Tel: 7676775624 | Mail: info@yellowandred.in

Language: EN KAN

    Follow us :


ಜಾತ್ರೆ, ಮದುವೆ, ಧಾರ್ಮಿಕ ಆಚರಣೆ, ಕ್ಲಬ್, ಶಾಲಾಕಾಲೇಜುಗಳನ್ನು ಬಂದ್ ಮಾಡಿ, ಉಲ್ಲಂಘಿಸಿದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಜಿಲ್ಲಾಧಿಕಾರಿ

Posted date: 14 Mar, 2020

Powered by:     Yellow and Red

ಜಾತ್ರೆ, ಮದುವೆ, ಧಾರ್ಮಿಕ ಆಚರಣೆ, ಕ್ಲಬ್, ಶಾಲಾಕಾಲೇಜುಗಳನ್ನು ಬಂದ್ ಮಾಡಿ, ಉಲ್ಲಂಘಿಸಿದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಜಿಲ್ಲಾಧಿಕಾರಿ

*ಜಾತ್ರೆ, ಮದುವೆ, ಧಾರ್ಮಿಕ ಆಚರಣೆ, ಕ್ಲಬ್, ಶಾಲಾಕಾಲೇಜುಗಳನ್ನು ಬಂದ್ ಮಾಡಿ, ಉಲ್ಲಂಘಿಸಿದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಜಿಲ್ಲಾಧಿಕಾರಿ*


ರಾಮನಗರ:ಮಾ/೧೪/೨೦/ಶನಿವಾರ.


ರಾಮನಗರ ಜಿಲ್ಲೆಯಾದ್ಯಂತ ಏರ್ಪಡಿಸಿರುವ ಧಾರ್ಮಿಕ ಕಾರ್ಯಕ್ರಮಗಳು, ಜಾತ್ರೆಗಳು, ಉತ್ಸವಗಳನ್ನು ನಡೆಸದಂತೆ ಅಥಾವಾ ನೂರು ಮಂದಿಗೂ ಹೆಚ್ಚು ಜನ ಸೇರದಂತೆ ಸಂಬಂಧಿಸಿದ ಅಧಿಕಾರಿಗಳು, ಧಾರ್ಮಿಕ ಸಂಸ್ಥೆಗಳು ತಿಳುವಳಿಕೆ ನೀಡುವ ಮೂಲಕ ಎಚ್ಚರಿಸಬೇಕು ಎಂದು ರಾಮನಗರ ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರು ಇಂದು ಆದೇಶ ಹೊರಡಿಸಿದ್ದಾರೆ.


ವಿಶ್ವದಾದ್ಯಂತ  ಹರಡುತ್ತಿರುವ (ಕೋವಿಡ್ -೧೯) ಕೊರೋನಾ ವೈರಸ್ ರೋಗಾಣು ತಡೆಗಟ್ಟುವ  ನಿಟ್ಟಿನಲ್ಲಿ ಹಾಗೂ ರಾಮನಗರ ಜಿಲ್ಲೆಯಾದ್ಯಂತ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ  ರಾಮನಗರ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಎಂ.ಎಸ್.ಅರ್ಚನಾ ಅವರು ಸಿ.ಆರ್.ಪಿ.ಸಿ. ಸೆಕ್ಷನ್ ೧೩೩ ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಿನಾಂಕ ೧೩/೦೩/೨೦ ರಿಂದ ೨೦/೦೩/೨೦ ರವರೆಗೆ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ

ಆದೇಶ ಹೊರಡಿಸಿದ್ದಾರೆ. 


ರಾಮನಗರ ಜಿಲ್ಲೆಯಾದ್ಯಂತ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು, ಜಾತ್ರೆ/ಉತ್ಸವಗಳಿಗೆ ಆದಷ್ಟು ಕಡಿಮೆ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಧಾರ್ಮಿಕ ಸಂಸ್ಥೆಗಳ ಆಡಳಿತ ಸಮಿತಿಯು ಸಾರ್ವಜನಿಕರಿಗೆ ಸೂಕ್ತ ತಿಳುವಳಿಕೆ ಹೊರಡಿಸುವುದು.


ರಾಮನಗರ ಜಿಲ್ಲೆಯಾದ್ಯಂತ ಚಿತ್ರಮಂದಿರ, ಕ್ಲಬ್ ಗಳು, ನಾಟಕ ಪ್ರದರ್ಶನ, ಮಾರುಕಟ್ಟೆಗಳು, ಶಾಪಿಂಗ್ ಮಾಲ್ ಗಳನ್ನು ನಡೆಸತಕ್ಕದಲ್ಲ.


ಬೇಸಿಗೆ ಶಿಬಿರ, ಈಜುಕೊಳ, ಸಭೆ, ಸಮಾರಂಭಗಳು, ಕ್ರೀಡಾಕೂಟಗಳು, ವಿಚಾರ ಸಂಕಿರಣ ಮತ್ತಿತರ ಕಾರ್ಯಕ್ರಮಗಳನ್ನು ರದ್ದುಪಡಿಸಿದೆ.

ಮದುವೆಯನ್ನು  ಹೆಚ್ಚಿನ ಜನಸಂದಣಿ ಸೇರದಂತೆ ಸರಳವಾಗಿ ಆಚರಿಸಲು ಅವರು ಆದೇಶದಲ್ಲಿ ತಿಳಿಸಿದ್ದಾರೆ.


ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ/ ಹೊರಡಿಸಲಾಗುವ ಸುತ್ತೋಲೆ/ ಆದೇಶ/ಅಧಿಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ ಶಾಲಾ,ಕಾಲೇಜು, ಮಹಾವಿದ್ಯಾಲಯಗಳನ್ನು ಮುಚ್ಚುವುದು.


ಖಾಸಗಿ ವೈದ್ಯರು, ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಮ್ ಗಳಲ್ಲಿ ವಿದೇಶದಿಂದ ಮತ್ತು ಕೋವಿಡ್-೧೯ ರೋಗಪೀಡಿತ ದೇಶದಿಂದ ಬರುವ ಮತ್ತು ಕೋವಿಡ್-೧೯ ರೋಗ ಲಕ್ಷಣ ಹೊಂದಿರುವ ರೋಗಿಗಳು ದಾಖಲಾದ್ದಲ್ಲಿ ಅದರ ಮಾಹಿತಿಯನ್ನು ತಕ್ಷಣ ಜಿಲ್ಲಾ/ತಾಲ್ಲೂಕು ಆರೋಗ್ಯಾಧಿಕಾರಿಗಳ ಗಮನಕ್ಕೆ ತರುವುದು.


ಕೋವಿಡ್-೧೯ ರೋಗದ ಸೋಂಕು ಪೀಡಿತರಿಗೆ ಸರ್ಕಾರ ನಿಗಧಿಪಡಿಸಿರುವ ಮಾರ್ಗಸೂಚಿಯಂತೆ (ಎಸ್.ಓ.ಪಿ) ವೈದ್ಯಕೀಯ ಉಪಚಾರ ಒದಗಿಸಲು ಅಗತ್ಯವಿರುವ ವ್ಯವಸ್ಥೆಯನ್ನು ಜಿಲ್ಲೆಯ ಎಲ್ಲಾ ಆಸ್ಪತ್ರೆಗಳು  ಕೈಗೊಳ್ಳುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.


ದಂಡಾಧಿಕಾರಿ ಸುದರ್ಶನ್ ರವರು ಸಹ ಆದೇಶವನ್ನು ಹೊರಡಿಸಿದ್ದು ಈ ಮೇಲಿನ ಎಲ್ಲಾ ಕಾರ್ಯಕ್ರಮಗಳ ಮೇಲೆ ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು ತಿಳುವಳಿಕೆ ನೀಡಬೇಕು ಮತ್ತು ಸಾರ್ವಜನಿಕರು ಸಹ ಸಹಕರಿಸಬೇಕೆಂದು ತಿಳಿಸಿದ್ದಾರೆ.



*ಈ ಮೇಲಿನ ಸೂಚನೆಗಳನ್ನು ಪ್ರಜ್ಞಾಪೂರ್ವಕವಾಗಿ ಉಲ್ಲಂಘಿಸುವವರು ಭಾರತೀಯ ದಂಡ ಸಂಹಿತೆಯ ಅನ್ವಯ ಶಿಕ್ಷೆಗೆ ಅರ್ಹರಾಗುತ್ತಾರೆ ಎಂದು ಅವರು ಎಚ್ಚರಿಸಿದ್ದಾರೆ.*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑