Tel: 7676775624 | Mail: info@yellowandred.in

Language: EN KAN

    Follow us :


ಗ್ರಾಮದವರ ಮನೆ ಬಾಗಿಲಿಗೆ ಅಡುಗೆ ಸಾಮಗ್ರಿ ಒದಗಿಸಲು ಚಕ್ಕೆರೆ ಪಂಚಾಯತಿಯಿಂದ ಸಿದ್ಧತೆ

Posted date: 29 Mar, 2020

Powered by:     Yellow and Red

ಗ್ರಾಮದವರ ಮನೆ ಬಾಗಿಲಿಗೆ ಅಡುಗೆ ಸಾಮಗ್ರಿ ಒದಗಿಸಲು ಚಕ್ಕೆರೆ ಪಂಚಾಯತಿಯಿಂದ ಸಿದ್ಧತೆ

ಕೋವಿಡ್-೧೯ ಹರಡದಂತೆ ೨೧ ದಿನಗಳ ಕಾಲ ಮನೆಯಿಂದ ಹೊರಬರದಂತೆ ಸಾರ್ವಜನಿಕರಿಗೆ ತಿಳಿಸಲಾಗಿದೆ. ಸಾರ್ವಜನಿಕರು ತಮಗೆ ಬೇಕಿರುವ ಅಡುಗೆ ಸಾಮಗ್ರಿಗಳನ್ನು ಪಡೆಯಲು ಕಷ್ಟ ಅನುಭವಿಸುತ್ತಿದ್ದಾರೆ. ಇದನ್ನು ತಡೆಯಲು ಚನ್ನಪಟ್ಟಣ ತಾಲ್ಲೂಕಿನ ಚಕ್ಕರೆ ಗ್ರಾಮ ಪಂಚಾಯಿತಿಯಿಂದ ಮನೆ ಬಾಗಿಲಿಗೆ ಅಡುಗೆ ಸಾಮಗ್ರಿಗಳನ್ನು ತಲುಪಿಸಲು ಪ್ರಯತ್ನ ನಡೆಸಲಾಗುತ್ತಿದೆ.


ಗ್ರಾಮದಲ್ಲಿ ಪಡಿತರ ಅಂಗಡಿಗಳಿಂದ ಅಕ್ಕಿ ಮತ್ತು ರಾಗಿಯನ್ನು ಮಿತವ್ಯಯವಾಗಿ ನೀಡಲಾಗುತ್ತದೆ. ಮಿತವ್ಯಯವಾಗಿ ಸಾಮಾನ್ಯವಾಗಿ ಅಡುಗೆ ಮಾಡಿಕೊಂಡು ಜೀವನ ನಡೆಸಲು ಬೇಕಿರುವ ಅಗತ್ಯ ವಸ್ತುಗಳನ್ನು ಪಟ್ಟಿ ಮಾಡಿಕೊಳ್ಳಲಾಗಿದೆ.  ಗ್ರಾಮದಲ್ಲಿ ಮೊದಲ ಆದ್ಯತೆಯ ಮೇಲೆ ೧೦೦ ಬಡ ಕುಟುಂಬಗಳಿಗೆ ನೀಡಲು ಯೋಜಿಸಲಾಗಿದೆ.


೧ ಕೆ.ಜಿ ಬೇಳೆ, ೧ ಕೆ.ಜಿ ಎಣ್ಣೆ, ೨ ಕೆ.ಜಿ ರವೆ, ಉಪ್ಪು, ಟೀ ಪುಡಿ, ಸಕ್ಕರೆ, ಉರುಳಿ ಕಾಳು, ಅವರೇ ಕಾಳು, ಸಾಂಬಾರು ಪುಡಿ, ಈರುಳ್ಳಿಯನ್ನು ಪ್ಯಾಕೆಟ್ ಮಾಡಲಾಗಿದೆ. ಮೊದಲ ಆದ್ಯತೆ ಮೇರೆಗೆ ೧೦೦ ಕುಟುಂಬಗಳಿಗೆ ಮಾಡಿಕೊಳ್ಳಲಾಗುತ್ತಿದ್ದು, ಸೋಮವಾರ ಗ್ರಾಮದ ಮನೆಗೆ ತಲುಪಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಗ್ರಾಮದಲ್ಲಿ ಒಂದು ವರ್ಷದ ಹಿಂದೆಯೇ ಕಟ್ಟಡ ಕಾರ್ಮಿಕರು ಹಾಗೂ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕಾರ್ಯನಿರ್ವಹಿಸುವ ೧೦ ಕುಟುಂಬಗಳಿದ್ದು ಅವರಿಗೆ ಸದರಿ ಆಹಾರ ಸಾಮಗ್ರಿಗಳ ಜೊತೆಗೆ ಪಡಿತರ ಚೀಟಿ ಇಲ್ಲದಿರುವುದರಿಂದ ಅಕ್ಕಿ ಸಹ ನೀಡಲಾಗುವುದು. 


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ ಅವರು ಆಹಾರ ಪದಾರ್ಥಗಳಿಗಾಗಿ ಗ್ರಾಮೀಣ ಜನರು ತೊಂದರೆ ಅನುಭವಿಸಬಾರದು ಎಂಬ ದೃಷ್ಠಿಯಿಂದ ಕ್ರಮ ಕೈಗೊಂಡಿದ್ದು, ಚಕ್ಕೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯತೀಶ್ ಅವರು ಗ್ರಾಮ ಪಂಚಾಯಿತಿ ಲೆಕ್ಕ ಶೀರ್ಷಿಕೆ ೧ ರಡಿ ಇರುವ ಅನುದಾನದಲ್ಲಿ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑