Tel: 7676775624 | Mail: info@yellowandred.in

Language: EN KAN

    Follow us :


*ತಾಲೂಕಿನಾದ್ಯಂತ ಹದಿನೆಂಟು ಮಂದಿ ಗೋಮಾಳ ಒತ್ತುವರಿದಾರರ ವಿರುದ್ದ ದೂರು ದಾಖಲಿಸಿದ ತಹಶಿಲ್ದಾರ್*

Posted date: 12 Feb, 2020

Powered by:     Yellow and Red

*ತಾಲೂಕಿನಾದ್ಯಂತ ಹದಿನೆಂಟು ಮಂದಿ ಗೋಮಾಳ ಒತ್ತುವರಿದಾರರ ವಿರುದ್ದ ದೂರು ದಾಖಲಿಸಿದ ತಹಶಿಲ್ದಾರ್*

ಚನ್ನಪಟ್ಟಣ:ಫೆ/೧೦/೨೦೨೦/ಸೋಮವಾರ.


ತಾಲ್ಲೂಕಿನ ಹಲವಾರು ಕಡೆ ನಕಲಿ ದಾಖಲೆಗಳನ್ನು ಸೃಷ್ಟಿಮಾಡಿ ಸರ್ಕಾರಿ ಗೋಮಾಳವನ್ನು ಅಕ್ರಮವಾಗಿ ಖಾತೆ ಮಾಡಿಸಿಕೊಂಡಿರುವ ಹದಿನೆಂಟು ಮಂದಿಯ ವಿರುದ್ದ ತಹಶಿಲ್ದಾರ್ ಸುದರ್ಶನ್ ಅವರು ಶುಕ್ರವಾರ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ತಾಲ್ಲೂಕಿನ ಮೆಣಸಿಗನಹಳ್ಳಿ ಗ್ರಾಮದ ಪುನೀತ್ ಕುಮಾರ್‌ ಎಂಬುವವರು ತಾಲ್ಲೂಕು ಕಛೇರಿಯಲ್ಲಿ ತಮ್ಮ ಜಮೀನಿನ ಸರ್ವೇ ನಂಬರ್ ಬದಲಾವಣೆಯಾಗಿರುವ ಬಗ್ಗೆ ಅರ್ಜಿ ಸಲ್ಲಿಸಿದ್ದರು. ಇದರ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿದಾಗ ಸರ್ಕಾರಿ ಗೋಮಾಳ ಒತ್ತುವರಿಯಾಗಿ, ಅಕ್ರಮವಾಗಿ ಖಾತೆಯಾಗಿರುವುದು ಬೆಳಕಿಗೆ ಬಂದಿದೆ. ಇದರಲ್ಲಿ ಭಾಗಿಯಾಗಿರುವರನ್ನು ಪತ್ತೆ ಮಾಡಿದ ದಂಡಾಧಿಕಾರಿಗಳು ಹದಿನೆಂಟು ಮಂದಿಯ ವಿರುದ್ಧ ದೂರು ನೀಡಿದ್ದಾರೆ.


ತಾಲ್ಲೂಕಿನ ಗರಕಹಳ್ಳಿ, ಅಂಕುಶನಹಳ್ಳಿ, ಅಬ್ಬೂರು, ತಗಚಗೆರೆ, ಕನ್ನಮಂಗಲ, ಮೆಣಸಿಗನಹಳ್ಳಿ, ಶ್ಯಾನುಭೋಗನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಸರ್ಕಾರಿ ಗೋಮಾಳವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಖಾತೆ ಮಾಡಿಸಿಕೊಳ್ಳಲಾಗಿದೆ.

ಇದರಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಹ ಭಾಗಿಯಾಗಿರುವುದು ಪತ್ತೆಯಾಗಿದೆ ಎಂದು ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.


೧೯೭೬ ರಿಂದ ೨೦೧೯ ನೇ ಸಾಲಿನ‌ವರೆಗೆ ಸರ್ಕಾರಿ ಗೋಮಾಳ, ಜಮೀನಿನ ಮೂಲ ದಾಖಲಾತಿಗಳನ್ನು ಪರಿಶೀಲನೆ ನಡೆಸಲಾಗಿದೆ. ಹಲವಾರು ಗ್ರಾಮಗಳ ಸರ್ಕಾರಿ ಗೋಮಾಳದ ಮೂಲ ಮಂಜೂರಾತಿ ಕಡತದಲ್ಲಿ ಕೈಬರಹದ ಪಹಣಿಗಳು, ಮ್ಯುಟೇಷನ್ ಗಳನ್ನು ಸಂಪೂರ್ಣ ಅಕ್ರಮವಾಗಿ ಸೃಷ್ಟಿ ಮಾಡಲಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಈಗಾಗಲೇ ಈ ಪ್ರಕರಣವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಅಕ್ರಮವಾಗಿ ಖಾತೆ ಮಾಡಿಕೊಂಡಿರುವವರು ಹಾಗೂ ಅದರಲ್ಲಿ ಭಾಗಿಯಾಗಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ‌ ನೀಡಿದ್ದಾರೆ. ಹಾಗಾಗಿ ಇದರ ಬಗ್ಗೆ ಪರಿಶೀಲನೆ ನಡೆಸಿ ಹದಿನೆಂಟು ಮಂದಿಯ ಮೇಲೆ ಪ್ರಕರಣ ದಾಖಲಿಸಿರುವುದಾಗಿ ತಹಶಿಲ್ದಾರ್ ಸುದರ್ಶನ್ ರವರು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑