ಇಕ್ಬಾಲ್ ಹುಸೇನ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ
ರಾಮನಗರ : ರಾಮನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯು ಪಕ್ಷದ ವರಿಷ್ಠರು ಕೈಗೊಳ್ಳುವ ತೀರ್ಮಾನವಾಗಿದೆ. ಈ ಹಿಂದೆ ನಾಲ್ಕಾರು ಸಭೆಗ ಳನ್ನು ನಡೆಸಿ ಕಾರ್ಯಕರ್ತರ ಅಭಿಪ್ರಾಯ ಪಡೆದು ಈ ತೀರ್ಮಾನಕ್ಕೆ ಬರಲಾಗಿದೆ. ಯಾರೇ ಅಭ್ಯರ್ಥಿಯಾದರು ಎಲ್ಲರೂ ಸಂಘಟಿತರಾಗಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ರಾಮನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಅಭ್ಯರ್ಥಿಯ ಆಯ್ಕೆಗಾಗಿ ಬಿಡದಿಯ ಮ್ಯಾಗ್ನೋ ಲಿಯಾ ರೆಸಾರ್ಟ್ನಲ್ಲಿ ನಿನ್ನೆ ರಾತ್ರಿ ಪಕ್ಷದ ಮುಖಂಡರ ಸಭೆ ನಡೆಸಿ ಮುಂಬರುವ ಚುನಾವ ಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಕ್ಬಾಲ್ ಹುಸೇನ್ ಅವರ ಹೆಸರನ್ನು ಘೋಷಿ ಸಿದರು.
ಡಮ್ಮಿ ಅಭ್ಯರ್ಥಿ ಹಾಕುತ್ತಾರೆ, ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ. ಆದರೆ ಈ ಭಾರಿ ಬಲಿಷ್ಠ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಎಂದ ಡಿ.ಕೆ.ಶಿವಕುಮಾರ್, ಸ್ಥಳೀಯ ಶಾಸಕರು ಕ್ಷೇತ್ರವ ನ್ನೇ ಮರೆತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳಾಗಿವೆ. ಪಕ್ಷದ ಎಲ್ಲಾ ಕಾರ್ಯಕರ್ತರು ಸಂಘಟಿತರಾಗಿ ಜನರ ಮುಂದೆ ಹೋದದ್ದೇ ಆದಲ್ಲಿ ಪಕ್ಷದ ಗೆಲುವು ಖಂಡಿತ ಎಂದು ನುಡಿದರು.
ನಾನಂತು ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದೇವೆ. ಅಧಿಕೃತ ವಾಗಿ ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಮೂಲಕ ಘೋಷ ಣೆಯಾಗಬೇಕಾಗಿದೆ. ಸದ್ಯದಲ್ಲಿಯೇ ಇದು ಕೂಡ ಪ್ರಕಟಣೆ ಯಾಗುತ್ತದೆ ಎಂದ ಸಚಿವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ನ ಎಲ್ಲಾ ಮುಖಂಡರು, ಕಾರ್ಯಕರ್ತರೆಲ್ಲರೂ ಪಕ್ಷದ ಗೆಲುವಿಗಾಗಿ ಶ್ರಮಿಸಬೇಕು ಎಂದರು.
ಸಂಸದ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯರುಗಳಾದ ಸಿ.ಎಂ. ಲಿಂಗಪ್ಪ, ಎಸ್.ರವಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಗಂಗಾಧರ್, ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಸೈಯದ್ ಜಿಯಾವುಲ್ಲಾ, ಟಿಕೇಟ್ ಆಕಾಂಕ್ಷಿ ಎಲ್.ಚಂದ್ರಶೇಖರ್, ಎಂಇಐ ನಿಗಮದ ಅಧ್ಯಕ್ಷರಾದ ಕೆ.ಶೇಷಾದ್ರಿ(ಶಶಿ), ರಾಮ ನಗರ ಯೋಜನಾ ಪ್ರಾಧಿಕಾರದ ಸಿಎನ್ಆರ್ ವೆಂಕಟೇಶ್, ನಗರಸಭೆ ಅಧ್ಯಕ್ಷ ಪಿ.ರವಿಕುಮಾ ರ್, ಕಾಂಗ್ರೆಸ್ನ ಎಲ್ಲಾ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು