Tel: 7676775624 | Mail: info@yellowandred.in

Language: EN KAN

    Follow us :


ಚನ್ನಪಟ್ಟಣ ದಲ್ಲಿ ಪಂಚಲಿಂಗ, ಶಿವರಾತ್ರಿ ಯಂದು ದರ್ಶಿಸಿ ಪುಣ್ಯವಂತರಾಗಿ

Posted date: 21 Feb, 2020

Powered by:     Yellow and Red

ಚನ್ನಪಟ್ಟಣ ದಲ್ಲಿ ಪಂಚಲಿಂಗ, ಶಿವರಾತ್ರಿ ಯಂದು ದರ್ಶಿಸಿ ಪುಣ್ಯವಂತರಾಗಿ

ಹೊಳೆಯ ಆಚೆ ಇರುವ ಕಲ್ಯನಾಥೇಶ್ವರ ಸ್ವಾಮಿ

ಚನ್ನಪಟ್ಟಣ:ಫೆ/೨೧/೨೦/ಶುಕ್ರವಾರ.


ಮಹಾಶಿವರಾತ್ರಿ ಹಬ್ಬ ಭಕ್ತಿ ಭಾವಗಳ, ವಿಜೃಂಭಣೆಯ ಹಬ್ಬ, ಇಡೀ ದೇಶದಲ್ಲಿ ಹಿಂದೂ‌ಬಾಂಧವರು ಆಚರಿಸುವ ಈ‌ ಹಬ್ಬ ಲಿಂಗ ದ ರೂಪದ ಶಿವನ ಆಲಯಗಳಲ್ಲಿ ವಿಶೇಷವಾಗಿ ಆಚರಿಸಲಾಗುತ್ತದೆ.

ಕರ್ನಾಟಕದ ತಲಕಾಡು ಪಂಚಲಿಂಗ ಸೇರಿದಂತೆ ನಾಡಿನ ಉದ್ದಗಲಕ್ಕೂ ಶಿವನ ಶಿವರಾತ್ರಿ ಜಾಗರಣೆಯನ್ನು ಹಮ್ಮಿಕೊಂಡು ಆರಾಧಿಸುತ್ತಾರೆ.


ಚನ್ನಪಟ್ಟಣ ನಗರ ಮತ್ತು ಕೂಡ್ಲೂರು ಗ್ರಾಮದಲ್ಲಿ ಪಂಚಲಿಂಗ


ನಗರದ ಚಿಕ್ಕಮಳೂರು ಗ್ರಾಮದ ಹೊಳೆಯಿಂದ ಈಚೆ ಇರುವ *ಶ್ರೀ ಅರ್ಕೇಶ್ವರ* ದೇವಾಲಯದ ಲಿಂಗವೂ ನಗರದಲ್ಲಿ ಭೂಮಿಯಿಂದ ಮೂಡಿದ‌‌ ಮೊದಲ ಲಿಂಗ ವಾಗಿದ್ದು ಈ ದಿನ ವಿಶೇಷ ಅಲಂಕಾರ, ಹಲವಾರು ಪೂಜಾ ವಿಧಿವಿಧಾನಗಳು ಜರುಗುತ್ತಿವೆ, ದರ್ಶನಗೈದ ಭಕ್ತರಿಗೆ ಪ್ರಸಾದದ ಜೊತೆಗೆ ಅನ್ನದಾನ ಏರ್ಪಡಿಸಲಾಗಿದೆ.



ನಂತರದ್ದು ಶ್ರೀ ಕಲ್ಯನಾಥೇಶ್ವರ ಸ್ವಾಮಿ. ಈ ಲಿಂಗ ದೇವರನ್ನು ಕಣ್ವ ಮಹಾ ಋಷಿಗಳ ಶಿಷ್ಯನ ತಪಸ್ಸಿಗೆ ಒಲಿದ ಶಿವನ ನೆನಪಿಗಾಗಿ ಕಣ್ವ ಋಷಿಗಳ ಶಿಷ್ಯಂದಿರು ಪ್ರತಿಷ್ಠಾಪಿಸಿದ್ದಾರೆ ಎಂಬ ಉಲ್ಲೇಖವಿದ್ದು ಈ ದಿನ‌ ವಿಶೇಷ ಅಲಂಕಾರ ಮತ್ತು ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ.



ನಗರದ ಕೋಟೆ ಪ್ರದೇಶದಲ್ಲಿರುವ ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯ ಲಿಂಗವು ನಾಲ್ಕು ನೂರು ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿದ್ದು, ನೇರವಾಗಿ ಪುಣ್ಯಕ್ಷೇತ್ರ ಕಾಶಿಯಿಂದಲೇ ತಂದು ಪ್ರತಿಷ್ಠಾಪಿಸಲಾಗಿದೆ.



ಅಂದಿನ ಮೈಸೂರು ಮಹಾರಾಜರು  ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಾಗುವಾಗ ತಪ್ಪದೆ ದರ್ಶಿಸಿ ಹೋಗುತ್ತಿದ್ದರಂತೆ. ಇಂತಹ ದೇವಾಲಯದಲ್ಲಿ ಶಿವರಾತ್ರಿ ಅಂಗವಾಗಿ ಸಮಿತಿಯ ಪದಾಧಿಕಾರಿಗಳು ವಿಶೇಷ ಪೂಜೆ ಪುನಸ್ಕಾರಗಳ ಜೊತೆಗೆ ಇಂದು ಸಂಜೆಯಿಂದ ನಾಳೆ ಬೆಳಿಗ್ಗೆ ವರೆಗೂ‌ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ನಾಳೆ ಬೆಳಿಗ್ಗೆ ಹದಿನೈದು ಸಾವಿರ ಮಂದಿಗೆ ಅನ್ನ ಸಂತರ್ಪಣೆ ಏರ್ಪಡಿಸಿದ್ದಾರೆ.


ಪೇಟೆ ಬೀದಿಯಲ್ಲಿರುವ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಾಲಯದಲ್ಲಿರುವ ಲಿಂಗವೂ ಸಹ ಪುರಾಣ ಪ್ರಸಿದ್ದವಾಗಿದ್ದು ಬೃಂದಾವನ ನೆನಪಿಸುವಂತೆ ಇದೆ. ಇಲ್ಲಿ ದಿನಂಪ್ರತಿ ವಿವಿಧ ಪೂಜೆ, ಅಭಿಷೇಕ ದ ಜೊತೆಗೆ ಇಂದು ವಿಶೇಷವಾಗಿ ಅಲಂಕರಿಸಿ ಪೂಜೆ ನೆರವೇರಿಸಲಾಯಿತು. ಇಲ್ಲಿಯೂ ಸಹ ಭಕ್ತಾದಿಗಳಿಗೆ ಉಚಿತ ಪ್ರಸಾದ ಏರ್ಪಡಿಸಿದ್ದಾರೆ.



ನಗರ ವ್ಯಾಪ್ತಿಯ ದೊಡ್ಡಮಳೂರು ಗ್ರಾಮದ ಶ್ರೀ ಪಾರ್ವತಿ ಕೈಲಾಸನಾಥ ಸ್ವಾಮಿ ದೇವಾಲಯದಲ್ಲಿ ಕೈಲಾಸನಾಥ ಲಿಂಗವನ್ನು ಪ್ರತಿಷ್ಠಾಪಿಸಲಾಗಿದ್ದು ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು, ಲಿಂಗಕ್ಕೆ ವಿಶೇಷ ಅಲಂಕಾರ ಮಾಡಲಾಗಿದ್ದು ಟ್ರಸ್ಟ್ ಪದಾಧಿಕಾರಿಗಳಿಂದ ಪ್ರಸಾದ ವಿತರಣೆ ಮಾಡಲಾಯಿತು.



ನಗರದ ಹೊರವಲಯದಲ್ಲಿರುವ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯ ನೂತನ ಕಾರ್ಯ ನೆನೆಗುದಿಗೆ ಬಿದ್ದಿರುವುದರಿಂದ ತಾತ್ಕಾಲಿಕ ಪುಟ್ಟ ಜಾಗದಲ್ಲಿ ಸ್ವಾಮಿ ಗೆ *ತರಕಾರಿಗಳಿಂದ ಅಲಂಕರಿಸಲಾಗಿದ್ದು* ದೇವರ ಲಿಂಗವು ಭಕ್ತಾಧಿಗಳಿಗೆ ಆಕರ್ಷಣೀಯವಾಗಿದ್ದು ಕಣ್ತುಂಬಿಕೊಂಡರು.



ಶಿವಪ್ಪನಮಠ ದ ಶ್ರೀ ಈಶ್ವರ ಸ್ವಾಮಿ ಗೆ ಹೂವಿನ ಅಲಂಕಾರ ಮಾಡಲಾಗಿದ್ದು ಬರುವ ಭಕ್ತಾಧಿಗಳಿಗೆ ಇಂದು ಸಂಜೆ ಪ್ರಸಾದ ರೂಪದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ.



ಪಂಚಲಿಂಗಕ್ಕೆ ಹೆಸರುವಾಸಿಯಾದ ಮತ್ತೊಂದು ಕ್ಷೇತ್ರ ಕೂಡ್ಲೂರು ಗ್ರಾಮದ ಶ್ರೀ ಮಂಗಳೇಶ್ವರ ಸ್ವಾಮಿ ಇಲ್ಲಿ ಐದು ಲಿಂಗಗಳ ಪ್ರತ್ಯೇಕ ದೇವಾಲಯಗಳಿದ್ದು ವಿಶೇಷ ಅಲಂಕಾರ ಹಾಗೂ ಪೂಜೆಯನ್ನು ಭಕ್ತಾಧಿಗಳ ಸಮ್ಮುಖದಲ್ಲಿ ನೆರವೇರಿಸಲಾಯಿತು.


ತಾಲ್ಲೂಕಿನ ನುಣ್ಣೂರು ಮತ್ತು ನೇರಳೂರು ಗ್ರಾಮದ ನಡುವೆ ಇರುವ *ಶ್ರೀ ವೈದ್ಯನಾಥೇಶ್ವರ ಸ್ವಾಮಿ* ದೇವಾಲಯದಲ್ಲಿಯೂ ಸಹ ವಿಶೇಷ ಪೂಜೆ ಏರ್ಪಡಿಸಿ ದೇವರಿಗೆ ಸಮರ್ಪಿಸಿ ಭಕ್ತಾಧಿಗಳಿಗೆ ಪ್ರಸಾದ ವಿತರಿಸಲಾಯಿತು.


ಶಿವನ ದೇವಾಲಯ ಗಳಲ್ಲದೆ ಬಹುತೇಕ ಎಲ್ಲಾ ದೇವಾಲಯದ ವಿಗ್ರಹಗಳಿಗೂ ಇಂದು ವಿಶೇಷ ಅಲಂಕಾರ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑