Tel: 7676775624 | Mail: info@yellowandred.in

Language: EN KAN

    Follow us :


ಕಿರಿದಾದ ರಸ್ತೆ, ಹಲವು ಉದ್ದಿಮೆಗಳ ಆಗರ, ಕಛೇರಿ ಬದಲಾಯಿಸದ ಸಬ್ ರಿಜಿಸ್ಟ್ರಾರ್, ಸಾರ್ವಜನಿಕರಿಗೆ ಕಿರಿಕಿರಿ

Posted date: 17 Mar, 2020

Powered by:     Yellow and Red

ಕಿರಿದಾದ ರಸ್ತೆ, ಹಲವು ಉದ್ದಿಮೆಗಳ ಆಗರ, ಕಛೇರಿ ಬದಲಾಯಿಸದ ಸಬ್ ರಿಜಿಸ್ಟ್ರಾರ್, ಸಾರ್ವಜನಿಕರಿಗೆ ಕಿರಿಕಿರಿ

ಚನ್ನಪಟ್ಟಣ: ನಗರದ ಹೃದಯ ಭಾಗದಲ್ಲಿರುವ (Heart Of The City) ಕುವೆಂಪು ನಗರದ ಒಂದನೇ ತಿರುವಿನಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಜನಸಂಪರ್ಕ ಕಛೇರಿಗಳಲ್ಲದೆ ಬ್ಯಾಂಕುಗಳು ಮತ್ತು ಬೇರೆಬೇರೆ ಯ ಖಾಸಗಿ ಉದ್ದಿಮೆಗಳು ತಲೆ ಎತ್ತಿದ್ದು ಈ ಎಲ್ಲಾ ಕಛೇರಿಗೆ ದಿನನಿತ್ಯವೂ ಎಡತಾಕುವ ಸಹಸ್ರಾರು ಗ್ರಾಹಕರು ಹಾಗೂ ಅವರ ವಾಹನಗಳಿಂದ ಆ ಕಿರಿದಾದ ರಸ್ತೆ ತುಂಬಿ ತುಳುಕುತ್ತಿದ್ದು ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದೆ.


ನೋಂದಣಿ ಕಛೇರಿ, ಬಿಎಸ್ಎನ್ಎಲ್ ಕಛೇರಿ, ಕರ್ನಾಟಕ ಬ್ಯಾಂಕ್, ವಿಜಯ ಬ್ಯಾಂಕ್,ಉಜ್ಜೀವನ್ ಬ್ಯಾಂಕ್, ಖಾಸಗಿ ಆಸ್ಪತ್ರೆ, ಸ್ವದೇಶಿ ಮಾಲ್, ಪ್ರಿಂಟಿಂಗ್ ಪ್ರೆಸ್ ಸೇರಿದಂತೆ ಅನೇಕ ಉದ್ದಿಮೆಗಳು ಇಲ್ಲಿ ತಲೆ ಎತ್ತಿದ್ದು ದಿನಂಪ್ರತಿ ಕಾರುಗಳಲ್ಲದೆ ಕನಿಷ್ಠ ಸಾವಿರ ದ್ವಿಚಕ್ರ ವಾಹನಗಳು ಅಡ್ಡಾದಿಡ್ಡಿ ನಿಂತು ಹೋಗುತ್ತಿದ್ದು ಆ ಬಡಾವಣೆಯ ನಿವಾಸಿಗಳು ಸಂಚರಿಸಲು ಹರಸಾಹಸ ಪಡಬೇಕಾಗಿದೆ.

ಕೂಗಳತೆಯಲ್ಲಿ ಖಾಸಗಿ ಶಾಲೆಯೊಂದಿದ್ದು ಬೆಳಿಗ್ಗೆ ಮತ್ತು ಸಂಜೆ ಜನ ಮತ್ತು ವಾಹನ ದಟ್ಟಣೆ ಹೆಚ್ಚಾಗಿರುತ್ತದೆ.


ಬ್ಯಾಂಕುಗಳು, ಬಿಎಸ್ಎನ್ಎಲ್, ಮತ್ತು ಖಾಸಗಿ ಉದ್ದಿಮೆಗಳಿಗೆ ಅಗತ್ಯಗಳಿಗನುಗುಣವಾಗಿ ಗ್ರಾಹಕರು ಬಂದು ಹೋದರೇ ಸಬ್ ರಿಜಿಸ್ಟ್ರಾರ್ ಕಛೇರಿಗೆ ಮಾರುವವರ ಇಡೀ ಕುಟುಂಬ, ಮಧ್ಯವರ್ತಿಗಳು, ಪತ್ರ ಬರಹಗಾರ, ಕೊಳ್ಳುವವರು ಸೇರಿ ಕನಿಷ್ಠ ಇಪ್ಪತ್ತಕ್ಕೂ ಹೆಚ್ಚು ಮಂದಿ ಸೇರುತ್ತಾರೆ. ಇಂತಹ ಹತ್ತು ಕುಟುಂಬಗಳ ವ್ಯವಹಾರ ಬಂದರೆ ಸಾಕು ಇಡೀ ರಸ್ತೆಯಲ್ಲಿ ನಡೆದುಕೊಂಡು ಹೋಗುವುದು ಸಹ ದುಸ್ತರವಾಗುತ್ತಿದೆ.


ಸಬ್ ರಿಜಿಸ್ಟ್ರಾರ್ ಕಛೇರಿಗೆ ಸದ್ಯ ತಾಲಕು ಕಛೇರಿ ಆವರಣದಲ್ಲಿ ಜಾಗವಿದ್ದು ಇದುವರೆಗೂ ಸಂಬಂಧಿಸಿದ ಅಧಿಕಾರಿಗಳು ಕಟ್ಟಡ ನಿರ್ಮಿಸಲು ನೀಲನಕ್ಷೆಯನ್ನು ತಯಾರಿಸಿಲ್ಲ. ಈಗಿರುವುದು ಬಾಡಿಗೆ ಕಟ್ಟಡವಾಗಿದ್ದು ಅತಿ ಹೆಚ್ಚು ಆದಾಯವಿರುವ ಇಲಾಖೆಯನ್ನು ವಿಶಾಲವಾದ ಕಟ್ಟಡಕ್ಕಾದರೂ ವರ್ಗಾಯಿಸುವ ಕೆಲಸ ಮಾಡದಿರುವುದು ಏಕೆ ಎಂಬ ಪ್ರಶ್ನೆ ಸಾರ್ವಜನಿಕರದ್ದಾಗಿದೆ.


ಗ್ರಾಹಕರು ಮತ್ತು ನಿವಾಸಿಗಳ ಕೂಗಿಗೆ ಸಬ್ ರಿಜಿಸ್ಟ್ರಾರ್ ಹಾಗೂ ಇನ್ನಿತರ ಸಾರ್ವಜನಿಕ ಸಂಸ್ಥೆಗಳು ಓಗೊಟ್ಟು ತಮ್ಮ ಕಛೇರಿಯನ್ನು ಬದಲಾಯಿಸಲಿ. ಪೋಲೀಸರು ಈ ಹಿಂದೆ ಮಾಡಿದಂತೆ ಏಕಮುಖ ದಾರಿ (ಒನ್ ವೇ) ಯನ್ನಾದರೂ ಮಾಡಲಿ ಎಂಬುದು ಸಾರ್ವಜನಿಕರ ಹಕ್ಕೊತ್ತಾಯವಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑