ಚನ್ನಪಟ್ಟಣ ಗ್ರಾಮಾಂತರ ಪೋಲಿಸರಿಂದ ಆರೋಪಿ ಜಾಕಿ ಕಾಲಿಗೆ ಗುಂಡೇಟು
ಚನ್ನಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆ ಹೆಚ್ ಬಿ ಕಾಲೋನಿಯಲ್ಲಿ ಇತ್ತೀಚೆಗೆ ಹಾಡಹಗಲೇ ಮನೆಗೆ ನುಗ್ಗಿ ಸುಲಿಗೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು,
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರು.
ಡಿವೈಎಸ್ಪಿ ಓಂ ಪ್ರಕಾಶ್ ನೇತೃತ್ವದಲ್ಲಿ ತನಿಖಾಧಿಕಾರಿ ವಸಂತ ಕುಮಾರ್ ರವರು ಮುಖ್ಯ ಆರೋಪಿ ರಮೇಶ್ ಅಲಿಯಾಸ್ ಜಾಕಿ ಯನ್ನು ವಶಕ್ಕೆ ಪಡೆದು ವಿಚಾರಣೆ ಗೆ ಒಳಪಡಿಸಿ ವಿಚಾರಣೆ ನಡೆಸುತ್ತಿದ್ದು ಹಲವಾರು ಮೊಕದ್ದಮೆಯಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಕೆಲ ಸ್ಥಳ ಮಾಹಿತಿಗಾಗಿ ಕರೆದೊಯ್ಯಲಾಗಿತ್ತು.
ದಿನಾಂಕ ೧೨/೦೩/೨೦ ರ ರಾತ್ರಿ ಸುಮಾರು ೧೨:೪೫ ರ ಮಧ್ಯರಾತ್ರಿಯಲ್ಲಿ, ಆರೋಪಿ ರಮೇಶ್ ಉ ಜಾಕಿ ಯನ್ನು ಕರೆದುಕೊಂಡು ತನಿಖಾಧಿಕಾರಿ ಸಿಪಿಐ ವಸಂತ್, ಪಿಎಸ್ಐ ಪ್ರಕಾಶ್ ಹಾಗೂ ಸಿಬ್ಬಂದಿಗಳು ತನಿಖೆಗೆ ಸಂಬಂಧಪಟ್ಟಂತೆ, ಚಿಕ್ಕ ಮಳೂರು ಗ್ರಾಮಕ್ಕೆ ಹೋಗುತ್ತಿರುವಾಗ ಆರೋಪಿಯು ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು, ಈ ಸಂದರ್ಭದಲ್ಲಿ ಹಿಡಿಯಲು ಹೋದ ಹೆಡ್ ಕಾನ್ಸ್ಟೇಬಲ್ ನಾಗರಾಜ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಲು ಯತ್ನಿಸಿದ್ದು, ಪ್ರಾಣ ರಕ್ಷಣೆಗಾಗಿ ಸಿಪಿಐ ವಸಂತ್ ಕುಮಾರ್ ರವರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ವಶಕ್ಕೆ ತೆಗೆದುಕೊಂಡರು.
ಗಾಯಗೊಂಡ ಆರೋಪಿಯನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದು,
ಗಾಯಾಳು ಹೆಡ್ ಕಾನ್ಸ್ಟೇಬಲ್ ಹೆಚ್ ಸಿ ನಾಗರಾಜು ರವರು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಚನ್ನಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ಸಂಖ್ಯೆ ೩೯/೨೦ ರಲ್ಲಿ ಸೆಕ್ಷನ್, ೩೦೭, ೩೫೩ ಮತ್ತು ೩೩೨ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ವಿಚಾರಣೆ ಮುಂದುವರೆಸಲಾಗಿದೆ.
ಆರೋಪಿ ರಮೇಶ್ ಉ ಜಾಕಿ ವಿರುದ್ಧ ಬೆಂಗಳೂರು ನಗರ, ಬಂಟ್ವಾಳ, ಶಿವಮೊಗ್ಗ ಸೇರಿದಂತೆ ೧೫ ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಮೂಲಗಳು ತಿಳಿಸಿವೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು