Tel: 7676775624 | Mail: info@yellowandred.in

Language: EN KAN

    Follow us :


ಪ್ರೌಢಶಿಕ್ಷಣ ನಿರ್ದೇಶಕ ಮತ್ತು ಸಚಿವರ ವಿರುದ್ದ ದಲಿತಪರ ಸಂಘಟನೆಗಳ ಪ್ರತಿಭಟನೆ.

Posted date: 21 Nov, 2019

Powered by:     Yellow and Red

ಪ್ರೌಢಶಿಕ್ಷಣ ನಿರ್ದೇಶಕ ಮತ್ತು ಸಚಿವರ ವಿರುದ್ದ ದಲಿತಪರ ಸಂಘಟನೆಗಳ ಪ್ರತಿಭಟನೆ.

ಚನ್ನಪಟ್ಟಣ: ದೇಶದ ಸಂವಿಧಾನವನ್ನು ಡಾ ಅಂಬೇಡ್ಕರ್ ರವರೊಬ್ಬರೇ ರಚಿಸಿಲ್ಲ. ಅದಕ್ಕೊಂದು ಸಮಿತಿ ಇದ್ದು ಎಲ್ಲರೂ ಒಗ್ಗೂಡಿ ಸಂವಿಧಾನ ರಚನೆ ಮಾಡಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು ಕಛೇರಿಯ ಪ್ರೌಢಶಿಕ್ಷಣ ನಿರ್ದೇಶಕರಾದ ಉಮಾಶಂಕರ್ ಸುತ್ತೋಲೆ ಹೊರಡಿಸಿದ್ದು ಇದನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು ಸಮರ್ಥನೆ ಮಾಡಿಕೊಂಡಿದ್ದರಿಂದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಮತ್ತು ಅವರು ರಚಿಸಿದ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಉಮಾಶಂಕರ್ ರವರನ್ನು ಗಡಿಪಾರು ಮಾಡಬೇಕು ಮತ್ತು ಸಚಿವರು ರಾಜೀನಾಮೆ ನೀಡಬೇಕು ಎಂದು ತಾಲ್ಲೂಕಿನ ದಲಿತಪರ ಸಂಘಟನೆಗಳ ಒಕ್ಕೂಟ ದ ಪದಾಧಿಕಾರಿಗಳು ಮತ್ತು ಸದಸ್ಯರು ಇಂದು ಅಂಬೇಡ್ಕರ್ ಪ್ರತಿಮೆ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಎಫ್ ಐ ಆರ್ ದಾಖಲಿಸುವಂತೆ ಪೋಲಿಸ್ ಅಧಿಕಾರಿಗಳಿಗೆ ದೂರು ಸಲ್ಲಿಸಿದರು.


ಜೆಡಿಎಸ್ ಮುಖಂಡ ಜಯಕಾಂತ್ ಚಾಲುಕ್ಯ ಮಾತನಾಡಿ ಸಂವಿಧಾನ ನಮಗಷ್ಟೇ (ಈಗ ಪ್ರತಿಭಟನೆ ಮಾಡುತ್ತಿರುವವರು) ಸೀಮಿತವಲ್ಲ. ಸಂವಿಧಾನದ ಅಡಿಯಲ್ಲಿ ಮೀಸಲಾತಿ ಮೂಲಕ ಹಲವಾರು ಹುದ್ದೆಗಳನ್ನು ಗಿಟ್ಟಿಸಿಕೊಂಡಿರುವ ಹಾಗೂ ಜನಪ್ರತಿನಿಧಿಗಳು ತಮ್ಮ ಹುದ್ದೆ ಮತ್ತು ಅಧಿಕಾರಕ್ಕೆ ಅಂಟಿಕೊಳ್ಳದೆ ಬೀದಿಗಿಳಿದು‌ ಹೋರಾಟ ಮಾಡಬೇಕು. ಸಂವಿಧಾನ ಮತ್ತು ಅಂಬೇಡ್ಕರ್ ರವರ ಬಗ್ಗೆ ಹಗುರವಾಗಿ ಮಾತನಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದರು.


ಮಾಜಿ ತಾಲ್ಲೂಕು ಪಂಚಾಯತಿ ಸದಸ್ಯ ಹನುಮಂತಯ್ಯ ಮಾತನಾಡಿ ಸಂವಿಧಾನ ಕತೃ ಅಂಬೇಡ್ಕರ್ ರವರ ಬಗ್ಗೆ ಸಂವಿಧಾನದ ಅರಿವು ಇಲ್ಲದೆ ತಮ್ಮ ಇಷ್ಟಾನುಸಾರ ಮಾತನಾಡಿದ್ದಲ್ಲದೆ ಶಾಲೆಗಳಿಗೆ ಸುತ್ತೋಲೆ ಹೊರಡಿಸಿರುವ ಅಧಿಕಾರಿ ಉಮಾಶಂಕರ್ ರವರ ಐಎಎಸ್‌ ಪದವಿಯನ್ನು ಮರಳಿ ಪಡೆಯಬೇಕು. ಅವರನ್ನು ಶಾಶ್ವತವಾಗಿ ಕೆಲಸದಿಂದ ವಜಾಗೊಳಿಸಬೇಕು ಎಂದರು.


ದಲಿತ ಮುಖಂಡ ಕೋಟೆ ಸಿದ್ದರಾಮಯ್ಯ ಮಾತನಾಡಿ ಉದ್ದೇಶ ಪೂರ್ವಕವಾಗಿ ತಪ್ಪು ಮಾಹಿತಿಯನ್ನು ಮುದ್ರಿಸಿ ಹಂಚಿರುವ ಅಧಿಕಾರಿ ಮತ್ತು ಸಚಿವರ ವಿರುದ್ಧ ಐಪಿಸಿ ಸೆಕ್ಷನ್ ೧೨೪ಎ, ೧೫೩ಬಿ, ೫೦೫, ೪೧೬ ಮತ್ತು ಎಸ್ಸಿಎಸ್ಟಿ ದೌರ್ಜನ್ಯ ಪ್ರತಿಬಂಧಕ ಕಾಯ್ದೆ ೧೯೮೯ ತಿದ್ದುಪಡಿ ೨೦೧೫/೧೬ ಕಾಯಿದೆಯನ್ವಯ ಹಾಗೂ ಇತರೆ ಕಾನೂನಿನ ಅಡಿಯಲ್ಲಿ ದೂರು ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಹಲವಾರು ಮುಖಂಡರು ಧಿಕ್ಕಾರ ಕೂಗಿದರು.


ಪ್ರತಿಭಟನೆಯ ನಂತರ ರಸ್ತೆಗಿಳಿದ ಪ್ರತಿಭಟನಾಕಾರರನ್ನು ಎಎಸ್ಪಿ ರಾಮರಾಜನ್ ರವರು ರಸ್ತೆಯಲ್ಲಿ ಪ್ರತಿಭಟನೆ ಮಾಡದಂತೆ ಸೂಚಿಸಿದ ನಂತರ ಮತ್ತೆ ಪ್ರತಿಮೆ ಎದುರು ಪ್ರತಿಭಟನೆ ಮುಂದುವರೆಸಿ ನಗರ ವೃತ್ತ ನಿರೀಕ್ಷಕ ಗೋವಿಂದರಾಜು ರವರಿಗೆ ದೂರು ಸಲ್ಲಿಸಿದರು.


ಪ್ರತಿಭಟನೆಯ ವೇಳೆ ಗೋವಿಂದರಾಜು, ವೆಂಕಟೇಶ್ (ಶೇಟು) ಸಿದ್ದರಾಮು, ನೀಲಕಂಠನಹಳ್ಳಿ ಭರತ್, ಉಪನ್ಯಾಸಕ ಬಿ ಪಿ ಸುರೇಶ್, ಕುಮಾರ್ ಸೇರಿದಂತೆ ಅನೇಕ ದಲಿತ ಮುಖಂಡರು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑