Tel: 7676775624 | Mail: info@yellowandred.in

Language: EN KAN

    Follow us :


ಕ್ರೀಡೆಗೆ ಉತ್ತೇಜನ ನೀಡಲು ಕ್ರೀಡಾಕಿಟ್ ವಿತರಣೆ: ಡಿ.ಕೆ. ಸುರೇಶ್

Posted date: 03 Mar, 2018

Powered by:     Yellow and Red

ರಾಮನಗರ : ಯುವ ಜನತೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡಲು ಸರ್ಕಾರ ಚೈತನ್ಯ ಕ್ರೀಡಾಕಿಟ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಅದರ ಪ್ರಯೋಜನ ಪಡೆದುಕೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಡಿ.ಕೆ. ಸುರೇಶ್ ಅವರು ಕರೆ ನೀಡಿದರು. 
 ಶನಿವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2017-18ನೇ ಸಾಲಿನ ಜಿಲ್ಲಾ ಮಟ್ಟದ ಯುವ ಚೈತನ್ಯ ಕ್ರೀಡಾ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿವಿಧ ಕ್ರೀಡೆಗಳತ್ತ ಯುವ ಜನರನ್ನು ಆಕರ್ಷಿಸಲು ರಾಜ್ಯ ಸರ್ಕಾರ ಚೈತನ್ಯ ಕ್ರೀಡಾ ಕಿಟ್ ವಿತರಣೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕ್ರಿಕೆಟ್, ವಾಲಿಬಾಲ್, ಬ್ಯಾಟ್ಮಿಂಟನ್ ಸೇರಿದಂತೆ ಹಲವಾರು ಕ್ರೀಡೆಗಳಿಗೆ ಅಗತ್ಯವಿರುವ ಕ್ರೀಡಾ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ, ಇದಕ್ಕಾಗಿ ಸರ್ಕಾರ ಆಯವ್ಯಗಳಲ್ಲಿ 20 ಕೋಟಿ ರೂ.ಗಳನ್ನು ಮೀಸಲಿಸಿತ್ತು, ಯುವಜನ ಮತ್ತು ಕ್ರೀಡಾ ಇಲಾಖೆಗೆ ಈ ಪರಿಕರಗಳನ್ನು ನೋಂದಾಯಿತ ಯುವ ಸಂಘಗಳಿಗೆ ನೀಡಿ ಆ ಮೂಲಕ ಕ್ರೀಡೆಗಳಿಗೆ ಉತ್ತೇಜನ ನೀಡುವ ಜವಬ್ದಾರಿಯನ್ನು ನೀಡಲಾಗಿತ್ತು ಎಂದು ಅವರು ಹೇಳಿದರು.
ಜಿಲ್ಲೆಯ ಕ್ರೀಡಾ ಇಲಾಖೆಯಲ್ಲಿ ನೋಂದಣಿಯಾಗಿರುವ 377 ಯುವ ಸಂಘಗಳಿಗೆ ಈ ಕಿಟ್‍ಗಳನ್ನು ವಿತರಿಸಲಾಗುತ್ತಿದೆ. ಆ ಮೂಲಕ ಯುವಕರು ವಿವಿಧ ರೀತಿಯ ಕ್ರೀಡೆಗಳಲ್ಲಿ ತೊಡಗಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಡರಾಗಬಹುದು.  ಅಲ್ಲದೇ ಉತ್ತಮ ಕ್ರೀಡಾಪಟುಗಳ ಆಯ್ಕೆಗೂ ಇದು ಕಾರಣವಾಗಬಲ್ಲದು ಎಂದು ತಿಳಿಸಿದರು. 
ರಾಜ್ಯದಲ್ಲಿ ಐದು ಸಾವಿರ ಯುವ ಸಂಘಗಳಿಗೆ 20 ಕೋಟಿ ರೂ.ಗಳ ವೆಚ್ಚದಲ್ಲಿ ಈ ಕ್ರೀಡಾ ಕಿಟ್‍ಗಳನ್ನು ವಿತರಿಸಲಾಗುತ್ತಿದೆ. ಕ್ರೀಡಾ ಪಟುಗಳು ಅಭ್ಯಾಸ ಮಾಡಲು ಅಗತ್ಯವಿರುವ ಪರಿಕರಗಳನ್ನು ಒಂದೇ ಕಿಟ್‍ಗಳಲ್ಲಿ ಒದಗಿಸಲಾಗುತ್ತಿದೆ. ಇದರ ಉದ್ದೇಶ ಯುವಜನರನ್ನು ಒಂದೆಡೆ ಸೇರಿಸುವುದು ಅವರನ್ನು ಆರೋಗ್ಯವಂತರನ್ನಾಗಿಸುವುದು ಹಾಗೂ ಅವರಲ್ಲಿ ಪ್ರಗತಿಯತ್ತ ಚಿಂತನೆಗೆ ದೂಡುವಂತೆ ಮಾಡುವುದಾಗಿದೆ ಎಂದು ಅಭಿಪ್ರಾಯಪಟ್ಟರು. 
ಕಂಪ್ಯೂಟರ್, ಟಿ.ವಿ, ಮೊಬೈಲ್‍ಗಳಿಂದ ಆಟದ ಮೈದಾನದತ್ತ ಆಕರ್ಷಿಸುವುದು ಈ ಕಿಟ್‍ನ ವಿತರಣೆಯ ಮತ್ತೊಂದು ವಿಶೇಷವಾಗಿದೆ.  ವಿತರಿಸಲಾದ ಈ ಕಿಟ್ ಒಬ್ಬರ ಆಸ್ತಿಯಲ್ಲ, ಸಂಘದಲ್ಲಿರುವ ಪ್ರತಿಯೊಬ್ಬರು ಕ್ರೀಡಾ ಪರಿಕರಗಳನ್ನು ಬಳಸಿಕೊಂಡು ಕ್ರೀಡಾಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಗ್ರಾಮೀಣ ಮಟ್ಟದಲ್ಲಿ ಕ್ರೀಡೆಗೆ ಪ್ರೋತ್ಸಾಹ ನೀಡಲು ಸರ್ಕಾರ ಗ್ರಾಮ ಪಂಚಾಯತ್ ಅನುದಾನದಲ್ಲಿ ಶೇ. 2ರ ಅನುದಾನವನ್ನು ಮೀಸಲಿರಿಸಲಾಗಿದೆ. ಪ್ರತಿ ಹಳ್ಳಿಗಳ್ಳಲಿಯೂ ಸಂಘಗಳನ್ನು ರಚಿಸಿಕೊಂಡು ಸರ್ಕಾರ ನೀಡುವ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಕ್ರೀಡಾ ಇಲಾಖೆಗಳಲ್ಲಿ 10 ಕೋಟಿ ರೂ.ಗಳ ಅನುದಾನ ಮೀಸಲಿರಿಸಲಾಗಿದ್ದು, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾಪಟುಗಳಿಗೆ 1 ಲಕ್ಷದ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿಯೂ ಯುವ ಚೈತನ್ಯ ಕ್ರೀಡಾ ಕಿಟ್ ವಿತರಣೆಯ ಯೋಜನೆಯ ಲಾಭ ಪಡೆದುಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಬೆಳಕಿಗೆ ಬರುತ್ತಾರೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದ ಸಂಸದರು ಖಾಲಿ ಇರುವ ಸರ್ಕಾರಿ ಭೂಮಿಗಳಲ್ಲಿ ನರೇಗಾ ಯೋಜನೆಯಡಿ ಕ್ರೀಡಾ ಮೈದಾನಗಳನ್ನು ನಿರ್ಮಿಸುವಂತೆ ನಿರ್ದೇಶನ ನೀಡಲಾಗಿದೆ ಎಂದರು.
ಜಿಲ್ಲಾಧಿಕಾರಿ ಡಾ. ಬಿ.ಆರ್. ಮಮತಾ ಅವರು ಮಾತನಾಡಿ, ಇದೊಂದು ಅಪರೂಪದ ಕಾರ್ಯಕ್ರಮವಾಗಿದ್ದು, ಓದಿನಂತೆ ಆಟೋಟವೂ ಕೂಡ ಮುಖ್ಯ, ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ದಿನನಿತ್ಯವು ಚಟುವಟಿಕೆಯಿಂದ ಇರಬಹುದು, ಕ್ರೀಡಾ ಕಿಟ್‍ನಲ್ಲಿ ಯುವಜನತೆಗೆ ಅಗತ್ಯವಿರುವ ಕ್ರೀಡಾ ಪರಿಕರಗಳನ್ನು ವಿತರಿಸಲಾಗಿದೆ ಅದನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸಿ ಎಂದು ಹೇಳಿದರು.  
ನಗರಸಭೆ ಅಧ್ಯಕ್ಷ ಪಿ. ರವಿಕುಮಾರ್ ಮಾತನಾಡಿ, ಕ್ರೀಡೆ ಜೀವನದಲ್ಲಿ ಶಿಸ್ತನ್ನು ರೂಪಿಸುತ್ತದೆ, ಪ್ರತಿ ದಿನ ಅದರಲ್ಲಿ ತೊಡಗಿಕೊಂಡು ಆರೋಗ್ಯವಾಗಿರಿ ಎಂದು ಹೇಳಿದರು. 
ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಸಹಾಯ ನಿರ್ದೇಶಕರಾದ ಅನಿತಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ದೈಹಿಕ ಶಿಕ್ಷಕ ಚಂದ್ರುಶೇಖರ್ ಸ್ವಾಗತಿಸಿದರು. 
ಜಿಲ್ಲಾ ಪಂಚಾಯತ್‍ನ ಉಪಾಧ್ಯಕ್ಷರಾದ ಶ್ರೀಮತಿ ದಿವ್ಯಗಂಗಾಧರ್, ಮುಖಂಡರಾದ ಇಕ್ಬಾಲ್ ಹುಸೇನ್, ಗಾಣಕಲ್ ನಾಗರಾಜ್, ಚೇತನ್, ಲೋಹಿತ್ ಬಾಬು ಹಾಗೂ ಇತರರು ವೇದಿಕೆಯಲ್ಲಿದ್ದರು.
ಇದೇ ಸಂದರ್ಭದಲ್ಲಿ ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ರಾಮನಗರದ ಯುವ ಸಂಘಗಳಿಗೆ 40,000 ರೂ.ಗಳ ಮೌಲ್ಯದ ಕ್ರೀಡಾ ಕಿಟ್‍ಗಳನ್ನು ವಿತರಿಸಲಾಯಿತು. 
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑