Tel: 7676775624 | Mail: info@yellowandred.in

Language: EN KAN

    Follow us :


ಹೆಚ್ಚಿನ ಬೆಲೆಗೆ ಸರಕು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ : ಅರ್ಚನಾ

Posted date: 14 Apr, 2020

Powered by:     Yellow and Red

ಹೆಚ್ಚಿನ ಬೆಲೆಗೆ ಸರಕು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ : ಅರ್ಚನಾ


ರಾಮನಗರ, ಏಪ್ರಿಲ್ 13 (ಕರ್ನಾಟಕ ವಾರ್ತೆ) - ಲಾಕ್ಡೌನ್ ಅವಧಿಯಲ್ಲಿ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಸರಕನ್ನು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಎಂ. ಎಸ್. ಅರ್ಚನಾ ಅವರು ಜಿಲ್ಲೆಯಲ್ಲಿರುವ ಸಗಟು ಮತ್ತು ದಿನಸಿ ಮಾರಾಟಗಾರರಿಗೆ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.


ಜಿಲ್ಲೆಯಲ್ಲಿ ಹೆಚ್ಚಿನ ಬೆಲೆಗೆ ಸರಕನ್ನು ಮಾರಾಟ ಮಾಡುತ್ತಿದ್ದಾರೆ ಎನ್ನುವ ದೂರುಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಸಹಾಯವಾಣಿಗೆ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಇಂದು ಹಠಾತ್ತನೆ ರಾಮನಗರದ ಕೆಲವೊಂದು ಅಂಗಡಿ ಮತ್ತು ಸೂಪರ್ ಮಾರ್ಕೇಟ್ಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ’ಜಿಲ್ಲೆಯಲ್ಲಿ ಅಗತ್ಯ ಸರಕು ಮತ್ತು ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ, ಅಂತಹವರ ವಿರುದ್ಧ ಕಾನೂನು ರೀತಿ ಕ್ರಮಕೈಗೊಳ್ಳುವುದಾಗಿ’ ತಿಳಿಸಿದ್ದಾರೆ.


ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದವರ ಮೇಲೆ ಪೊಟ್ಟಣ ಸಾಮಗ್ರಿಗಳ ಕಾಯ್ದೆ-2011 ರ ಪ್ರಕಾರ ನಿಯಮ (18/2) ನಿಯಮ (32)ರ ಅನ್ವಯ ಮೊಕದ್ದಮೆ ದಾಖಲಿಸುವುದರ ಜೊತೆಗೆ ಇಂತಹ ಪ್ರಕರಣಗಳು ಮುಂದೆ ಜಿಲ್ಲೆಯಲ್ಲಿ ಕಂಡುಬಂದರೆ ಇನ್ನೂ ಹೆಚ್ಚಿನ ದಂಡ ವಿಧಿಸಿ ಕಾನೂನು ರೀತ್ಯ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.


ಹಾಗೆಯೆ, ಇಂದಿನಿ ತಪಾಸಣೆಯ ವೇಳೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದವರ ಮೇಲೆ ಕ್ರಮ ಜರುಗಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು, ಕೃಷಿ ಮಾರುಕಟ್ಟೆಯ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿಗೊಳಿಸಿ ಅವರಿಂದ ಸ್ಪಷ್ಟೀಕರಣ ಪಡೆದುಕೊಂಡು ಮುಂದಿನ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.


ಸಾರ್ವಜನಿಕರಿಗೆ ಬೇಕಿರುವ ಅಗತ್ಯ ವಸ್ತುಗಳನ್ನು ಅಕ್ರಮ ಸಂಗ್ರಹಣೆ ಮಾಡಿ ಸಂಕಷ್ಟದ ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಳ್ಳುವುದು ಹಾಗೂ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರು ಕಂಡು ಬಂದಲ್ಲಿ ಪರಿಶೀಲಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.


ಈಗಾಗಲೇ ಜಿಲ್ಲೆಯಲ್ಲಿರುವ ಅಂಗಡಿಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ನಿಗದಿತ ಬೆಲೆಯಲ್ಲಿ ಮಾರಾಟ ಮಾಡುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಇದನ್ನು ಸಹ ಅನುಸರಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.


ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡು ಬಂದರೆ ಸಾರ್ವಜನಿಕರಿಗೆ ನೇರವಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯವಾಣಿ ಸಂಖ್ಯೆ 8277517672ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅವರು ಕೋರಿದ್ದಾರೆ.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑