನಸಾಗಿಸೋಣಾ ಎಂದು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ತಿಳಿಸಿದರು.

ಅವರು ನಗರದ ಎಲ್ ಎನ್ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಸ್ಟ್ ಹಮ್ಮಿಕೊಂಡಿದ್ದ ಗಾಂಧಿಸ್ಮೃತಿ ಮತ್ತು ವ್ಯಸನಮುಕ್ತ ಸಾಧಕರ ಸಮಾವೇಶ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡಿದರು.



ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೈಸೂರು ಪ್ರಾದೇಶಿಕ ನಿರ್ದೇಶಕ ಪಿ ಗಂಗಾಧರ ರೈ ರವರು ಆಡು ಮುಟ್ಟದ ಸೊಪ್ಪಿಲ್ಲ, ವೀರೇಂದ್ರ ಹೆಗ್ಗಡೆಯವರು ಮಾಡದ ಸಾಮಾಜಿಕ ಕಾರ್ಯಕ್ರಮವಿಲ್ಲ, ಎಲ್ಲಾ ವರ್ಗದ ಜನರಿಗೆ ಕಲ್ಯಾಣವನ್ನುಂಟು ಮಾಡುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಆರ್ಥಿಕ ನೆರವು ನೀಡುವ ಮೂಲಕ ಜಗತ್ತಿನ ಎಲ್ಲಾ ಕ್ಷೇತ್ರಗಳಿಗೆ ಡಾ ವೀರೇಂದ್ರ ಹೆಗ್ಗಡೆಯವರು ಮಾದರಿಯಾಗಿದ್ದಾರೆ, ರಾಜ್ಯದಲ್ಲಿ ೩೫ ಸಾವಿರ ಹಳ್ಳಿಗಳಲ್ಲಿ ೪೭ ಸಾವಿರ ಸಂಘಗಳನ್ನು ಸ್ಥಾಪಿಸಿ ೪೨ ಲಕ್ಷ ಸದಸ್ಯರನ್ನು ಹೊಂದಿದ್ದು ಅವರೆಲ್ಲರೂ ಸಾಮಾಜಿಕವಾಗಿ ಆರ್ಥಿಕವಾಗಿ ಸಬಲರನ್ನಾಗಿಸಿದ್ದಾರೆ. ಗಾಂಧೀಜಿಯವರ ಕನಸಾದ ವ್ಯಸನಮುಕ್ತ ಭಾರತವನ್ನು ಕಟ್ಟಲು ನಮ್ಮ ಸಂಘಗಳು ಕೆಲಸ ಮಾಡುತ್ತಿವೆ, ರಾಮನಗರ ಜಿಲ್ಲೆಗೂ ೬೦೦ ಕೋಟಿ ಹಣವನ್ನು ಸಂಘದ ಸದಸ್ಯರು ಸಬಲರಾಗಲು ನೀಡಿದ್ದೇವೆ. ಹಲವಾರು ಕೆರೆ ಕಟ್ಟೆಗಳ ಅಭಿವೃದ್ಧಿ, ನೆರೆ ಸಂತ್ರಸ್ತರಿಗೆ ೨೫ ಕೋಟಿ ಹಣ ಸೇರಿದಂತೆ ಅನೇಕ ಸಾಮಾಜಿಕ ಯೋಜನೆಗಳನ್ನು ಸತತವಾಗಿ ಹಮ್ಮಿಕೊಳ್ಳಲಾಗಿದೆ ಎಂದರು.


ವ್ಯಸನ ಮುಕ್ತ ದಿಂದ ಹೊರಬಂದ ಮೋಹನ್ ಮಾತನಾಡಿ ನಾನು ಎಂಟು ಭಾಷೆಗಳನ್ನು ಮಾತನಾಡುತ್ತೇನೆ, ವ್ಯಾಪಾರಸ್ಥನಾಗಿದ್ದ ನಾನು ಕೋಟ್ಯಾಂತರ ಹಣ ಸಂಪಾದನೆ ಮಾಡಿದ್ದೆ, ಕುಡಿತದ ಸಹವಾಸದಿಂದ ಹತ್ತಾರು ಏಜೆನ್ಸಿಗಳ ಗುತ್ತಿಗೆಗಳನ್ನು ಕಳೆದುಕೊಂಡಿದ್ದೇನೆ. ಕುಡಿತದ ಅಮಲಿನಲ್ಲಿ ಲಕ್ಷಾಂತರ ಹಣ ಕಳೆದುಕೊಂಡಿದ್ದೇನೆ, ಧರ್ಮಸ್ಥಳ ಸಂಘಟನೆಯ ಮಾರ್ಗದರ್ಶನ ದಲ್ಲಿ ನಾನಿಂದು ಕುಡಿತ ಬಿಟ್ಟಿದ್ದು ಈಗ ನನ್ನೆಲ್ಲಾ ಕಳೆದುಕೊಂಡಿದ್ದ ಸಕಲ ಸವಲತ್ತುಗಳನ್ನು ಮರಳಿ ಪಡೆಯುವುದಾಗಿ‌ ಘೋಷಿಸಿಕೊಂಡರು. ಇದೇ ವೇಳೆ ಅನೇಕ ವ್ಯಸನಮುಕ್ತ ಕುಟುಂಬದವರು ಮಾತನಾಡಿದರು.


ಹೆಂಡ ಸಾರಾಯಿ ಸಹವಾಸ ಹೆಂಡತಿ ಮಕ್ಕಳ ಉಪವಾಸ ಎಂಬ ಗಾಂಧೀಜಿಯವರ ಘೋಷಣೆಯನ್ನು ನಾವು ಪ್ರತಿಕ್ಷಣವೂ ನೆನಪಿಸಿಕೊಳ್ಳುವ ಮೂಲಕ ಕುಡಿತದಿಂದ ದೂರ ಇರಬೇಕು ಎಂದು ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿಂಲಿಂ ನಾಗರಾಜು ತಿಳಿಹೇಳಿದರು. ಗಾಂಧಿಸ್ಮೃತಿ ಮತ್ತು ವ್ಯಸನಮುಕ್ತ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿನಿಯರಿಗೆ ವಿರಕ್ತ ಮಠದ ಪೀಠಾಧ್ಯಕ್ಷರಾದ ಶ್ರೀ ಶಿವರುದ್ರ ಸ್ವಾಮೀಜಿಗಳು ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಿ ನೆರೆದಿದ್ದ ಭಕ್ತ ಸಮೂಹಕ್ಕೆ ಆಶೀರ್ವಚನ ನೀಡಿದರು.



ಕಾರ್ಯಕ್ರಮದಲ್ಲಿ ಚಿಕ್ಕಣ್ಣಯ್ಯ, ತಮ್ಮಣ್ಣ, ಶ್ರೀನಿವಾಸ ಮೂರ್ತಿ, ಸಿದ್ದಗಂಗಾ, ಬಾಬುನಾಯ್ಕ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಟ್ರಸ್ಟ್ ನ ಪದಾಧಿಕಾರಿಗಳು ಸಂಘದ ಸದಸ್ಯರು ಹಾಜರಿದ್ದರು. ಸಂಘದ ಸದಸ್ಯರು ಮತ್ತು ಕುಟುಂಬದ ವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑