Tel: 7676775624 | Mail: info@yellowandred.in

Language: EN KAN

    Follow us :


ಸಂಕ್ರಾಂತಿಯಂದು ಅಯ್ಯನಗುಡಿ (ಕೆಂಗಲ್) ಜಾತ್ರೆ, ಸಮಿತಿಯಿಂದ ಸಕಲ ಸಿದ್ದತೆ

Posted date: 12 Jan, 2020

Powered by:     Yellow and Red

ಸಂಕ್ರಾಂತಿಯಂದು ಅಯ್ಯನಗುಡಿ (ಕೆಂಗಲ್) ಜಾತ್ರೆ, ಸಮಿತಿಯಿಂದ ಸಕಲ ಸಿದ್ದತೆ

ಚನ್ನಪಟ್ಟಣ: ಇದೇ ತಿಂಗಳ ಸಂಕ್ರಾಂತಿ ಹಬ್ಬದ ಸಡಗರ ದೊಂದಿಗೆ ನಡೆಯಲಿರುವ ಈ ಬಾರಿಯ ಅಯ್ಯನಗುಡಿ (ಕೆಂಗಲ್) ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಬರುವ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ಸದುದ್ದೇಶದಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದೇವಾಲಯದ ಪ್ರಧಾನ ಅರ್ಚಕ ರವೀಂದ್ರ ಕುಮಾರ್ ರವರು ತಿಳಿಸಿದರು. ಶನಿವಾರ ಅವರು ದೇವಾಲಯದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಜಾತ್ರೆಯಲ್ಲಿ ಸಂಪೂರ್ಣವಾಗಿ ನೀರು ಮತ್ತು ಬೆಳಕಿನ ವ್ಯವಸ್ಥೆ ಕಲ್ಪಿಸಲಾಗಿದ್ದು ಜಾತ್ರೆಗೆ ಬರುವ ಜನ ಜಾನುವಾರುಗಳಿಗೆ ವಿಶೇಷವಾಗಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಅಲ್ಲಲ್ಲಿ ಮಾಡಲಾಗುವುದು. ಎಲ್ಲಾ ಕಡೆಯೂ ನೀರು ಸರಬರಾಜು ಮಾಡಲು ಸೂಕ್ತ ವ್ಯವಸ್ಥೆ ಮಾಡಿಕೊಡಲಾಗಿದೆ ಎಂದು ತಿಳಿಸಿದರು.


*ಜನ ಜಾನುವಾರುಗಳಿಗೆ ಅನುಕೂಲತೆ*

 

ಜಾತ್ರಾ ಮಹೋತ್ಸವದಲ್ಲಿ ಜನ ಮತ್ತು ಜಾನುವಾರುಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಪಶುವೈದ್ಯ ಶಾಲೆಯನ್ನು ತಾತ್ಕಾಲಿಕವಾಗಿ ತೆರೆಯಲಾಗಿದ್ದು, ಪೊಲೀಸ್ ಹೊರ ಠಾಣೆಯನ್ನು ಜಾತ್ರೆ ಮುಗಿಯುವವರೆಗೆ ತೆರೆಯಲಾಗುವುದು. ಅಗ್ನಿಶಾಮಕದಳದ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ದೇವಾಲಯದ ವತಿಯಿಂದ ಕೆಎಸ್ಆರ್ಟಿಸಿ ಸಂಸ್ಥೆಗೆ ಪತ್ರ ಬರೆದಿದ್ದು ರಾಮನಗರ ಮತ್ತು ಚನ್ನಪಟ್ಟಣ ಬಸ್ ನಿಲ್ದಾಣದಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕೋರಲಾಗಿದೆ ಎಂದು ಅವರು ತಿಳಿಸಿದರು.


*ಅನ್ನದಾಸೋಹ*


ಈಗಾಗಲೇ ಪ್ರತಿ ಶನಿವಾರ ದೇವಾಲಯದ ವತಿಯಿಂದ ಅನ್ನದಾಸೋಹ ನಡೆಸಲಾಗುತ್ತಿದ್ದು, ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವದ ವೇಳೆ ಐವತ್ತು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು ಎಲ್ಲಾ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಗುವುದು ಎಂದು ಅವರು ತಿಳಿಸಿದರು‌.


*ಏಳು ದಿನ ನಡೆಯುವ ಜಾತ್ರೆಯ ವಿಶೇಷ ಪೂಜೆಗಳು*


ಏಳುದಿನಗಳು ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಅವರು ಜನವರಿ ೧೫ ರಂದು ನಿತ್ಯಪೂಜೆ ಶಾತುಮೊರೈ, ರಾಷ್ಟ್ರಾಶೀರ್ವಾದ ದಿಂದ ಆರಂಭಗೊಳ್ಳುವ ಜಾತ್ರಾಮಹೋತ್ಸವವು ಜನವರಿ ೧೬ ರಂದು ಸುದರ್ಶನ ಹೋಮ, ಪ್ರಾಕಾರೋತ್ಸವ, ಗರುಡೋತ್ಸವ‌. ಜನವರಿ ೧೭ ರಂದು ಶ್ರೀ ಆಂಜನೇಯ ಸಹಸ್ರನಾಮ ಹೋಮ, ಗಜೇಂದ್ರಮೋಕ್ಷ, ಜನವರಿ ೧೮ ರಂದು ನವಗ್ರಹ ಹೋಮ, ಲಕ್ಷ್ಮಿವೆಂಕಟೇಶ್ವರ ಕಲ್ಯಾಣೋತ್ಸವ, ನವಂಬರ್ ೧೯ ರಂದು ಕೆಂಗಲ್ ರಥೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ ನಡೆಯಲಿದ್ದು ಜನವರಿ ೨೦ ರಂದು ವಸಂತೋತ್ಸವ ನಡೆಯಲಿದೆ. ಜನವರಿ ೨೧ ರಂದು ಕುಂಭಾಭಿಷೇಕ ದೊಂದಿಗೆ ಜಾತ್ರಾ ಮಹೋತ್ಸವ ಮುಕ್ತಾಯವಾಗಲಿದೆ ಎಂದು ತಿಳಿಸಿದರು.


ಸುದ್ದಿಗೋಷ್ಠಿಯಲ್ಲಿ ದೇವಾಲಯದ ಕಾರ್ಯನಿರ್ವಹಣ ಅಧಿಕಾರಿ ಮಹೇಶ್, ಅರ್ಚಕ ಶರತ್ ಮಾರ್, ದೇವಾಲಯ ಸಮಿತಿ ಸದಸ್ಯರು ಮತ್ತು ಮಾಜಿ ಪಾರುಪತ್ತೇದಾರ ಲಕ್ಷ್ಮಿನರಸಿಂಹನ್ ಇನ್ನು ಮುಂತಾದವರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑