Tel: 7676775624 | Mail: info@yellowandred.in

Language: EN KAN

    Follow us :


ಕಡೆ ಕಾರ್ತಿಕ ಸೋಮವಾರ ಅದ್ದೂರಿ ಆಚರಣೆ

Posted date: 25 Nov, 2019

Powered by:     Yellow and Red

ಕಡೆ ಕಾರ್ತಿಕ ಸೋಮವಾರ ಅದ್ದೂರಿ ಆಚರಣೆ

ಚನ್ನಪಟ್ಟಣ: ನಗರದ ದೇವಾಲಯಗಳಲ್ಲದೆ ತಾಲ್ಲೂಕಿನ ಬಹುತೇಕ ಗ್ರಾಮದ ಎಲ್ಲಾ ದೇವಾಲಯಗಳಲ್ಲಿ ಕಡೆ ಕಾರ್ತಿಕ ಸೋಮವಾರ ದ ಪೂಜೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.


ನಗರದ ಹೊರವಲಯದಲ್ಲಿರುವ ಮಹದೇಶ್ವರ ದೇವಾಲಯದಲ್ಲಿ ಮೂರ್ತಿಗೆ ವಿಶೇಷ ಅಲಂಕಾರ ಮಾಡಿದ್ದು, ಭಕ್ತ ಸಮೂಹವು ಅನ್ನಸಂತರ್ಪಣೆಯನ್ನು ಹಮ್ಮಿಕೊಂಡಿದ್ದರು. ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಇದೇ ವೇಳೆ ದೇವಾಲಯದ ಸಮೀಪ ಶ್ರೀ ಕೆಂಗಲ್ ಆಂಜನೇಯ ಕಲಾ ಬಳಗದ ವತಿಯಿಂದ ಶ್ರೀ ಮಹದೇಶ್ವರ ಮಹಿಮೆ ನಾಟಕವನ್ನು ಪ್ರದರ್ಶಿಸಿ ಭಕ್ತಾದಿಗಳ ಮನೆಸೂರೆಗೊಂಡರು.


ನಗರದ ಕೋಟೆಯಲ್ಲಿರುವ ರಾಘವೇಂದ್ರ ಮಠ, ವಿಶ್ವೇಶ್ವರ ದೇವಾಲಯ, ವರದರಾಜ ದೇವಾಲಯ, ಕಾಳಮ್ಮ ದೇವಾಲಯ, ಎಂ ಜಿ‌ ರಸ್ತೆಯ ಕಾಶಿ ಈಶ್ವರ ದೇವಾಲಯ, ಮಳೂರಿನ ರಾಮ ಅಪ್ರಮೇಯ ದೇವಾಲಯಗಳಲ್ಲಿ ಬೆಳಿಗ್ಗೆಯಿಂದಲೇ ದೈವ ಮೂರ್ತಿಗಳಿಗೆ ವಿಶೇಷ ಅಲಂಕಾರ ಹಾಗೂ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳುವ ಮೂಲಕ ತಮ್ಮ ಭಕ್ತಿಯನ್ನು ಮೆರೆದರು.


ಬೇವೂರು ತಿಮ್ಮಪ್ಪನ ಬೆಟ್ಟದ ತಿಮ್ಮಪ್ಪ ಸ್ವಾಮಿ ಕೂರಣಗೆರೆ ನರಸಿಂಹ ಸ್ವಾಮಿ, ತಾಲ್ಲೂಕಿನಲ್ಲೇ ಹೆಚ್ಚು ದೇವಾಲಯಗಳಿರುವ ಕೂಡ್ಲೂರು ಗ್ರಾಮ ಹಾಗೂ ಹೆಚ್ಚಿನ ಗ್ರಾಮಗಳಲ್ಲಿ ವಿಶೇಷ ಪೂಜೆಯ ಜೊತೆಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಎಲ್ಲಾ ದೇವಾಲಯಗಳಲ್ಲಿ ಸಂಜೆ ದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಇತಿಹಾಸ ಪ್ರಸಿದ್ಧ ಕೆಂಗಲ್ ಆಂಜನೇಯ ದೇವಾಲಯದಲ್ಲಿ ಸಹ ಬೆಳಿಗ್ಗೆ ಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಮಾಡಿದರು. ಇತ್ತೀಚೆಗೆ ಕಲ್ಯಾಣಿಯಲ್ಲಿ ಓರ್ವ ವ್ಯಕ್ತಿ ಬಿದ್ದು ಸಾವನ್ನಪ್ಪಿದ್ದರಿಂದ ನಗರದ ಮಾತೃಭೂಮಿ ಫೌಂಡೇಶನ್ ವತಿಯಿಂದ ಕಲ್ಯಾಣಿ ಸ್ವಚ್ಛಗೊಳಿಸಿ ಇಂದು ದೀಪಾರಾಧನೆಯನ್ನು ಹಮ್ಮಿಕೊಂಡಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑