Tel: 7676775624 | Mail: info@yellowandred.in

Language: EN KAN

    Follow us :


ಕೊರೊನಾ ತೊಲಗಿಸಿ, ರೈತರನ್ನು ಉಳಿಸಿ, ರೈತ ಸಂಘ ಹಕ್ಕೊತ್ತಾಯ

Posted date: 20 Apr, 2020

Powered by:     Yellow and Red

ಕೊರೊನಾ ತೊಲಗಿಸಿ, ರೈತರನ್ನು ಉಳಿಸಿ, ರೈತ ಸಂಘ ಹಕ್ಕೊತ್ತಾಯ

ಚನ್ನಪಟ್ಟಣ:ಏ/೨೦/೨೦/ಸೋಮವಾರ. ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ವತಿಯಿಂದ ಕೊರೊನಾ ವೈರಸ್ ತೊಲಗಿಸಿ, ರೈತರನ್ನು ಉಳಿಸಿ, ಜೀವ ಉಳಿಯಲಿ, ಜೀವನವೂ ನಡೆಯಲಿ, ಬೆಳೆಗಳಿಗೆ ಬೆಲೆ ಬರಲಿ ಎಂದು ಆಗ್ರಹಿಸಿ ಎಲ್ಲಾ ಜಿಲ್ಲೆಗಳ ಸಂಘಟನೆಗಳ ಪದಾಧಿಕಾರಿಗಳು ಸತ್ಯಾಗ್ರಹ ನಡೆಸಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಒತ್ತಾಯ ಪತ್ರ ಕಳುಹಿಸುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ರಾಮನಗರ ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಇಲ್ಲಿನ ತಹಶೀಲ್ದಾರ್ ಸುದರ್ಶನ್ ಅವರ ಮೂಲಕ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿತು.


ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿರಂತರವಾಗಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ನಿರಂತರ ಸಮಸ್ಯೆಗಳನ್ನು ಅನುಭವಿಸುತ್ತಿರುವ ರೈತರಿಗೆ ಅರಿವು ಮೂಡಿಸುತ್ತಿದೆ ಈ ಸಮುದಾಯದ ರೈತರು, ಬೆಳೆಯುವ ಹಣ್ಣು, ಹಂಪಲು, ತರಕಾರಿ ಇವುಗಳು ಮಾರಾಟವಾಗದೆ ಕಷ್ಟನಷ್ಟಗಳಿಗೆ ಒಳಗಾಗುತ್ತಿದ್ದಾರೆ. ಇವರ ಸಮಸ್ಯೆ ನೀಗಿಸಲು ಸರ್ಕಾರ ಮುಂದಾಗಬೇಕು ಎಂದು ಹಕ್ಕೊತ್ತಾಯದಲ್ಲಿ ವಿವರಿಸಲಾಗಿದೆ.


ಬಾಗಲಕೋಟೆ ಹಾಗೂ ಇತರೆ ಜಿಲ್ಲೆಗಳಲ್ಲಿ ಪಪ್ಪಾಯಿಗೆ ಸೂಕ್ತ ಮಾರುಕಟ್ಟೆ ದೊರಕದೆ ಬೀದಿಗೆ ಸುರಿಯಬೇಕಾಗಿದೆ. ರಾಯಚೂರು ಹಾಗೂ ಇತರೆ ಜಿಲ್ಲೆಗಳ ರೈತರು ಬೆಳೆದ ಈರುಳ್ಳಿ ಹಾಗೂ ಮೆಣಸಿನಕಾಯಿ ಇತರೆ ಬೆಳೆಗಳನ್ನು ಕೊಂಡುಕೊಳ್ಳುವವರಿಲ್ಲದೆ ನಷ್ಟ ಅನುಭ ವಿಸುತ್ತಿದ್ದಾರೆ. ಅಲ್ಲದೆ ರಾಜ್ಯದ ಎಲ್ಲಾ ಜಿಲ್ಲೆಯ ರೈತರು ಒಂದಲ್ಲಾ ಒಂದು ಬೆಳೆ ಬೆಳೆದು ಕೈಸುಟ್ಟುಕೊಳ್ಳುತ್ತಿದ್ದಾರೆ. ಲಾಕ್ ಡೌನ್ ಸಮಯದಲ್ಲೂ ರೈತರಿಗೆ ಎಲ್ಲಾ ರೀತಿಯ ಅನುಕೂಲಗಳನ್ನು ಮಾಡಿಕೊಡಲಾಗಿದೆ ಎಂದು ಹೇಳುತ್ತಿದ್ದರೂ ಅವು ಸಮರ್ಪಕವಾಗಿಲ್ಲ. ರೈತರು ಆತ್ಮಹತ್ಯೆಗೆ ಪ್ರಯತ್ನಿಸುವ ಮುನ್ನಾ ಸರ್ಕಾರವು ಎಚ್ಚೆತ್ತುಕೊಳ್ಳಬೇಕೆಂದು ತಹಶಿಲ್ದಾರ್ ಸುದರ್ಶನ್ ರವರಿಗೆ ಹಕ್ಕೊತ್ತಾಯ ಸಲ್ಲಿಸಿದರ


ಹಕ್ಕೊತ್ತಾಯಕ್ಕೂ ಮುನ್ನಾ ಸಂಘದ ಕಛೇರಿಯಲ್ಲಿ ಕೆಲ ಕಾಲ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿತ್ತು. ಸಲ್ಲಿಕೆಯ ಸಂದರ್ಭದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಎಂ. ರಾಮು ಹಾಗೂ ರಾಮನಗರ ಜಿಲ್ಲಾಧ್ಯಕ್ಷ ಕೆ.ಮಲ್ಲಯ್ಯ ಹಾಗೂ ಇತರೆ ಪದಾಧಿಕಾರಿಗಳು ಇದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑