Tel: 7676775624 | Mail: info@yellowandred.in

Language: EN KAN

    Follow us :


ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಇಪ್ಪತೈದು ವೆಂಟಿಲೇಟರ್‌ ವ್ಯವಸ್ಥೆ: ಡಾ. ಅಶ್ವತ್ಥನಾರಾಯಣ

Posted date: 05 Apr, 2020

Powered by:     Yellow and Red

ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಇಪ್ಪತೈದು ವೆಂಟಿಲೇಟರ್‌ ವ್ಯವಸ್ಥೆ: ಡಾ. ಅಶ್ವತ್ಥನಾರಾಯಣ


ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಇಪ್ಪತೈದು ವೆಂಟಿಲೇಟರ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. 


ಜಿಲ್ಲಾಡಳಿತದ ವತಿಯಿಂದ ನಿರ್ಮಿಸಿರುವ ಕೊರೊನಾ (ಕೊವಿಡ್‌-೧೯) ರೆಫೆರಲ್ ಆಸ್ಪತ್ರೆಗೆ ಭೇಟಿ ನೀಡಿ, ಕೊವಿಡ್‌ ನಿಯಂತ್ರಣಕ್ಕೆ ರಾಮನಗರ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರ ಜತೆ ಅವರು ಮಾತನಾಡಿದರು. 


ವೆಂಟಿಲೇಟರ್‌ ಹಾಗೂ  ಪರ್ಸನಲ್‌ ಪ್ರೊಟೆಕ್ಟೀವ್‌ ಎಕ್ವಿಪ್ಮೆಂಟ್‌ ಕಿಟ್‌ಗಳ ಕೊರತೆ ಆಗದಂತೆ ಎಚ್ಚರವಹಿಸಲಾಗುವುದು. ಪ್ರತಿ ಜಿಲ್ಲೆಯಲ್ಲೂ ೨೫ ವೆಂಟಿಲೇಟರ್‌ ವ್ಯವಸ್ಥೆ ಮಾಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಅವರು ತಿಳಿಸಿದರು. 


ಕೊವಿಡ್-೧೯ ಸೋಂಕು ನಿಯಂತ್ರಣ ಸಂಬಂಧ ರಾಮನಗರ ಜಿಲ್ಲಾಡಳಿತ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, "ಅದೃಷ್ಟವಷಾತ್ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣ ವರದಿಯಾಗಿಲ್ಲ. ಆದರೂ ಜಿಲ್ಲಾಡಳಿತ ನಿರ್ಲಕ್ಷ್ಯ ಮಾಡದೆ ಮುಂಜಾಗ್ರತೆ ವಹಿಸಿ ಉತ್ತಮ ಕಾರ್ಯ ನಿರ್ವಹಿಸುತ್ತಿದೆ. ಸೋಂಕಿನ ಶಂಕೆ ಮೇರೆಗೆ ೦೮ ಜನರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ ಎಂದರು. 


*ವರ್ಷದ ಕೊನೆಗೆ ಹೊಸ ಆಸ್ಪತ್ರೆ*

ಜಿಲ್ಲೆಯಲ್ಲಿ ೧೦೦ ಹಾಸಿಗೆಯ ಆಸ್ಪತ್ರೆ ಇದ್ದು, ಹೆಚ್ಚುವರಿಯಾಗಿ ೧೦೦ ಹಾಸಿಗೆಯ ವ್ಯವಸ್ಥೆ ಮಾಡಿಕೊಳ್ಳಲಾಗುವುದು. ೪೦ ಆಕ್ಸಿಜನ್‌ ಬೆಡ್‌, ೦೪ ವೆಂಟಿಲೇಟರ್ ವ್ಯವಸ್ಥೆ ಇದೆ.  ಹೊಸ ಜಿಲ್ಲಾ ಆಸ್ಪತ್ರೆ ಕಟ್ಟಡ ಅಪೂರ್ಣವಾಗಿದ್ದು, ಆದಷ್ಟು ಬೇಗ ಕೆಲಸ ಮುಗಿಸುವಂತೆ ಮುಖ್ಯ ಎಂಜನಿಯರ್‌ಗೆ ಸೂಚಿಸಲಾಗಿದೆ. ವರ್ಷದ ಕೊನೆಗೆ ಹೊಸ ಜಿಲ್ಲಾ ಆಸ್ಪತ್ರೆ ಕಾಮಗಾರಿ ಪೂರ್ಣಗೊಳ್ಳುವುದು ಎಂದು ಮಾಹಿತಿ ನೀಡಿದರು. 


*ಎಪಿಎಂಸಿಯಲ್ಲಿ ಮಾವು ಮಂಡಿ*

ಎಪಿಎಂಸಿ ಗಳಲ್ಲಿ ಮಾವು ಮಂಡಿಗಳನ್ನು ತೆರೆಯಲು ತೀರ್ಮಾನಿಸಲಾಗಿದೆ. ಜಿಲ್ಲೆಯಲ್ಲೇ ಮೂರು ಮಾವು ಮಾರುಕಟ್ಟೆ ತೆರೆಯಲಾಗುವುದು. ಖಾಸಗಿಯವರು ಸಹ ಮಾರುಕಟ್ಟೆ ಮಾಡಲು ಮುಂದೆ ಬಂದಿದ್ದಾರೆ. ಸುರಕ್ಷತಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಅವಕಾಶ ನೀಡಲಾಗುತ್ತದೆ. ಜತೆಗೆ ಸಾಗಣೆಗೂ ವ್ಯವಸ್ಥೆ ಕಲ್ಪಿಸಿ, ಮಾವು ಬೆಳೆಗಾರರಿಗೆ ಒಳ್ಳೆಯ ದರ ಸಿಗುವ ಹಾಗೆ ಮಾಡುವುದು ನಮ್ಮ ಉದ್ದೇಶ ಎಂದು ತಿಳಿಸಿದರು. 

 

*ಕಾರ್ಮಿಕರಿಗೆ ಊಟ/ಪಡಿತರ*

ಈವರೆಗೆ ಸುಮಾರು ೫,೦೦೦ ಕೂಲಿ ಕಾರ್ಮಿಕರಿಗೆ ಪಡಿತರ ಒದಗಿಸಲಾಗಿದೆ,  ೨,೦೦೦ ಜನಕ್ಕೆ ಊಟದ ವ್ಯವಸ್ಥೆ ಮಾಡಲಾಗಿದೆ. ಶ್ರಮಿಕವರ್ಗದವರು, ಅಸಹಾಯಕರು ಸೇರಿದಂತೆ ಯಾರೂ ಖಾಲಿ ಹೊಟ್ಟೆಯಲ್ಲಿ ಇರಬಾರದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ.  ದಾನಿಗಳು, ಸರ್ಕಾರದ ಕಡೆಯಿಂದಲೂ ಪಡಿತರ ವಿತರಣೆ ವ್ಯವಸ್ಥೆ ಆಗಿದೆ ಎಂದು ಡಾ. ಅಶ್ವತ್ಥನಾರಾಯಣ ತಿಳಿಸಿದರು. 


*ಮಾಸ್ಕ್‌ ಕಲ್ಚರ್‌ ಇರಲಿ*

ಮುಂಜಾಗ್ರತಾ ಕ್ರಮವಾಗಿ ಹೊರಗೆ ಓಡಾಡುವಾಗ ಮಾಸ್ಕ್‌ ಧರಿಸುವುದು ಉತ್ತಮ. ಗಾರ್ಮೆಂಟ್ಸ್‌ಗಳಲ್ಲಿ ಮಾಸ್ಕ್‌ ಸಿದ್ಧವಾಗಬೇಕು, ಬಟ್ಟೆಯ ಮಾಸ್ಕ್ ಪುನರ್‌ ಬಳಕೆಗೆ ಯೋಗ್ಯವಾಗಿರುತ್ತವೆ,"ಎಂದು ಅವರು ಇದೇ ವೇಳೆ ಹೇಳಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑