ಯುವ ಸಂಘಗಳಿಗೆ ಕ್ರೀಡಾ ಕಿಟ್ ವಿತರಣೆ
ಕನಕಪುರ: ನಗರದ ಮೈದಾನದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಯಿತಿ ಯುವ ಸಬಲೀಕರಣ ಮತ್ತು ಕ್ರೀಡೆ ಇಲಾಖೆ ಕನಕಪುರ ಮತ್ತು ರಾಮನಗರ ಜಿಲ್ಲೆ ಇವರ ಸಹಯೋಗದೊಂದಿಗೆ ಏರ್ಪಡಿಸಿದ್ದ 2017-2018ನೇ ಸಾಲಿನ ಯುವ ಚೈತನ್ಯ ಯೋಜನೆಯಡಿ ಯುವ ಸಂಘಗಳಿಗೆ ಸಂಸದ ಡಿ.ಕೆ. ಸುರೇಶ್ ಕ್ರೀಡಾ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಸಂಸದ ಡಿ.ಕೆ. ಸುರೇಶ್ ಮಾತನಾಡಿ ಇಂದಿನ ಆಧುನಿಕ ತಂತ್ರಜ್ಞಾನದಲ್ಲಿ ಯುವಕರು ಮಾರುಹೋಗಿ ಕ್ರೀಡೆಯಲ್ಲಿಹೆಚ್ಚಿನ ಆಸಕ್ತಿಯನ್ನು ಕಳೆದು ಕೊಳ್ಳುತ್ತಿರುವುದು ದುರಂತ ಸಂಗತಿ ಎಂದು ಸಂಸದ ಡಿ.ಕೆ.ಸುರೇಶ್ ಆತಂಕ ವ್ಯಕ್ತ ಪಡಿಸಿದರು.
ಈ ಹಿಂದೆ ಕ್ರೀಡೆಗೆ ಯುವಕರು ಮತ್ತು ಯುವತಿಯರು ಹೆಚ್ಚಿನ ಗಮನವನ್ನು ನೀಡುತ್ತಿದ್ದರೂ ಆದರೆ ಇಂದಿನ ಕಂಪ್ಯೂಟರ್ ಯುಗದಲ್ಲಿ ಆಸಕ್ತಿಯನ್ನು ತೋರಿಸುವವ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ ಇದರಿಂದ ಯುವಕರು ಮೈದಾನದ ಕಡೆ ತಲೆ ಹಾಕುವುದನ್ನೇ ಮರೆತ್ತು ಬಿಟ್ಟಿದ್ದಾರೆ ಎಂದು ಹೇಳಿದರು.
ಈಗ ನೀವು ಯುವ ವ್ಯವಸ್ಥೆಯಲ್ಲಿದ್ದೀರಿ ನಿಮ್ಮ ಮೆದುಳಿಗೆ ಹೆಚ್ಚಿನ ಕೆಲಸವನ್ನು ಕೊಟ್ಟು ಮಾನಸಿಕ ಮತ್ತು ದೈಹಿಕವಾಗಿ ಸಧೃಡಲಾಗಲು ಮುಂದಾಗಬೇಕು ಇದರಿಂದ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ ಎಂದರು.
ಯುವಕರು ಉದ್ಯೋಗ ಹುಡುಕುವುದು ಒಂದೇ ಅಲ್ಲ ನಿಮ್ಮ ಜೀವನವನ್ನು ಸಾಗಿಸುವುದರ ಜತೆಗೆ ಸಾಂಸ್ಕøತಿಕ ಮತ್ತು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡಾಗ ಮಾತ್ರ ನೀವು ಬೆಳೆವಣಿಗೆಯಾಗುತ್ತೀರಿ ಆ ನಿಟ್ಟಿನಲ್ಲಿ ಪ್ರತಿಯೊಬ್ಬ ಯುವಕರು ಮತ್ತು ಯುವತಿಯರು ಮುಂದಾಗಬೇಕು ಎಂದು ಕರೆ ನೀಡಿದರು.
ಯುವಜನ ಮತ್ತು ಕ್ರೀಡೆ ಇಲಾಖೆ ಗ್ರಾಮೀಣ ಪ್ರದೇಶದ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡಲು ಪ್ರತಿ ಹೋಬಳಿ, ತಾಲೂಕು ಮಟ್ಟದ ಕ್ರೀಡೆ ಚಟುವಟಿಕೆಗಳಿಗೆ ಉತ್ತೇಜನ ನೀಡಲು 5 ರಿಂದ 50 ಸಾವಿರದವರೆಗೆ ಧನ ಸಹಾಯವನ್ನು ನೀಡುತ್ತಿದೆ ಅದನ್ನು ಪಡೆದು ಕೊಳ್ಳಬೇಕು ಎಂದು ತಿಳಿಸಿದರು.
ತಾಲೂಕು ಪಂಚಾಯಿತಿ ಅಧ್ಯಕ್ಷ ರಾಜಶೇಖರ್, ನಗರಸಭೆ ಅಧ್ಯಕ್ಷ ಕೆ.ಎನ್.ದಿಲೀಪ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಾಯಸಂದ್ರರವಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಅನಿತಾ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಎಸ್.ರವಿ, ಜಿ.ಪಂ. ಸದಸ್ಯರಾದ ಬಸಪ್ಪ, ಶಂಕರ್, ತಾಲೂಕು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಪುರುಶೋತ್ತಮ್, ರಾಜ್ಯ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಕೆಂಪರಾಜು, ಯುವ ಅಧ್ಯಕ್ಷ ಅನಿಲ್ಕುಮಾರ್, ಚಂದ್ರಶೇಖರ್, ನಾಗರಾಜು, ಅಮರ್ ಸೇರಿದಂತೆ ಅನೇಕರು ಹಾಜರಿದ್ದರು.
ತಾಲ್ಲೂಕಿನ 257 ಯುವಕ ಮತ್ತು ಯುವತಿಯರ ಸಂಘದ ತಂಡಗಳಿಗೆ ಸುಮಾರು 40 ಸಾವಿರ ರೂ ಕ್ರೀಡಾ ಕಿಟ್ ಸಾಮಾಗ್ರಿಗಳನ್ನು ನೀಡಲಾಯಿತು.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು