Tel: 7676775624 | Mail: info@yellowandred.in

Language: EN KAN

    Follow us :


ಪಡಿತರ ವಿತರಣೆ ಲೋಪ : ನ್ಯಾಯಬೆಲೆ ಅಂಗಡಿ ಅಮಾನತ್ತು

Posted date: 12 Apr, 2020

Powered by:     Yellow and Red

ಪಡಿತರ ವಿತರಣೆ ಲೋಪ : ನ್ಯಾಯಬೆಲೆ ಅಂಗಡಿ ಅಮಾನತ್ತು

ರಾಮನಗರ:ಏ/೧೨/೨೦/ಭಾನುವಾರ. ಉಚಿತ ಪಡಿತರ ವಿತರಣೆ ಆದೇಶ ಉಲ್ಲಂಘಿಸಿ ಪಡಿತರ ಕಾರ್ಡುದಾರರಿಂದ ರೂ. ೧೦ ರಿಂದ ೨೦ ರೂಪಾಯಿಗಳನ್ನು ವಸೂಲಿ ಮಾಡುತ್ತಿರುವುದು, ಹಾಗೂ ತೂಕದಲ್ಲಿ ವ್ಯತ್ಯಾಸ, ನಿಗಧಿತ ಸಮಯದಲ್ಲಿ ಪಡಿತರ ವಿತರಣೆ ಮಾಡದಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲೆಯ ೦೪ ನ್ಯಾಯಬೆಲೆ ಅಂಗಡಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಅಮಾನತ್ತುಪಡಿಸಿರುತ್ತಾರೆ.


ಕನಕಪುರ ತಾಲ್ಲೂಕಿನ ಕಸಬಾ ಹೋಬಳಿಯ ಶಿವನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನ್ಯಾಯಬೆಲೆ ಅಂಗಡಿ ಸಂಖ್ಯೆ ೫೮, ಮಾಗಡಿ ತಾಲ್ಲೂಕಿನ ಮಾಡಬಾಳ್ ಹೋಬಳಿಯ ಮಂಚನಬೆಲೆ ಗ್ರಾಮದ ಟಿ.ಎ.ಪಿ.ಸಿ.ಎಂ.ಎಸ್ (ಪರ್ಯಾಯ ವ್ಯವಸ್ಥೆ) ಕಾರ್ಯದರ್ಶಿಗಳು ನ್ಯಾಯಬಲೆ ಅಂಗಡಿ ಸಂಖ್ಯೆ ೪೧, ಚನ್ನಪಟ್ಟಣ ತಾಲ್ಲೂಕಿನ ಕೋಡಂಬಳ್ಳಿ ಗ್ರಾಮದ ಭಾರತ್ ಮಾತಾ ಮಹಿಳಾ ಸಹಕಾರಿ ಸಂಘ ನ್ಯಾಯಬೆಲೆ ಅಂಗಡಿ ಸಂಖ್ಯೆ ೭೧ ಹಾಗೂ ರಾಮನಗರದ ಕಸಬಾ ಹೋಬಳಿಯ ಬಿಳಗುಂಬ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕರು ಬಿ.ವಿ. ರಾಜೇಂದ್ರ ನ್ಯಾಯಬೆಲೆ ಅಂಗಡಿ ಸಂಖ್ಯೆ ೧೭ ಯನ್ನು ಅಮಾನತ್ತು ಪಡಿಸಿರುತ್ತಾರೆ.


ಕನಕಪುರ ತಾಲ್ಲೂಕಿನ ಅಜೀಜ್‌ನಗರ, ಕನಕಪುರ ಟೌನ್‌ನ ಶಫೀಉಲ್ಲಾ ಎಂಬ ವ್ಯಕ್ತಿಯು ಅಕ್ರಮವಾಗಿ ಸಂಗ್ರಹಿಸಿದ ಅಂದಾಜು ೫೦ ಕೆ.ಜಿ. ತೂಕದ ಅಕ್ಕಿ ತುಂಬಿದ ನಾಲ್ಕು ಪ್ಲಾಸ್ಟಿಕ್ ಚೀಲಗಳು, ೫೦ ಕೆ.ಜಿ. ತೂಕದ ೧೬ ಚೀಲ, ಅಕ್ಕಿ, ಹುರುಳಿ ತುಂಬಿದ ೦೫ ಚೀಲಗಳು ಮತ್ತು ೩೫ ಕೆ.ಜಿ. ತೂಕದ ಹೆಸರುಬೇಳೆ ಚೀಲದ ದಾಸ್ತಾನನ್ನು ವಶಪಡಿಸಿಕೊಂಡಿದ್ದು, ಈ ವ್ಯಕ್ತಿಯ ಮೇಲೆ ಅಪರಾಧ ಸಂಖ್ಯೆ: ೦೦೩೨/೨೦೨೦ ಪ್ರಕರಣ ದಾಖಲಿಸಿದೆ.


ಕರೋನ ಸೋಂಕಿನ ಹಿನ್ನೆಲೆಯಲ್ಲಿ ಜನ ಸಂಕಷ್ಪದಲ್ಲಿರುವ ಕಾರಣ ಸರ್ಕಾರ ಎರಡು ತಿಂಗಳ ಪಡಿತರವನ್ನು ಏಕ ಕಾಲದಲ್ಲಿ ಉಚಿತವಾಗಿ ವಿತರಣೆ ಮಾಡಲು ಸೂಚಿಸಿದ್ದು, ಇದನ್ನು ದುರುಪಯೋಗಪಡಿಸಿಕೊಂಡು ಕಾರ್ಡುದಾರರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ತಪಾಸಣೆ ಮಾಡಿ ಕ್ರಮ ಕೈಗೊಳ್ಳಲಾಗಿದೆ.


ರಾಮನಗರ ಜಿಲ್ಲೆಯಲ್ಲಿ ಇನ್ನಿತರ ನ್ಯಾಯಬೆಲೆ ಅಂಗಡಿದಾರರು ಕಡಿಮೆ ಪ್ರಮಾಣದಲ್ಲಿ ವಿತರಿಸುವುದು, ಹಣ ಪಡೆಯುವುದು, ಸರಿಯಾದ ಸಮಯಕ್ಕೆ ನ್ಯಾಯಬೆಲೆ ಅಂಗಡಿ ಬಾಗಿಲು ತೆರೆಯದಿರುವುದು, ಮುಂತಾದ ಲೋಪಗಳು ಕಂಡುಬಂದಲ್ಲಿ ಅಥವಾ ಪಡಿತರ ಚೀಟಿದಾರರಿಂದ ದೂರು ಸ್ವೀಕೃತವಾದಲ್ಲಿ ಅಂತಹ ನ್ಯಾಯ ಬೆಲೆ ಅಂಗಡಿಗಳ ವಿರುದ್ಧ ಕರ್ನಾಟಕ ಅಗತ್ಯ ವಸ್ತುಗಳ (ಸಾ.ವಿ.ಪ) ನಿಯಂತ್ರಣ ಆದೇಶ -೨೦೧೬ ರನ್ವಯ ಅಮಾನತ್ತು ರದ್ದುಪಡಿಸಲು ಸೂಕ್ತ ಕ್ರಮವಹಿಸಲಾಗುವುದು ಎಂದು ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿದಾರರಿಗೆ ಕಟ್ಟುನಿಟ್ಟಿನ ಅಂತಿಮ ಎಚ್ಚರಿಕೆಯನ್ನು  ರಾಮನಗರ ಜಿಲ್ಲೆಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ನೀಡಿರುತ್ತಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑