Tel: 7676775624 | Mail: info@yellowandred.in

Language: EN KAN

    Follow us :


ಕಳಪೆ ಕಾಮಗಾರಿ : 4,14,700 ರು. ವಸೂಲಿಗೆ ಒಂಬುಡ್ಸ್ ಮನ್ ಆದೇಶ

Posted date: 07 Feb, 2018

Powered by:     Yellow and Red

ಕಳಪೆ ಕಾಮಗಾರಿ : 4,14,700 ರು. ವಸೂಲಿಗೆ ಒಂಬುಡ್ಸ್ ಮನ್ ಆದೇಶ

ರಾಮನಗರ : ಮಹಾತ್ಮಗಾಂಧಿ ನರೇಗಾ ಯೋಜನೆಯಡಿಯಲ್ಲಿ  ನಿರ್ಮಾಣ ಮಾಡಲಾಗಿರುವ ಎರಡು ಚೆಕ್ ಡ್ಯಾಂ ಹಾಗೂ ಕಾಂಕ್ರಿಟ್ ಚರಂಡಿ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ  ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಹಾಗೂ ನಷ್ಟದ ಹಣವನ್ನು ಸರ್ಕಾರಕ್ಕೆ ಜಮಾ ಮಾಡುವಂತೆ ಜಿಪಂನ ಮಹಾತ್ಮಗಾಂಧಿ ನರೇಗಾ ಯೋಜನೆ ಒಂಬುಡ್ಸ್ ಮನ್ ಡಾ.ವಿಷಕಂಠ ಆದೇಶ ಹೊರಡಿಸಿದ್ದಾರೆ.
ಆರ್ ಟಿಐ ಕಾರ್ಯಕರ್ತ ರವಿಕುಮಾರ ಕಂಚನಹಳ್ಳಿ ಅವರು ಕಬ್ಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚನಹಳ್ಳಿ ಗ್ರಾಮದಲ್ಲಿ  ಮನರೇಗಾ ಯೋಜನೆಯಲ್ಲಿ ನಿರ್ಮಿಸಿದ್ದ ಎರಡು ಚೆಕ್ ಡ್ಯಾಂ ಹಾಗೂ ಕಾಂಕ್ರಿಟ್ ಚರಂಡಿ ನಿರ್ಮಾಣ ಕಾಮಗಾರಿಯಿಂದ ಕೂಡಿದೆ ಎಂದು ದೂರು ಸಲ್ಲಿಸಿದ್ದರು. 
ಈ ದೂರಿನ ಮೇರೆಗೆ ಒಂಬುಡ್ಸ್ ಮನ್ ವಿಷಕಂಠರವರು ಖುದ್ಧು ಕಾಮಗಾರಿಗಳನ್ನು ಪರಿಶೀಲನೆ ನಡೆಸುವುದರ ಜತೆಗೆ ಜಿಲ್ಲಾ ಗುಣ ನಿಯಂತ್ರಣ ಮಾನಿಟರ್ ಎಚ್ .ಎಸ್ .ರಾಮಕೃಷ್ಣ ರಾವ್ ಅವರು ಸಲ್ಲಿಸಿದ ಮೂರೂ ಕಾಮಗಾರಿಗಳ ಗಣಮಟ್ಟದ ವರದಿಯಲ್ಲಿ ಕಳಪೆ ಗುಣಮಟ್ಟದಿಂದ ಕೂಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ  ಪಿಡಿಒ ವಿರುದ್ಧ ಶಿಸ್ತು ಕ್ರಮ ಮತ್ತು ನಷ್ಟದ ಹಣ 4,14,700 ರು. ವಸೂಲಿಗೆ ಆದೇಶಿಸಿದ್ದಾರೆ.
ಪ್ರಕರಣದ ವಿವರ :
ಕಂಚನಹಳ್ಳಿ ಗ್ರಾಮದಲ್ಲಿ ಮನರೇಗಾ ಯೋಜನೆಯಡಿಯಲ್ಲಿ  ಶಿವಣ್ಣರವರ ಜಮೀನಿನ ಹತ್ತಿರ, ಸಿz್ದÉೀಗೌಡರ ಜಮೀನಿನ ಹತ್ತಿರ ಚೆಕ್ ಡ್ಯಾಂ ಹಾಗೂ ಅಂಗನವಾಡಿ/ಕಾಡಪ್ಪನವರ ಮನೆಯಿಂದ ಗೌರಮ್ಮನವರ ಮನೆವರೆಗೆ ಚರಂಡಿ ಕಾಮಗಾರಿ ಮಾಡಲಾಗಿತ್ತು. ಇವುಗಳು ಕಳಪೆಯಿಂದ ಕೂಡಿರುವುದಾಗಿ ಹಾಗೂ ಚರಂಡಿ ಕಾಮಗಾರಿಯಲ್ಲಿ ಜೆಸಿಬಿ ಬಳಕೆ ಮಾಡಿ ನರೇಗಾ ಕಾರ್ಯಕ್ರಮದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿರುವುದಾಗಿ ಆರ್ ಟಿಐ ಕಾರ್ಯಕರ್ತ ರವಿಕುಮಾರ್ ಆರೋಪಿಸಿದ್ದರು.
ಈ ಸಂಬಂಧ ಪಂಚಾಯತ್ ರಾಜ್ ಇಲಾಖೆ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಒಂಬುಡ್ಸ್ ಮನ್ ಅವರಿಗೆ ದೂರು ಸಲ್ಲಿಸಿದ್ದರು. ದೂರಿನ ಅನ್ವಯ ಒಂಬುಡ್ಸ್ ಮನ್ ವಿಷಕಂಠ ಮತ್ತು ಜಿಲ್ಲಾ ಗುಣ ನಿಯಂತ್ರಣ ಮಾನಿಟರ್ ಎಚ್ .ಎಸ್ .ರಾಮಕೃಷ್ಣ ರಾವ್ ರವರು ಜಂಟಿಯಾಗಿ ಗ್ರಾಪಂಗೆ ತೆರಳಿ ಕಡತ ಹಾಗೂ ಕಾಮಗಾರಿಗಳನ್ನು ಪರಿಶೀಲಿಸಿದ್ದರು.
ಶಿವಣ್ಣನವರ ಜಮೀನಿನ ಹತ್ತಿರದ ಚೆಕ್ ಡ್ಯಾಂ ನಿರ್ಮಾಣದ ಅಂದಾಜು ಮೊತ್ತ 10 ಲP್ಷÀ ರು.ಗಳಲ್ಲಿ 1311 ಮಾನವ ದಿನಗಳನ್ನು ಸೃಜಿಸಿ ಕೂಲಿ 2,93,664 ಮತ್ತು ಸಾಮಗ್ರಿ ವೆಚ್ಚ 4,58,848 ರು. ಸೇರಿ 7,52,512 ರು. ವೆಚ್ಚ ವಾಗಿತ್ತು.
ಸಿz್ದÉೀಗೌಡರ ಜಮೀನಿನ ಹತ್ತಿರ ಸರ್ಕಾರಿ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣಕ್ಕೆ  ಅಂದಾಜು ಮೊತ್ತ 10 ಲP್ಷÀ ಗಳ ಪೈಕಿ 6,25,106 ವೆಚ್ಚ  (1070 ಮಾನವ ದಿನಗಳು)ಮಾಡಿರುವುದು. ಚರಂಡಿ ಕಾಮಗಾರಿಗೆ 1650 ಮಾನವ ದಿನಗಳನ್ನು ಸೃಜಿಸಿ 9,95,598 ರು. ವೆಚ್ಚ ಮಾಡಲಾಗಿತ್ತು.
ಮೂರೂ ಕಾಮಗಾರಿಗಳಲ್ಲಿ ಸಿಮೆಂಟು ಮತ್ತು ಕಬ್ಬಿಣ ಖರೀದಿಯಲ್ಲಿ ಪಾರದರ್ಶಕ ನಿಯಮ ಉಲ್ಲಂಘಿಸಿರುವುದು, ಶೇ.10ರಷ್ಟು ಗುತ್ತಿಗೆದಾರರ ಲಾಭಾಂಶವನ್ನು ಒಳಗೊಂಡಿರುವ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ದರಗಳನ್ನು ಅಳವಡಿಸಿ ಹೆಚ್ಚು ಮೊಬಲಗಿಗೆ ಅಂದಾಜು ಪಟ್ಟಿಗಳನ್ನು ಸಿದ್ದಪಡಿಸಿ ತನ್ಮೂಲಕ ಹೆಚ್ಚು ಖರ್ಚು ಭರಿಸಿರುವುದು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ  ಪಂಚಾಯಿತಿ ಅಧಿಕಾರಿಗಳಾದ ಡಿ.ಆರ್ .ವೆಂಕಟರಾಜು ಮತ್ತು ಬಿ.ಬಸವರಾಜು ವಿರುದ್ಧ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999 ಮತ್ತು 2000ರ ಅನ್ವಯ ಶಿಸ್ತು ಕ್ರಮ ಜರುಗಿಸುವಂತೆ ಒಂಬುಡ್ಸ್ ಮನ್ ತಾಲೂಕು ಕಾರ್ಯಕ್ರಮ ಅಧಿಕಾರಿಯಾದ ಕನಕಪುರ ತಾಪಂ ಇಒಗೆ ನಿರ್ದೇಶನ ನೀಡಿದ್ದಾರೆ.
ಅಲ್ಲದೆ, ಕನಕಪುರ ಸಹಾಯಕ ಅಭಿಯಂತರ ಎಂ.ಎನ್ .ಶಶಿಧರ್ ಅವರಿಂದ 1,02,150 ರು., ಸಹಾಯಕ ಕಾರ್ಯಪಾಲಕ ಅಭಿಯಂತರ ಕುಮಾರ್ 83,338 ರು., ಗ್ರಾಪಂ ಅಧ್ಯಕ್ಷರಿಂದ 18,810 ರು., ಪಿಡಿಒ ಡಿ.ಆರ್ .ವೆಂಕಟರಾಜು ಅವರಿಂದ 1,14,640 ರು.ಹಾಗೂ ತಾಲೂಕು ತಾಂತ್ರಿಕ ಸಂಯೋಜಕ ಬೈಯಪ್ಪ ಅವರಿಂದ 95,830 ರು. ಸೇರಿ ಒಟ್ಟು 4,14,700 ರು. ಗಳನ್ನು ವಸೂಲಿ ಮಾಡಿ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಕರ್ನಾಟಕ ಉದ್ಯೋಗ ಖಾತರಿ ನಿಧಿ ಹೆಸರಿಗೆ ಡಿಡಿ ಮೂಲಕ ಜಮೆ ಮಾಡಿ ವರದಿ ಸಲ್ಲಿಸುವಂತೆ ಆದೇಶ ಹೊರಡಿಸಿದ್ದಾರೆ.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑