Tel: 7676775624 | Mail: info@yellowandred.in

Language: EN KAN

    Follow us :


ನಾಳೆ ಮಾಂಸದಂಗಡಿಗಳಿಗೆ ಎಚ್ಚರಿಕೆಯ ಪರ್ಮಿಷನ್ ನೀಡಿದ ಅಧಿಕಾರಿಗಳು

Posted date: 26 Mar, 2020

Powered by:     Yellow and Red

ನಾಳೆ ಮಾಂಸದಂಗಡಿಗಳಿಗೆ ಎಚ್ಚರಿಕೆಯ ಪರ್ಮಿಷನ್ ನೀಡಿದ ಅಧಿಕಾರಿಗಳು

ಸರ್ಕಲ್ ನ ಒಂದು ಸಾಂದರ್ಭಿಕ ಚಿತ್ರ

ನ್ನಪಟ್ಟಣ: ಯುಗಾದಿ ಹಬ್ಬದ ಮಾರನೆಯ ದಿನ ನಡೆಯುವ ಹೊಸತೊಡಕು ಗಿಗೆ ಅನುಕೂಲವಾಗುವಂತೆ ಹಾಗೂ ಮಾಂಸ ಪ್ರಿಯರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಲು ಮಾಂಸ ಮತ್ತು ಕೋಳಿ ಅಂಗಡಿಗಳಿಗೆ ಅನುಮತಿ ನೀಡಲಾಗಿದೆ.


ನಗರದ ಬಹುತೇಕ ಮಾಂಸದಂಗಡಿಗಳ ಮನವಿ ಮೇರೆಗೆ ಅವಕಾಶ ನೀಡಿರುವ ತಾಲ್ಲೂಕು ಆಡಳಿತವು ಒಮ್ಮೆಲೆ ಗ್ರಾಹಕರು ಮುಗಿಬೀಳದಂತೆ, ಕನಿಷ್ಠ ಒಂದು ಮೀಟರ್ ವೃತ್ತ (ಸರ್ಕಲ್) ಹಾಕಿ ಕ್ಯೂ ನಿಂತು ಒಬ್ಬರ ನಂತರ ಒಬ್ಬರು ಮಾಂಸ ಖರೀದಿಸಬೇಕೆಂದು ಸೂಚಿಸಲಾಗಿದ್ದು ಈ ವೇಳೆ ಮಾಂಸದ ಮಾಂಸ ಕಡಿಯುವವರು ಮತ್ತು ತೆಗೆದುಕೊಳ್ಳುವ ಗ್ರಾಹಕರೂ ಸಹ ಮಾಸ್ಕ್ ಧರಿಸಬೇಕೆಂದು ಸೂಚಿಸಿದ್ದಾರೆ.


ಈ ರೀತಿಯ ಕಟ್ಟುನಿಟ್ಟಿನ ಆದೇಶ ಬರುತ್ತದೆ ಎಂದು ನಮಗೆ ಗೊತ್ತಿರಲಿಲ್ಲ. ಈಗಾಗಲೇ ಕುರಿ ಮತ್ತು ಮೇಕೆಗಳಿಗೆ ಹದಿನೈದು ಲಕ್ಷ ಬಂಡವಾಳ ಹೂಡಿದ್ದೇನೆ. ನಾಳೆ ಅನುಮತಿ ಸಿಕ್ಕಿರುವುದರಿಂದ ಗ್ರಾಹಕರಿಗೆ ಆದ್ಯತೆಯ ಮೇರೆಗೆ ಹಾಗೂ ಅಂತರ ಕಾಯ್ದುಕೊಂಡು ಮಾಂಸ ನೀಡುತ್ತೇವೆ. ಅಂತರ ಕಾಯ್ದುಕೊಳ್ಳಲು ಅಂಗಡಿಯ ಮುಂದೆ ಕಟ್ಟಣೆ ಕಟ್ಟುತ್ತಿದ್ದೇವೆ.

*ನಾಗೇಂದ್ರ ಮಟನ್ ಸ್ಟಾಲ್ ಮಾಲೀಕರು. ಮಳೂರು.*


ಕೋಳಿ ಮಾಂಸ ಪ್ರೋಟೀನ್ ಅಂಶವುಳ್ಳದಾಗಿದೆ ಎಂದು ವೈಜ್ಞಾನಿಕವಾಗಿ ತಿಳಿಸಿದರೂ ಸಹ ಈ ಹಿಂದೆ ಕೇಳುವವರಿಲ್ಲದೆ ಹೂಳಬೇಕಾದ ಪರಿಸ್ಥಿತಿ ಬಂದಿತು. ಈಗ ತಾಲ್ಲೂಕು ಆಡಳಿತ ಅನುಮತಿ ನೀಡಿರುವುದರಿಂದ ಅದನ್ನು ಒಳ್ಳೆಯ ರೀತಿಯಲ್ಲಿ ರೋಗಾಣು ಹರಡದಂತೆ ಸದುಪಯೋಗ ಪಡಿಸಿಕೊಳ್ಳುತ್ತೇವೆ.


*ಎ ಜಿ ಸ್ವಾಮಿ. ಎಜಿಎಸ್ ಕೋಳಿ ಅಂಗಡಿ ಮಾಲೀಕರು.*


*ಹಳ್ಳಿಗಳಲ್ಲಿಯೂ ಸಹ ಜನರು ಗುಂಪುಗೂಡದೇ ಒಬ್ಬರ ನಂತರ ಮತ್ತೊಬ್ಬರು ಅಂತರ ಕಾಯ್ದುಕೊಂಡು ಮಾಂಸ ಖರೀದಿಸುವ   ಮೂಲಕ ರೋಗಾಣು  ಹರಡದಂತೆ ಎಚ್ಚರವಹಿಸಬೇಕು. ಗುಂಪುಗೂಡಿರುವುದು ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು.*

*ಸುದರ್ಶನ್, ದಂಡಾಧಿಕಾರಿಗಳು.*


*ಮಿನಿಸ್ಟ್ರಿ ಆಫ್ ಹೋಮ್ ಅಫೇರ್ಸ್ ಆರ್ಡರ್ ನಂ ೪೦-೩/೨೦ಡಿ ೪ ರ ಪ್ರಕಾರ ಮಾಂಸದಂಗಡಿಗಳಿಗೆ ಅನುಮತಿ ನೀಡಿದ್ದು, ಮಾಲೀಕರು ಗ್ರಾಹಕರಿಗೆ ಒಂದು ಮೀಟರ್ ಅಂತರದಲ್ಲಿ ವೃತ್ತ ಹಾಕಿ ನಿಲ್ಲಿಸಿ, ಒಬ್ಬರಾದ ನಂತರ ಮತ್ತೊಬ್ಬರಿಗೆ ನೀಡುವಂತೆ ಸೂಚಿಸಲಾಗಿದೆ. ಗ್ರಾಹಕರು ಸಹ ಅಂತರ ಕಾಯ್ದುಕೊಂಡು ಖರೀದಿಸಬೇಕು. ಜನರು ಗುಂಪುಗೂಡದಂತೆ ಎಚ್ಚರಿಕೆವಹಿಸಲಾಗುತ್ತದೆ.*

*ಶಿವನಂಕಾರಿಗೌಡ, ಪೌರಾಯುಕ್ತರು.*


*ಈಗಾಗಲೇ ನಮ್ಮ ಪೋಲೀಸರು ರೋಗಾಣು ತಡೆಯುವ ನಿಟ್ಟಿನಲ್ಲಿ ಜನ ಗುಂಪುಗೂಡದಂತೆ ಎಚ್ಚರಿಕೆ ವಹಿಸಿದ್ದಾರೆ. ನಾಳೆಯೂ ಸಹ ಎಚ್ಚರಿಕೆ ವಹಿಸಲಾಗುತ್ತದೆ.*

*ಓಂಪ್ರಕಾಶ್, ಡಿವೈಎಸ್ಪಿ.*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑