Tel: 7676775624 | Mail: info@yellowandred.in

Language: EN KAN

    Follow us :


ಹೆತ್ತವರನ್ನು ಗೌರವಿಸುವುದೇ ದೊಡ್ಡ ಸಂಸ್ಕಾರ: ಹಿರಿಯನಟ ಡಾ|| ರಾಜೇಶ್

Posted date: 03 Mar, 2018

Powered by:     Yellow and Red

ಹೆತ್ತವರನ್ನು ಗೌರವಿಸುವುದೇ ದೊಡ್ಡ ಸಂಸ್ಕಾರ: ಹಿರಿಯನಟ ಡಾ|| ರಾಜೇಶ್

ರಾಮನಗರ: ಹೆತ್ತ ತಂದೆ-ತಾಯಿಯ ಸೇವೆ ಮಾಡುವವರು ಇಲ್ಲಿಯೂ ಸಲ್ಲುತ್ತಾರೆ, ಅಲ್ಲಿಯೂ ಸಲ್ಲುತ್ತಾರೆ. ತಂದೆ-ತಾಯಿಯನ್ನು ಗೌರವಿಸುವುದೇ ದೊಡ್ಡ ಸಂಸ್ಕಾರ. ಆದರೆ ಇಂದು ಬಹುತೇಕ ಮಕ್ಕಳು ವೃದ್ಧಾಶ್ರಮ ಸಂಸ್ಕøತಿಯನ್ನು ಬೆಳೆಸುತ್ತಿರುವುದು ದುರಂತ ಎಂದು ಹಿರಿಯ ನಟ ಡಾ|| ರಾಜೇಶ್ ಬೇಸರ ವ್ಯಕ್ತಪಡಿಸಿದರು.
ಸಂಸ್ಕøತಿ ಸೌರಭ ಟ್ರಸ್ಟ್ ನಗರದ ಶ್ರೀಕೃಷ್ಣ ಸ್ಮøತಿ ಕಲ್ಯಾಣ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಕಾರದಲ್ಲಿ ಜನಪದ ಕಲಾವಿದ ದಿ|| ಶ್ರೀರಂಗಯ್ಯ ವೇದಿಕೆಯಲ್ಲಿ ಆಯೋಜಿಸಿದ್ದ ಹನ್ನೊಂದನೇ ವರ್ಷದ ಸಂಸ್ಕøತಿ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಸಂಸ್ಕಾರವಂತರು ಸಾಂಸ್ಕøತಿಕ ಚಿಂತನೆಯನ್ನು ಅಳವಡಿಸಿಕೊಂಡಿರುತ್ತಾರೆ. ಗಾಯಕ ರಾ.ಬಿ.ನಾಗರಾಜ್ ನಿರಂತರ ಸಾಂಸ್ಕøತಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಕೆಲಸ. ಇವತ್ತಿನ ಸಮಾಜಕ್ಕೆ ಇದು ಬೇಕು, ಅಂದು ನಾನು ಅಭಿನಯಿಸಿದ ಅನೇಕ ಚಿತ್ರಗಳು ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡುವ ಕಥೆಗಳಾಗಿದ್ದವು. ಇಂದಿನ ಚಿತ್ರಗಳಲ್ಲಿ ಕೌಟುಂಬಿಕ ಸದಭಿರುಚಿಯ ಚಿತ್ರಗಳು ಕಾಣೆಯಾಗುತ್ತಿವೆ ಎಂದರು.
ಪತ್ರಕರ್ತ ತ್ಯಾಗರಾಜ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನಂತಹ ಅನುದಾನಿತ ಸಂಸ್ಥೆಗಳು ಮೂಲ ಉದ್ದೇಶವನ್ನೇ ಮರೆಯುತ್ತಿವೆ. ಅವುಗಳು ಮಾಡುವ ಸನ್ಮಾನಗಳು, ಸಮ್ಮೇಳನಗಳು ಅರ್ಥವನ್ನು ಕಳೆದುಕೊಳ್ಳುತ್ತಿವೆ. ಇದರ ನಡುವೆ ಕೆಲವೇ ಸಂಘ-ಸಂಸ್ಥೆಗಳು ಸಾಮಾಜಿಕ ಜವಾಬ್ದಾರಿಯಿಂದ ಕೆಲಸ ಮಾಡುತ್ತಿವೆ ಎಂದರು.
ಜಯ ಕರ್ನಾಟಕ ಸಂಘಟನೆ ಮಾಜಿ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮಾತನಾಡಿ, ಸಂಸ್ಕøತಿ ಸೌರಭ ಟ್ರಸ್ಟ್‍ನ ಎಲ್ಲಾ ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸುತ್ತಾ ಬಂದಿದ್ದೇನೆ. ಸಾಂಸ್ಕøತಿಕ ಸಾಹಿತ್ಯ, ನಾಡು-ನುಡಿಯ ಪರವಾಗಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ರಾ.ಬಿ.ನಾಗರಾಜ್ ಆಯೋಜಿಸುತ್ತಾ ಬರುತ್ತಿದ್ದಾರೆ. ಇಂತಹವರಿಗೆ ಸರ್ಕಾರ ಪ್ರಶಸ್ತಿಗಳನ್ನು ನೀಡಬೇಕು. ಆಗಾದಾಗ ಇಂತವರು ಇನ್ನಷ್ಟು ಪ್ರೇರಣೆಯಿಂದ ಸಾಂಸ್ಕøತಿಕವಾಗಿ ಮುನ್ನಡೆಯುತ್ತಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಮಾತನಾಡಿ, ರಾಮನಗರ ಅನೇಕ ಕಲಾವಿದರು, ಸಾಹಿತಿಗಳು, ಸಂಘ-ಸಂಸ್ಥೆಗಳಿಂದ ಕೂಡಿದೆ. ಇಲ್ಲಿ ನಿರಂತರವಾಗಿ ಕಲಾ ಚಟುವಟಿಕೆಗಳು ನಡೆಯುತ್ತಿವೆ. ಆದರೆ, ಆಸ್ವಾಧಿಸುವವರ ಕೊರತೆ ಎದ್ದು ಕಾಣುತ್ತಿದೆ. ಕಾರ್ಯಕ್ರಮಗಳಲ್ಲಿ ಜನ ಭಾಗಿಯಾಗಬೇಕು. ಇಂತಹ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವ ಮೂಲಕ ರಾಮನಗರವನ್ನು ಸಾಂಸ್ಕøತಿಕ ನಗರಿ ಮಾಡಬೇಕು ಎಂದರು.
ಇಂದು ಪುರಸ್ಕಾರಕ್ಕೆ ಭಾಜನರಾಗಿರುವ ಗಾಯಕಿ ಚಂದ್ರಿಕಾ ಗುರುರಾಜ್, ರಂಗನಟ-ನಿರ್ದೇಶಕ ಎಚ್.ವಿ.ಹನುಮಂತು ಅವರಿಗೆ ಹೆಚ್ಚು ಅವಕಾಶಗಳು ಸಿಗಬೇಕಿತ್ತು. ಆದರೆ ಚಿತ್ರರಂಗ ಇಂತಹ ಅನೇಕ ಪ್ರತಿಭಾವಂತರನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ ಎಂದರು.
ಹಿನ್ನೆಲೆಯ ಗಾಯಕಿ ಚಂದ್ರಿಕಾ ಗುರುರಾಜ್ ಹಾಗೂ ರಂಗಭೂಮಿ ನಟ-ನಿರ್ದೇಶಕ ಎಚ್.ವಿ.ಹನುಮಂತು ರವರಿಗೆ ಸಂಸ್ಕøತಿ ಪುರಸ್ಕಾರ ನೀಡಿ ಗೌರವಿಸಲಾಯಿತು. ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಎಂ.ಜಗದೀಶ್, ಮಂಚನಾಯಕನಹಳ್ಳಿ ಗ್ರಾಪಂ ಸದಸ್ಯ ಎಚ್.ಎಸ್.ಯೋಗಾನಂದ್ ಮಾತನಾಡಿದರು. ಹೈಕೋರ್ಟ್ ವಕೀಲ ಕೆ.ರಾಮ್‍ಸಿಂಗ್, ಕನ್ನಡ ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ರಾಜು, ಜೆಡಿಎಸ್ ಹಿಂದುಳಿದ ವಿಭಾಗದ ರಾಜ್ಯ ಉಪಾಧ್ಯಕ್ಷ ರೇಣುಕಾ ಪ್ರಸಾದ್, ಗ್ರಾಪಂ ಸದಸ್ಯ ಕೂನಮುದ್ದನಹಳ್ಳಿ ಕೆ.ಎಸ್.ರುದ್ರೇಶ್, ವಕೀಲ ಸುನೀಲ್ ಚಿಕ್ಕಪ್ಪಾಜಿ, ಆಶ್ರಯ ಸದಸ್ಯ ಪಿ.ಶಿವಾನಂದ್, ಸಂಸ್ಕøತಿ ಸೌರಭ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ರಾ.ಬಿ.ನಾಗರಾಜ್, ಜಿಲ್ಲಾ ಕಸಾಪ ಮಾಜಿ ಕಾರ್ಯದರ್ಶಿ ಕಾ.ಪ್ರಕಾಶ್, ಸಂಸ್ಕøತಿ ಸೌರಭ ಟ್ರಸ್ಟ್ ಕಾರ್ಯದರ್ಶಿ ಎಚ್.ಬಿ.ಸಿದ್ಧರಾಜು, ಶಿಕ್ಷಕ ರಾಜಶೇಖರ್ ಪಾಟೀಲ ಉಪಸ್ಥಿತರಿದ್ದರು.
ಸಂಗೀತ ವಿದ್ವಾನ್ ಶಿವಾಜಿರಾವ್ ರವರ ಸಪ್ತಸ್ವರ ಸಂಗೀತ ವಿದ್ಯಾಲಯದ ಕಲಾವಿದರು ಶಾಸ್ತ್ರೀಯ ಗಾಯನ, ಬೆಂಗಳೂರಿನ ಶ್ರೀನಿವಾಸ್ ತಂಡ ಹಾಗೂ ಕೆಂಗಲ್ ವಿನಯ್‍ಕುಮಾರ್, ಡಾ|| ಎಚ್.ವಿ.ಮೂರ್ತಿ, ಗೋಪಾಲ್, ತಂಡ ಸುಗಮ ಸಂಗೀತ ಹಾಗೂ ಬಿಡದಿಯ ವಿಜಯೇಂದ್ರ ಪ್ರಸಾದ್ ನೇತೃತ್ವದಲ್ಲಿ ಜೆ.ವಿ.ಎಸ್. ಹಳೆಯ ವಿದ್ಯಾರ್ಥಿಗಳು ನಡೆಸಿಕೊಟ್ಟ ವಿಶೇಷ ನೃತ್ಯ ಪ್ರದರ್ಶನ ಹೆಚ್ಚು ಗಮನ ಸೆಳೆಯಿತು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑