Tel: 7676775624 | Mail: info@yellowandred.in

Language: EN KAN

    Follow us :


ಕುಡಿತ ಚಟವಲ್ಲ, ಅದೊಂದು ರೋಗ. ವಾಸಿಗೆ ನಂಬಿಕೆಯೇ ಮುಖ್ಯ ಅನ್ನದಾನೇಶ್ವರನಾಥ ಸ್ವಾಮೀಜಿ

Posted date: 07 Jan, 2020

Powered by:     Yellow and Red

ಕುಡಿತ ಚಟವಲ್ಲ, ಅದೊಂದು ರೋಗ. ವಾಸಿಗೆ ನಂಬಿಕೆಯೇ ಮುಖ್ಯ ಅನ್ನದಾನೇಶ್ವರನಾಥ ಸ್ವಾಮೀಜಿ

ಚನ್ನಪಟ್ಟಣ: ಮದ್ಯಪಾನ ಸೇವಿಸುವುದು ಚಟ ಎನ್ನುವುದಕ್ಕಿಂತ ಅದೊಂದು ರೋಗ ಎನ್ನವುದೇ ಸೂಕ್ತ, ಅದು ಅಮಲುರೋಗ, ಅದನ್ನು ಬಿಡಬೇಕಾದರೆ ನಿಮ್ಮ ಮನಸ್ಸಿನ ಮೇಲೆ ನಂಬಿಕೆ ಇಡಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ದ ರಾಮನಗರ ಶಾಖಾ ಮಠದ ಕಾರ್ಯದರ್ಶಿ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಅಭಿಪ್ರಾಯ ಪಟ್ಟರು. ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ ಮತ್ತಿತರ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ತಾಲ್ಲೂಕಿನ ಕರಿಯಪ್ಪನದೊಡ್ಡಿ ಗ್ರಾಮದ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ೧೪೫೯ ನೇ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದರು.


ಮದ್ಯಪಾನ ಚಟದಿಂದ ಇಡೀ ಸಂಸಾರವಷ್ಟೇ ಅಲ್ಲದೆ ಬಂಧು-ಬಳಗವನ್ನು, ಸ್ನೇಹಿತರನ್ನು ಕಳೆದುಕೊಳ್ಳುವುದರ ಜೊತೆಗೆ ಕಷ್ಟ ಪಟ್ಟು ಸಂಪಾದಿಸಿದ ಹಣ ಮತ್ತು ಜೀವನೋತ್ಸಾಹಗಳನ್ನು ಕಳೆದುಕೊಳ್ಳುತ್ತೇವೆ. ಇದನ್ನು ಧರ್ಮಸ್ಥಳ ಧರ್ಮಾಧಿಕಾರಿಗಳ ಆಶೀರ್ವಾದದಿಂದ ಚನ್ನಾಗಿ ನಡೆಯುತ್ತಿದ್ದು ಚುಂಚನಗಿರಿ ಮಠವು ಸಹ ನಡೆಸುತ್ತಿದೆ, ಕುಡಿತ ಬಿಟ್ಟು ಸಂಸಾರದ ಜೊತೆಗೆ ಸಮಾಜದಲ್ಲಿ ಒಳ್ಳೆಯವರಾಗಿ ಬಾಳಬೇಕೆಂದರು.


ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಮಾತನಾಡಿ, ಇಡೀ ಜಿಲ್ಲೆಯಲ್ಲಿ ಮಹರ್ಷಿ ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದಿಂದ ಕುಡಿತವಷ್ಟೇ ಅಲ್ಲದೆ ಅನೇಕ ರೀತಿಯ ಸವಲತ್ತುಗಳನ್ನು ಕೊಡುವ ಮೂಲಕ ಜಿಲ್ಲೆಯ ಜನರನ್ನು ಸಂಪದ್ಭರಿತ ವಾಗಿ ಮಾಡುತ್ತಿದ್ದಾರೆ.

ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವುದು, ಅಂಗವಿಕಲರಿಗೆ ವೀಲ್ ಚೇರ್ ಮತ್ತಿತರ ಸಾಧನಗಳನ್ನು ನೀಡುವುದು, ವೃದ್ಧ ಮತ್ತು ಅಶಕ್ತ ಮಹಿಳೆಯರಿಗೆ ಮಾಶಾಸನ ನೀಡುತ್ತಿರುವುದಲ್ಲದೆ ಅನೇಕ ಮದ್ಯವರ್ಜನ್ಯ ಶಿಬಿರ ಏರ್ಪಡಿಸಿ ಈಗಾಗಲೆ ಜಿಲ್ಲಾದ್ಯಂತ ೭೨೪ ಮಂದಿ ಯನ್ನು ವ್ಯಸನ ಮುಕ್ತರನ್ನಾಗಿ ಮಾಡಿದ್ದೇವೆ ಎಂದರು.


ಶಿಬಿರದ ಯೋಜನಾಧಿಕಾರಿ ಭಾಸ್ಕರ್ ನಾವೂರ ಮಾತನಾಡಿ ಕುಡಿತ ಚಟವಷ್ಟೇ ಅಲ್ಲದೆ ದೇಹ ಮತ್ತು ಮನಸ್ಸನ್ನು ಹಾಳುಗೆಡುವುತ್ತದೆ. ನಮ್ಮ ಶಿಬಿರಗಳಲ್ಲಿ ಕೇವಲ ಒಂದು ವಾರದಿಂದ ತಿಂಗಳೊಳಗೆ ಕುಡಿತ ಬಿಡಿಸುತ್ತೇವೆ, ಇದನ್ನು ನಾವು ಈಗಾಗಲೇ ಸಾಬೀತು ಮಾಡಿದ್ದು, ಅಪರೂಪಕ್ಕೆ ಕುಡಿಯವರು, ದಿನನಿತ್ಯ ಕುಡಿಯುವವರು ಯಾರೇ ಆಗಲಿ ಅವರ ಚಟವನ್ನು ಬಿಡಿಸಿ ಮುಂದಿನ ಜೀವನಕ್ಕೆ ಮಾರ್ಗದರ್ಶನ ನೀಡಿ ಸಮಾಜದಲ್ಲಿ ಗೌರವದ ಸ್ಥಾನ ನೀಡುತ್ತೇವೆ ಎಂದು ಅಭಯ ನೀಡಿದರು.


ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಗ ಚಂದ್ರಶೇಖರ್, ಜಿಲ್ಲಾ ಜನಜಾಗೃತಿ ವೇದಿಕೆಯ ಚಿಕ್ಕಣ್ಣಯ್ಯ, ದೇವರಾಜೇಗೌಡ ಸೇರಿದಂತೆ ಅನೇಕ ಗಣ್ಯರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑