Tel: 7676775624 | Mail: info@yellowandred.in

Language: EN KAN

    Follow us :


ಕರೋನಾ ಭೀತಿ, ಮಾಸ್ಕ್ ದಂಧೆಗಿಳಿದ ಮೆಡಿಕಲ್ಸ್

Posted date: 17 Mar, 2020

Powered by:     Yellow and Red

ಕರೋನಾ ಭೀತಿ, ಮಾಸ್ಕ್ ದಂಧೆಗಿಳಿದ ಮೆಡಿಕಲ್ಸ್

ಚನ್ನಪಟ್ಟಣ: ಸಾರ್ವಜನಿಕರಿಗೆ ಕರೋನಾ ಬಗ್ಗೆ ಇರುವ ಭೀತಿಯನ್ನೇ ಬಂಡವಾಳ ಮಾಡಿಕೊಂಡ ಕೆಲ ಮೆಡಿಕಲ್ ನ ಮಾಲೀಕರು ಮುಖಗವಸುಗಳಿಗೆ (ಮಾಸ್ಕ್) ಮೂಲ ಬಂಡವಾಳಕ್ಕಿಂತ ಕನಿಷ್ಠ ಹತ್ತು ಪಟ್ಟು ಹೆಚ್ಚು ಹಣಕ್ಕೆ ಮಾರಾಟ ಮಾಡುತ್ತಿರುವುದರ ಬಗ್ಗೆ ಮಾಹಿತಿ ಪಡೆದ ಸಂಬಂಧಿಸಿದ ಅಧಿಕಾರಿಗಳು ಇಂದು ದಾಳಿ ನಡೆಸಿ ದಂಡ ವಿಧಿಸಿದ್ದಾರೆ.


ದುಬಾರಿ ಬೆಲೆಗೆ ಮಾಸ್ಕ್ ಮಾರಾಟ ಮಾಡುತ್ತಿದ್ದ ಮೆಡಿಕಲ್ ಮತ್ತು ಕೆಲ ಅಂಗಡಿಗಳ ಮೇಲೆ ಜಿಲ್ಲಾ ಸಹಾಯಕ ಔಷಧ ನಿಯಂತ್ರಕರು ಮತ್ತು ಕಾನೂನು ಮಾಪನ ಶಾಸ್ತ್ರ ವಿಭಾಗದ ಅಧಿಕಾರಿಗಳು ಜಂಟಿ ದಾಳಿ ನಡೆಸಿ ಒಂದು ಮೆಡಿಕಲ್ ಮತ್ತು ಒಂದು ಅಂಗಡಿಗೆ ದಂಡ ವಿಧಿಸಿದ್ದು ಮತ್ತೊಂದು ಮೆಡಿಕಲ್ ನವರು ಗುರುವಾರ ಕಛೇರಿಗೆ ಬಂದು ದಂಡ ಪಾವತಿಸುವುದಾಗಿ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.


ಮುಖಗವಸುಗಳಿಗೆ ದುಬಾರಿ ಬೆಲೆ ಪಡೆಯಲಾಗುತ್ತಿದೆ ಎಂದು ಸಾರ್ವಜನಿಕರಿಂದ ವ್ಯಾಪಕ ದೂರು ಕೇಳಿ ಬಂದಿತ್ತು. ಈ ಸಂಬಂಧ ಜಿಲ್ಲಾಧಿಕಾರಿ ಮತ್ತು ಕಾರ್ಯನಿರ್ವಹಣಾಧಿಕಾರಿಗಳು ಸಹ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ದಾಳಿನಡೆಸಿದ ಅಧಿಕಾರಿಗಳು ಮೂರು ಅಂಗಡಿಗಳಿಗೆ 5 ಸಾವಿರ ರೂ. ದಂಡವನ್ನು ಸ್ಥಳದಲ್ಲೇ ವಿಧಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡದಂತೆ ತಾಕೀತು ಮಾಡಿದ್ದಾರೆ.


ನಗರದ ಲೈಫ್‍ಕೇರ್, ಪೇಟೆ ಬೀದಿಯ ರತ್ನ ಮೆಡಿಕಲ್ಸ್ ದಂಡ ವಿಧಿಸಿರುವ ಮೆಡಿಕಲ್ ಗಳು, ಇನ್ನು ಖಾಸಗಿಯಾಗಿ ಮಾಸ್ಕ್ ಗಳನ್ನು ಮಾರುತ್ತಿದ್ದ ಶ್ರೀನಿವಾಸ ಸ್ಟೋರ್ ಗೂ ದಂಡ ವಿಧಿಸಲಾಗಿದೆ.


ಎಚ್ಚರಿಕೆ ನೀಡಿದ ಅಧಿಕಾರಿಗಳು:

ಮೂರರಿಂದ ನಾಲ್ಕು ರೂಪಾಯಿಗೆ ಮಾರಾಟ ಮಾಡಬೇಕಿದ್ದ ಮಾಸ್ಕ್ ಗಳನ್ನು ದಾಸ್ತಾನು ಇಲ್ಲ ಎಂಬ ನೆಪ ಹೇಳಿ ೨೦ ರಿಂದ ೩೦ ರೂಪಾಯಿಗಳಿಗೆ ಮಾರಾಟ ಮಾಡಲಾಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸಾರ್ವಜನಿಕರಿಗೆ ಕೊರೋನಾ ಹಿನ್ನೆಲೆಯಲ್ಲಿ ಎದುರಾಗಿರುವ ಆತಂಕವನ್ನು ಲಾಭಮಾಡಿಕೊಂಡು ದುಬಾರಿ ಬೆಲೆ ಪಡೆಯುವುದು ಕಾನೂನು ಬಾಹೀರವಾಗಿದ್ದು, ಅಂತಹ ಅಂಗಡಿ ಮತ್ತು ಮೆಡಿಕಲ್ಸ್ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಹಾಗೂ ಸೋಂಕು ಇರುವವರು ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಮಾತ್ರ ಮಾಸ್ಕ್ ಗಳನ್ನು ಧರಿಸಿದರೇ ಸಾಕು. ಸಾರ್ವಜನಿಕರೆಲ್ಲರಿಗು ಅವಶ್ಯಕತೆ ಇಲ್ಲ ಎಂದು ಅಧಿಕಾರಿಗಳು ಈ ಸಂದರ್ಭದಲ್ಲಿ ಪುನರುಚ್ಚರಿಸಿದರು.


ದಾಳಿಯಲ್ಲಿ ಜಿಲ್ಲಾ ಸಹಾಯಕ ಔಷಧ ನಿಯಂತ್ರಕರಾದ ಸುರೇಶ್, ಕೆಂಪಯ್ಯ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಕನಕಪುರ ವಿಭಾಗದ ನಿರೀಕ್ಷಕ  ಎನ್.ಟಿ.ರಾಮಚಂದ್ರು ದಾಳಿಯಲ್ಲಿ ಪಾಲ್ಗೊಂಡಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑