Tel: 7676775624 | Mail: info@yellowandred.in

Language: EN KAN

    Follow us :


ಪಾರಂಪರಿಕ ವೈದ್ಯಪದ್ದತಿಗೆ ಸರ್ಕಾರ ಮಾನ್ಯತೆ ನೀಡಲಿ, ಗಾ ನಂ ಶ್ರೀಕಂಠಯ್ಯ

Posted date: 14 Oct, 2019

Powered by:     Yellow and Red

ಪಾರಂಪರಿಕ ವೈದ್ಯಪದ್ದತಿಗೆ ಸರ್ಕಾರ ಮಾನ್ಯತೆ ನೀಡಲಿ, ಗಾ ನಂ ಶ್ರೀಕಂಠಯ್ಯ

ರಾಮನಗರ: ಪಾರಂಪರಿಕ ವೈದ್ಯ ಪದ್ದತಿಗೆ ಮಂಡಳಿ ರಚಿಸಿ, ಎಲ್ಲಾ ಪಾರಂಪರಿಕ ವೈದ್ಯರಿಗೆ ವೈದ್ಯ ಮಾನ್ಯತೆ ಮತ್ತು ಸೌಲಭ್ಯಗಳನ್ನು ಒದಗಿಸಿ ಸರ್ಕಾರ ಮಾನ್ಯತೆ ದೊರಕಿಸಿಕೊಡಬೇಕು ಎಂದು ಪಾರಂಪರಿಕ ವೈದ್ಯ ಪರಿಷತ್-ಕರ್ನಾಟಕದ ಗೌರವ ಉಪಾಧಕ್ಷ ಗಾ.ನಂ.ಶ್ರೀಕಂಠಯ್ಯ ಆಗ್ರಹಿಸಿದರು. ಅವರು ನಗರದ ಹೊರವಲಯದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಬಿಜಿಎಸ್ ವರ್ಲ್ಡ್ ಸ್ಕೂಲ್‌ನಲ್ಲಿ ಪಾರಂಪರಿಕ ವೈದ್ಯ ಪರಿಷತ್ - ಕರ್ನಾಟಕ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ , ಕರ್ನಾಟಕ ಜಾನಪದ ವಿಶ್ವವಿದ್ಯಾಲಯಗಳು ಸಂಯುಕ್ತವಾಗಿ ಹಮ್ಮಿಕೊಂಡಿದ್ದ ೧೩ ನೇ ರಾಷ್ಟ್ರೀಯ ಪಾರಂಪರಿಕ ವೈದ್ಯರ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಸ್ಥಳೀಯ ಆರೋಗ್ಯ ಪರಂಪರೆಗಳ ಪುನರುತ್ಥಾನ ಹಾಗೂ ಭಾರತೀಯ ರಾಷ್ಟ್ರೀಯ ಮಟ್ಟ ಪರಿಶೀಲನಾ ಸಮಿತಿಯ ಸಹಯೋಗದಲ್ಲಿ ಪಾರಂಪರಿಕ ವೈದ್ಯರ ಪ್ರಮಾಣಿಕರಣ ನಡೆಯುತ್ತಿದೆ. ಹೀಗೆ ಪ್ರಮಾಣಿಕರಣಗೊಂಡ ವೈದ್ಯರನ್ನು ಆರೋಗ್ಯ ಇಲಾಖೆ ಆಶಾ ಕಾರ್ಯಕರ್ತರ ರೀತಿಯಲ್ಲಿ ನೇಮಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಗುರು ಶಿಷ್ಯ ಪರಂಪರೆಯಂತೆ ಪಾರಂಪರಿಕ ವೈದ್ಯ ಪದ್ದತಿಯನ್ನು ಕಲಿಯಲು ವ್ಯವಸ್ಥೆ ಕಲ್ಪಿಸಿದರೆ, ಈ ಪದ್ದತಿಯೂ ಉಳಿದು ಮನುಕುಲಕ್ಕೆ ಉಪಯುಕ್ತವಾಗುತ್ತದೆ. ಈ ವೈದ್ಯ ಪದ್ದತಿಯು ಮಠಮಾನ್ಯಗಳ ಆಶ್ರಯದಲ್ಲಿ ಉಳಿದು ಬೆಳೆಯುತ್ತಿದೆ, ಭವಿಷ್ಯದ ಹಿತದೃಷ್ಠಿಯಿಂದ ಸರ್ಕಾರದ ನೆರವು ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು. *ಪಾರಂಪರಿಕ ವೈದ್ಯ ಅಭಿವೃದ್ದಿ ಮಂಡಳಿ ಸ್ಥಾಪನೆಗೆ ಒತ್ತಾಯ* ಸಮಾರೋಪ ಸಮಾರಂ‘ದ ಅಧ್ಯಕ್ಷತೆ ವಹಿಸಿದ್ದ ಪಾರಂಪರಿಕ ವೈದ್ಯ ಪರಿಷತ್ - ಕರ್ನಾಟಕದ ಅಧ್ಯಕ್ಷ ನೇರ‌್ಲಿಗೆ ಗುರುಸಿದ್ದಪ್ಪ ಮಾತನಾಡಿ ರಾಜ್ಯದಲ್ಲಿ ಪಾರಂಪರಿಕ ವೈದ್ಯ ಪದ್ದತಿಯನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಪಾರಂಪರಿಕ ವೈದ್ಯ ಅಭಿವೃದ್ದಿ ಮಂಡಳಿ ಸ್ಥಾಪನೆಗೆ ಸರ್ಕಾರವನ್ನು ಒತ್ತಾಯಿಸಿದರು. ಪಾರಂಪರಿಕ ವೈದ್ಯರು ರೋಗಿಗಳಿಗೆ ಅಗತ್ಯವಿರುವ ಚಿಕಿತ್ಸೆಗಾಗಿ ಮೂಲಿಕಾ ಸಸ್ಯಗಳನ್ನು ತಾವೇ ಬೆಳೆದುಕೊಳ್ಳಬೇಕಾದ ಅನಿವಾರ್ಯ ಪರಿಸ್ಥತಿ ಇದೆ. ನೂರಾರು ಉಪಯುಕ್ತ ಸಸ್ಯಗಳು ವಿನಾಶದ ಅಂಚು ತಲುಪಿವೆ. ಅವುಗಳನ್ನು ರಕ್ಷಿಸಿಕೊಳ್ಳಲು ಪ್ರತಿ ಜಿಲ್ಲೆಯಲ್ಲೂ ಕನಿಷ್ಠ ತಲಾ ಒಂದು ಔಷಧ ಸಸ್ಯಗಳ ವನ ಸ್ಥಾಪನೆಗೆ ಸರ್ಕಾರ ಮುಂದಾಗಬೇಕು. ಸರ್ಕಾರ ತಮಗೆ ಅಗತ್ಯ ಭೂಮಿಯನ್ನು ಉಚಿತವಾಗಿ ನೀಡಿದರೆ ಪರಿಷತ್ ಮೂಲಕ ವನ ಸ್ಥಾಪನೆ ಮಾಡುವುದಾಗಿ ತಿಳಿಸಿದರು. ರಾಮನಗರ ಜಿಲ್ಲೆಯಲ್ಲಿ 5 ಎಕರೆ ಭೂಮಿಗಾಗಿ ಬೇಡಿಕೆ ಇಟ್ಟಿದ್ದು, ಜಿಲ್ಲಾಧಿಕಾರಿಗಳು ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು. ಪಾರಂಪರಿಕ ವೈದ್ಯರ ಸಮ್ಮೇಳನಕ್ಕೆ ಆದಿಚುಂಚನಗಿರಿ ಮಠ ಸಹಕರಿಸಿದೆ. ಅನ್ಯ ಮಠಗಳು ಇದೇ ರೀತಿಯ ಸಹಕಾರ ನೀಡಬೇಕು ಎಂದು ಇದೇ ವೇಳೆ ಮನವಿ ಮಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಆಯುಷ್ ಅಧಿಕಾರಿ ಡಾ.ರಾಜಲಕ್ಷ್ಮಿ.ಬಿ.ಎಸ್. ರವರು ಮಾತನಾಡಿ ಜಿಲ್ಲೆಯಲ್ಲಿ ಔಷಧ ಸಸ್ಯಗಳ ವನ ಸ್ಥಾಪನೆಗೆ ಆಯುಷ್ ಇಲಾಖೆವತಿಯಿಂದ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು. ಔಷಧ ಸಸ್ಯಗಳ ವನ ಸ್ಥಾಪನೆ ಮತ್ತು ಪಾರಂಪರಿಕ ವೈದ್ಯರ ಚಟುವಟಿಕೆಗಳಿಗಾಗಿ ಸ್ಥಳಕ್ಕೆ ಬೇಡಿಕೆ ಇಟ್ಟಿದ್ದು , ಈ ವಿಚಾರವನ್ನು ತಾವು ಜಿಲ್ಲಾಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು. *ಕೈಗೊಂಡ ನಿರ್ಣಯಗಳು*: ಪಾರಂಪರಿಕ ವೈದ್ಯರ ೧೩ ನೇ ಸಮ್ಮೇಳನದಲ್ಲಿ ವೈದ್ಯರು ಕೆಲವೊಂದು ನಿರ್ಣಯಗಳನ್ನು ಕೈಗೊಂಡಿದ್ದಾರೆ. ಪಾರಂಪರಿಕ ವೈದ್ಯರ ಮಕ್ಕಳು ವೈಜ್ಞಾನಿಕವಾಗಿ ಪಾರಂಪರಿಕ ವೈದ್ಯಕೀಯ ಅಧ್ಯಯನ ಮಾಡಲು ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಅನುದಾನಿತ ಆಯುಷ್ ಮಹಾವಿದ್ಯಾಲಯಗಳಲ್ಲಿ ಹಾಲಿ ನೀಡುತ್ತಿರುವ ಕೇವಲ ೨ ಸೀಟುಗಳಿಗೆ ಬದಲಾಗಿ ಕೋರ್ಸುಗಳಿಗೆ ಶೇ 2ರಷ್ಟು ಸೀಟುಗಳನ್ನು ಮೀಸಲಿಡಬೇಕು. ಆಯುರ್ವೇದ ಎಂ.ಡಿ. ಪದವಿಗೆ ಸರ್ಕಾರಿ ಕೋಟಾದಡಿಯಲ್ಲಿ ಶೇಕಡಾ ೨ ಸೀಟು ಮೀಸಲಿಡಬೇಕು. ಸದರಿ ವೈದ್ಯ ಪದ್ದತಿಯಲ್ಲಿ ಸಂಶೋಧನೆ ಮತ್ತು ತರಬೇತಿಗಾಗಿ ಕೇಂದ್ರಗಳನ್ನು ಸ್ಥಾಪಿಸಬೇಕು. ಪಾರಂಪರಿಕ ವೈದ್ಯ ಪದ್ದತಿ ಉಳಿವಿಗಾಗಿ ಪ್ರತಿ ವರ್ಷ ಆಯವ್ಯಯದಲ್ಲಿ ಕನಿಷ್ಠ ೫೦ ಲಕ್ಷ ರೂಗಳನ್ನು ಮೀಸಲಿಡಬೇಕು. ಮೂಲಿಕಾ ವನಗಳ ಸ್ಥಾಪನೆಗೆ ಭೂಮಿ ಉಚಿತವಾಗಿ ನೀಡಬೇಕು. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಕಚೇರಿ ಸ್ಥಾಪನೆ, ಚಿಕಿತ್ಸಾ ಘಟಕ ಸ್ಥಾಪನೆಗೆ ಅಗತ್ಯ ನೆರವು ಕೊಡಬೇಕು. 60 ವರ್ಷ ದಾಟಿದ ಪಾರಂಪರಿಕ ವೈದ್ಯರಿಗೆ ಮಾಶಾಸನ ನೀಡಬೇಕು. ಶಾಲೆಗಳ ಪಠ್ಯ ಕ್ರಮದಲ್ಲಿ ಔಷಧ ಸಸ್ಯಗಳ ಬಗ್ಗೆ ಅರಿವು ಮೂಡಿಸುವ ಪಾಠಗಳನ್ನು ಅಳವಡಿಸಬೇಕು. ೨೦೨೦ ನೇ ಸಾಲಿನಲ್ಲಿ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಪಾರಂಪರಿಕ ವೈದ್ಯರ ಸಮ್ಮೇಳನವನ್ನು ಆಯೋಜಿಸಲು ಉದ್ದೇಶಿಸಿದ್ದು, ಸರ್ಕಾರ ೫೦ ಲಕ್ಷ ರೂ ಅನುದಾನ ನೀಡಬೇಕು ಎಂಬ ನಿರ್ಣಯಗಳನ್ನು ಕೈಗೊಂಡಿದೆ. ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಮುಖ್ಯಸ್ಥ ಶ್ರೀ ಅನ್ನದಾನೇಶ್ವರ ಸ್ವಾಮೀಜಿ, ಕನಕಪುರ ದೇಗುಲ ಮಠದ ಚನ್ನಬಸವ ಸ್ವಾಮೀಜಿ, ಇರಕಲ್ ಮಠದ ಬಸವ ಪ್ರಸಾದ ಸ್ವಾಮೀಜಿ, ಹುಕ್ಕೇರಿ ಮಠದ ಸ್ವಾಮೀಜಿ, ಕನಕಪುರದ ಮೂರ್ತಿ ಆನಂದ ಸ್ವಾಮೀಜಿ ಉಪಸ್ಥಿತರಿದ್ದರು. ಶಿಕ್ಷಕಿ ಶೈಲಾಶ್ರೀನಿವಾಸ ಕಾರ್ಯಕ್ರಮ ನಿರೂಪಣೆ ಮಾಡಿದರು. .............. *ಹಾವು ಕಚ್ಚಿದ ವ್ಯಕ್ತಿಯ ಚಿಕಿತ್ಸೆಗೆ ಓಡೋಡಿ ಬಂದ ಪಾರಂಪರಿಕ ವೈದ್ಯರು!* ರಾಮನಗರ: ಇತ್ತ ಪಾರಂಪರಿಕ ವೈದ್ಯರ ಸಮ್ಮೇಳನದ ಹೊತ್ತಿನಲ್ಲೇ ನೆರೆದಿದ್ದ ಪಾರಂಪರಿಕ ವೈದ್ಯರಿಗೆ ಸವಾಲೊಂದು ಎದುರಾಗಿ ಪರಿಣಾಮಕಾರಿ ಚಿಕಿತ್ಸೆ ನೀಡಿದ ಪ್ರಸಂಗ ನಡೆಯಿತು. ಸಮಾರೋಪ ಸಮಾರಂಭ ಆರಂಭವಾದ ಕೆಲ ಹೊತ್ತಿನಲ್ಲೇ ವ್ಯಕ್ತಿಯೊಬ್ಬರಿಗೆ ಹಾವು ಕಡಿದ ವಿಚಾರ ಗೊತ್ತಾಗಿ, ೧0-೧೫ ಪಾರಂಪರಿಕ ವೈದ್ಯರು ವ್ಯಕ್ತಿಯ ನೆರವಿಗೆ ಓಡಿದರು. ಸಮ್ಮೇಳನ ನಡೆಯುತ್ತಿದ್ದ ಬಿಜಿಎಸ್ ವರ್ಲ್ಡ್ ಸ್ಕೂಲ್ ಬಳಿಯ ಅರಣ್ಯ ಇಲಾಖೆಯ ಸಸ್ಯಗಾರದಲ್ಲಿ ಮದ್ದೂರು ತಾಲೂಕು ಬ್ಯಾಲದಕರೆ ಗ್ರಾಮದ ಶಿವನಂಜಯ್ಯ ಹುಲಿಯೂರು ದುರ್ಗದಲ್ಲಿ ಫಾರೆಸ್ಟ್ ವಾಚರ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು, ಸಸಿಗಳನ್ನು ತುಂಬಿಕೊಂಡು ಹೋಗಲು ರಾಮನಗರಕ್ಕೆ ಆಗಮಿಸಿದ್ದರು. ಸಸಿಗಳನ್ನು ವಾಹನಕ್ಕೆ ಲೋಡ್ ಮಾಡುವ ಸಂದರ್ಭದಲ್ಲಿ ಹಾವೊಂದು ಕಚ್ಚಿದೆ. ತಕ್ಷಣ ಎದುರಿನ ಕಟ್ಟಡದಲ್ಲಿ ನಡೆಯುತ್ತಿದ್ದ ಸಮ್ಮೇಳನಕ್ಕೆ ಆತನನ್ನು ಇತರರು ಕರೆತಂದರು. ನಿತ್ರಾಣಗೊಳ್ಳುತ್ತಿದ್ದ ಆತನಿಗೆ ಧೈರ್ಯ ತುಂಬಿದ ಗುಲ್ಬರ್ಗದ ಪಾರಂಪರಿಕ ವೈದ್ಯ ಈರಣ್ಣ ರಾಂಪುರೆ ಮತ್ತು ಹಾಸನದ ಯೋಗೇಶ್ ಪಂಡಿತ್ ಮಂತ್ರ ಹಾಕಿ ಚಿಕಿತ್ಸೆ ಆರಂಭಿಸಿದರು. ಕೆಲವೇ ಕ್ಷಣಗಳಲ್ಲಿ ಶಿವನಂಜಯ್ಯ ಚೇತರಿಸಿಕೊಂಡು ನಡೆಯಲಾರಂಭಿಸಿದರು. ಲವಲವಿಕೆ ಆತನಲ್ಲಿ ಮತ್ತೆ ಮನೆ ಮಾಡಿತು. ರಕ್ತದಲ್ಲಿನ ವಿಷ ಇಳಿಸಲು ಇನ್ನಷ್ಟು ಚಿಕಿತ್ಸೆ ಮುಂದುವರಿಸಬೇಕೆಂದು ತಿಳಿಸಿದರು. ಗೋ ರಾ ಶ್ರೀನಿವಾಸ... ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑