Tel: 7676775624 | Mail: info@yellowandred.in

Language: EN KAN

    Follow us :


ಕೆಂಗಲ್ ಆಂಜನೇಯ ದೇವಾಲಯದ ಬಳಿಯ ಅನಧಿಕೃತ ಅಂಗಡಿಗಳ ತೆರವು

Posted date: 02 Mar, 2020

Powered by:     Yellow and Red

ಕೆಂಗಲ್ ಆಂಜನೇಯ ದೇವಾಲಯದ ಬಳಿಯ ಅನಧಿಕೃತ ಅಂಗಡಿಗಳ ತೆರವು

ಚನ್ನಪಟ್ಟಣ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯ ದ ಬಳಿ ಅನಧಿಕೃತವಾಗಿ ಹಲವಾರು ಅಂಗಡಿಗಳು ತೆರೆದಿದ್ದು, ಪ್ರಯಾಣಿಕರಿಗೆ ಹಾಗೂ ಭಕ್ತಾಧಿಗಳಿಗೆ ಕಿರಿಕಿರಿಯಾಗುತ್ತಿದೆ ಎಂಬ ಸಾರ್ವಜನಿಕ ರ ದೂರಿಗೆ ಕಿವಿಯಾದ ದಂಡಾಧಿಕಾರಿ ಸುದರ್ಶನ್ ರವರು ಇಂದು ತೆರವುಗೊಳಿಸಿದರು.


ಬೆಂಗಳೂರು ಮೈಸೂರು ಹೆದ್ದಾರಿಯ ರಾಮನಗರ ಚನ್ನಪಟ್ಟಣ ನಡುವೆ ಇರುವ ದೇವಾಲಯದ ಸುತ್ತ ಹಾಗೂ ಒಳಾಂಗಣದಲ್ಲಿ ತೆರೆದಿದ್ದ ಕೆಲವು ಅಂಗಡಿಗಳಿಂದ ಪ್ರಯಾಣಿಕರು ಮತ್ತು ಭಕ್ತಾಧಿಗಳಿಗೆ ತೊಂದರೆಯಾಗುತ್ತಿದೆ ಎಂದು ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ಮತ್ತು ತಹಶಿಲ್ದಾರ್ ರವರಿಗೆ ಹಲವಾರು ಭಕ್ತರು ಲಿಖಿತ ದೂರು ನೀಡಿದ್ದರು. ದೂರುಗಳ ಪರಾಮರ್ಶೆ ನಡೆಸಿದ ತಹಶಿಲ್ದಾರ್ ರವರು ಇಂದು ಎಲ್ಲಾ ಅಂಗಡಿಗಳನ್ನು ಖುದ್ದು ನಿಂತು ತೆರವುಗೊಳಿಸಿದರು.


ದೇವಾಲಯದ ಸುತ್ತಲೂ ಇದ್ದ ಅಂಗಡಿ ಮಳಿಗೆಗಳಲ್ಲಿ ಮದ್ಯಪಾನ, ಧೂಮಪಾನ ಮಾರಾಟವಾಗುತ್ತಿದ್ದು ಹಲವಾರು ರೀತಿಯ ಅಕ್ರಮಗಳ ಜೊತೆ ಗಲಾಟೆಯು ನಡೆಯುತ್ತಿದ್ದು ಇತ್ತೀಚೆಗೆ ಕುಣಿಗಲ್ ತಾಲ್ಲೂಕಿನ ಯುವ ಭಕ್ತಾಧಿಯೊಬ್ಬ ಕುಡಿದು ಕಲ್ಯಾಣಿ ಗೆ ಬಿದ್ದು ಸಾವನ್ನಪ್ಪಿದರು.


*ದೇವಾಲಯದ ತಡೆಗೋಡೆ ಯ ಬಳಿ ಇರುವ ಅಂಗಡಿಗಳಲ್ಲಿ ಮದ್ಯಪಾನ ಮತ್ತು ಧೂಮಪಾನ ಯಥೇಚ್ಛವಾಗಿ ನಡೆಯುತ್ತಿದ್ದು ದೇವಾಲಯಕ್ಕೆ ಬರುವ ಹೆಣ್ಣು ಮಕ್ಕಳಿಗೆ ಬಹಳ ಮುಜುಗರವಾಗುತ್ತಿತ್ತು. ಇದಕ್ಕೆ ಮುಕ್ತಿ ನೀಡಿ ದೇವಾಲಯದ ಸ್ವಚ್ಚತೆ ಕಾಪಾಡಲು ನೆರವು ನೀಡಿದ ತಹಶಿಲ್ದಾರ್ ರವರಿಗೆ ದೇವಾಲಯ ಸಮಿತಿಯಿಂದ ವಂದನೆಗಳನ್ನು ಸಲ್ಲಿಸುತ್ತೇವೆ.*

*-ಶರತ್ ಕುಮಾರ್. ಅರ್ಚಕರು.*


ತೆರವು ಕಾರ್ಯಾಚರಣೆಯಲ್ಲಿ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ಮಹೇಶ್, ಆರ್ ಐ ಕಾಂತರಾಜು, ವಿ ಎ ಮಂಜುನಾಥ, ಗ್ರಾಮ ಸಹಾಯಕರು ಮತ್ತು ಪೋಲಿಸ್ ಸಿಬ್ಬಂದಿಗಳು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑