Tel: 7676775624 | Mail: info@yellowandred.in

Language: EN KAN

    Follow us :


"ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ" ಯಡಿಯಲ್ಲಿ ಉದ್ಯಮ ಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ

Posted date: 02 Mar, 2018

Powered by:     Yellow and Red

ರಾಮನಗರ: "ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ" ಯ ಸದ್ಬಳಕೆ ಮಾಡಿಕೊಂಡು ಜ್ಞಾನ ಮತ್ತು ಕೌಶಲ್ಯಗಳನ್ನು ಗಳಿಸಿ ಯಶಸ್ವಿ ಉದ್ದಿಮೆದಾರರಾಗಿ ಸಾಧನೆ ಮಾಡಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಹೊನ್ಮನೆ ಹೇಳಿದರು.
ತಾಲ್ಲೂಕಿನ ಕೆನರಾ ಬ್ಯಾಂಕ್ ಪ್ರಾಯೋಜಿತ ಎ.ಡಿ.ಪೈ ಗ್ರಾಮೀಣ ಅಭಿವೃದ್ಧಿ ತರಬೇತಿ ಸಂಸ್ಥೆ, ವಾಜರಹಳ್ಳಿ ಇವರು ಆಯೋಜಿಸಿದ್ದ ""ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ" ಅಡಿಯಲ್ಲಿ ಹತ್ತು ದಿನಗಳ ಉದ್ಯಮ ಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
 ಅಭ್ಯರ್ಥಿಗಳು ತಾವು ಸ್ವ ಉದ್ಯೋಗದಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ಇನ್ನೂ ಹಲವಾರು ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗವನ್ನು ತಮ್ಮ ಉದ್ದಿಮೆಯಲ್ಲಿ ನೀಡಿ ಕೇಂದ್ರ ಸರ್ಕಾರದ ಯೋಜನೆಯ ಉದ್ದೇಶವನ್ನು ಈಡೇರಿಸಬೇಕೆಂದು ಹಾಗೂ ಅವಶ್ಯಕತೆಗಳಿಗೆ ತಕ್ಕಂತೆ ಸಾಲ ಮಾಡಿ ಉದ್ದಿಮೆಯಲ್ಲಿ ತೊಡಗಿಸಿ ಎಂದು ಹೇಳಿದರು.
ಕಾರ್ಯಕ್ರಮದ ರಾಮನಗರ ಲೀಡ್ ಬ್ಯಾಂಕ್ ಮ್ಯಾನೇಜರ್ ರವೀಂದ್ರ ಎಂ ಮಾತನಾಡಿ ಕೇಂದ್ರ ಸರ್ಕಾರದ "ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ"ಯು ಸ್ವ ಉದ್ಯೋಗ ಮಾಡಲು ಆಸಕ್ತಿ ಇರುವ ನಿರುದ್ಯೋಗ ಯುವಕ ಯುವತಿಯರಿಗೆ ಒಂದು ಉತ್ತಮ ಯೋಜನೆಯಾಗಿದ್ದು, ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಉದ್ಯಮ ಘಟಕದ ಸ್ಥಾಪನೆ ಮಾಡಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ಹಿತವಚನ ನೀಡಿದರು ಮತ್ತು ಬ್ಯಾಂಕಿನಿಂದ ಪಡೆದ ಸಾಲವನ್ನು ಸರಿಯಾಗಿ ಮರುಪಾವತಿ ಮಾಡಬೇಕೆಂದು ಸಲಹೆ ನೀಡಿದರು.
ರಾಮನಗರ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಗುರುಸಿದ್ದಯ್ಯ ಎಂ ಮಾತನಾಡಿ ಬ್ಯಾಂಕ್ ಸಾಲವನ್ನು ಸರಿಯಾಗಿ ಕಂತಿನ ಪ್ರಕಾರ ಮರುಪಾವತಿ ಮಾಡಿದಲ್ಲಿ ಬ್ಯಾಂಕ್‍ನಿಂದ ಇನ್ನೂ ಹೆಚ್ಚಿನ ಮೊತ್ತದ ಸಾಲವನ್ನು ಪಡೆದುಕೊಳ್ಳಲು ಅವಕಾಶವಿದೆ. ಅದರ ಸೌಲಭ್ಯವನ್ನು ಪಡೆದುಕೊಂಡು ಯಾವುದೇ ಉದ್ದಿಮೆ ಪ್ರಾರಂಭಿಸಿದರೂ ಆ ಉದ್ದಿಮೆಯಲ್ಲಿ ತಲ್ಲೀನರಾಗಬೇಕೆಂದು ಕಿವಿ ಮಾತು ಹೇಳಿದರು. ಎಲ್ಲಾ ಅಭ್ಯರ್ಥಿಗಳು ಉದ್ಯಮದಲ್ಲಿ ಯಶಸ್ಸನ್ನು ಗಳಿಸಲೆಂದು ಹಾರೈಸಿದರು.
ಎ.ಡಿ.ಪೈ ಗ್ರಾಮೀಣ ಅಭಿವೃದ್ಧಿ ತರಬೇತಿ ಸಂಸ್ಥೆಯ ತರಬೇತಿ ಸಂಯೋಜಕರು ಹರೀಶ್ ಕುಮಾರ್ ಮಾತನಾಡಿ ಉದ್ಯಮ ಸ್ಥಾಪನೆಯಲ್ಲಿ ಏನಾದರೂ ಸಮಸ್ಯೆಗಳಿದ್ದಲ್ಲಿ ಸಂಸ್ಥೆಗೆ ಬಂದು ಮಾರ್ಗದರ್ಶನ ಪಡೆಯಬೇಕೆಂದು ಅಭ್ಯರ್ಥಿಗಳಲ್ಲಿ ಕೋರಿದರು.
ನಂತರ ಶಿಬಿರಾರ್ಥಿಗಳಿಗೆ ತರಬೇತಿ ಪ್ರಮಾಣ ಪತ್ರಗಳ ವಿತರಣೆ ಮಾಡಲಾಯಿತು.
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑