Tel: 7676775624 | Mail: info@yellowandred.in

Language: EN KAN

    Follow us :


ಸ್ವಿಪ್ ವತಿಯಿಂದ ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ಸಿಇಒ ಸೂಚನೆ

Posted date: 05 Mar, 2018

Powered by:     Yellow and Red

ಸ್ವಿಪ್ ವತಿಯಿಂದ ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ಸಿಇಒ ಸೂಚನೆ

ರಾಮನಗರ : ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಮಾಣದ ಮತದಾನ ಆಗುವಂತೆ ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ (ಸ್ವೀಪ್) ಸಮಿತಿ ವತಿಯಿಂದ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾದ ವಿವಿಧ ಕಾರ್ಯಕ್ರಮಗಳ ಸಿದ್ದತೆಗೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಆರ್. ಲತಾ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಸಭೆಯನ್ನು ಆಯೋಜಿಸಲಾಗಿತ್ತು.
ಸಿಇಒ ಆರ್. ಲತಾ ಅವರು ಮಾತನಾಡಿ, ಮತದಾರರ ಜಾಗೃತಿಗಾಗಿ ಈಗಿನಿಂದಲೇ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕಿದೆ, ಅದಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸಲಾಗಿದೆ ಎಂದರು.
ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುವ ಸ್ವಿಪ್ ಜಾಗೃತಿ ಕಾರ್ಯಕ್ರಮಗಳನ್ನು ತಾಲೂಕು ಮಟ್ಟದಲ್ಲಿಯೂ ಹಮ್ಮಿಕೊಳ್ಳಬೇಕು, ತಾಲೂಕು ಮಟ್ಟದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ, ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿಗಳು ಇಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು, ಬಿಎಜಿ (ಬ್ಯಾಗ್) ಬೂತ್ ಅವೇರ್‍ನೆಸ್ ಗ್ರೂಪ್ಸ್‍ಗಳನ್ನು ಈ ಸಂದರ್ಭದಲ್ಲಿ ರಚಿಸಲಾಗುವುದು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಬೂತ್ ಮಟ್ಟದಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕಿದೆ, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಾಗಿ ಮತದಾನದ ಜಾಗೃತಿ ಮೂಡಿಸಲು ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದವರು ಹೇಳಿದರು.
ಜಿಲ್ಲೆಯ ಪದವಿ ಕಾಲೇಜುಗಳಲ್ಲಿ ಕ್ಯಾಂಪಸ್ ಅಂಬಾಸಿಡರ್‍ಗಳನ್ನು ನಿಯೋಜಿಸುವಂತೆ ಪದವಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ ಅವರು, ಪ್ರತಿ ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿ/ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಿ ಅವರನ್ನು ಕ್ಯಾಂಪಸ್ ಅಂಬಾಸಿಡರ್‍ಗಳನ್ನಾಗಿ ನಿಯೋಜಿಸಿ, ಪ್ರೌಢಶಾಲಾ ಮಟ್ಟದಲ್ಲಿ ವಿವಿಧ ರೀತಿಯ ಜಾಥಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಇದೇ ಮುಂಬರುವ ಮಾ. 8ರಂದು ಮಹಿಳಾ ದಿನಾಚರಣೆಯಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮತದಾನರ ಜಾಗೃತಿಗಾಗಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು, ಇದಕ್ಕೆ ಪೂರ್ವಭಾವಿಯಾಗಿ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸಿಇಓ ಅವರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪುಟ್ಟಸ್ವಾಮಿ ವೇದಿಕೆಯಲ್ಲಿದ್ದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಮಾರೇಗೌಡ, ಪದವಿ ಪೂರ್ಣ ಶಿಕ್ಷಣ ಇಲಾಖೆಯ ರತ್ನಮ್ಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ. ಅಮರನಾಥ್ ಸೇರಿದಂತೆ ಜಿಲ್ಲಾ ಹಾಗೂ  ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. 
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑