Tel: 7676775624 | Mail: info@yellowandred.in

Language: EN KAN

    Follow us :


ಕೊರೊನಾ ಮುಕ್ತ ಜಿಲ್ಲೆಗೆ ಇಲಾಖೆಗಳ ಸಹಕಾರದೊಂದಿಗ ಸಂಘಸಂಸ್ಥೆಗಳು ಮತ್ತು ಮಾಧ್ಯಮದವರ ಸಹಕಾರ ಅತ್ಯಗತ್ಯ ಹರೂರು ರಾಜಣ್ಣ

Posted date: 20 Apr, 2020

Powered by:     Yellow and Red

ಕೊರೊನಾ ಮುಕ್ತ ಜಿಲ್ಲೆಗೆ ಇಲಾಖೆಗಳ ಸಹಕಾರದೊಂದಿಗ ಸಂಘಸಂಸ್ಥೆಗಳು ಮತ್ತು ಮಾಧ್ಯಮದವರ ಸಹಕಾರ ಅತ್ಯಗತ್ಯ ಹರೂರು ರಾಜಣ್ಣ

ಕೊರೊನಾ (ಕೋವಿಡ್-೧೯ ) ತಡೆಗಟ್ಟಲು ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಿದ ಮಾಧ್ಯಮದವರ ಸಹಕಾರ ಶ್ಲಾಘನೀಯ, ಮಾಧ್ಯಮದ ಮೂಲಕ ಹಳ್ಳಿಹಳ್ಳಿಯ ಮೂಲೆಯ ಸಾರ್ವಜನಿಕರಿಗೆ ‌ಅರಿವು ಮೂಡಿಸಿದ್ದೀರಿ.

ಮುಂದೆಯೂ ಸಹಕಾರ ಇರಲಿ ಎಂದು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ತಿಳಿಸಿದರು.

ಅವರು ಇಂದು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಮಾಧ್ಯಮದವರು, ಪೋಲೀಸ್ ಇಲಾಖೆ, ವೈದ್ಯಕೀಯ ಸಿಬ್ಬಂದಿ, ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಹಸಿದವರಿಗೆ ಅನ್ನ ನೀಡುತ್ತಿರುವ ಸಂಘಸಂಸ್ಥೆಗಳಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದರು.


ಎಪಿಎಂಸಿ ಮಾರುಕಟ್ಟೆ ಗೆ ಬರುತ್ತಿರುವ ಹೊರ ರಾಜ್ಯದ ಲಾರಿಗಳು ಮತ್ತು ಕಾರ್ಮಿಕರು, ವೀಳ್ಯದೆಲೆ ಮಾರಾಟ ಮತ್ತು ಕೊಂಡುಕೊಳ್ಳುತ್ತಿರುವವರ ಬಗ್ಗೆ  ಸಂಬಂಧಿಸಿದ ಇಲಾಖೆಯವರು ಮೊದಲ ಆದ್ಯತೆ ನೀಡಲಿ. ರೈತರ ಟಿಸಿ ಸುಟ್ಟು ಹೋದಂತಹ ಸಂದರ್ಭದಲ್ಲಿ ಅವರಿಗೆ ರಿಪೇರಿ ಮಾಡಲು ಪೋಲೀಸರ ಸಹಕಾರ ನೀಡಲಿ ಎಂದು ಅವರು ತಿಳಿಸಿದರು.


ಸರ್ಕಾರವು ಈ ಹಿಂದೆ ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಒಟ್ಟಿಗೆ ಸೇರಿಸಿ ಮುಕ್ತ ಓಡಾಟ ಕಲ್ಪಿಸಲು ಹೊರಟಿದ್ದು ದುರಾದೃಷ್ಟ, ಸದ್ಯ ಅದನ್ನು ಹಿಂಪಡೆದಿದ್ದಾರೆ. ಮುಂದೆ ಆ ರೀತಿ ಮಾಡಿದರೆ ಎಲ್ಲರೂ ಒಗ್ಗೂಡಿ ಪ್ರತಿಭಟಿಸಿ ರಾಮನಗರ ಜಿಲ್ಲೆಯನ್ನು ಹಸಿರು ವಲಯವಾಗಿರುವಂತೆಯೇ ನೋಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ರೈತರಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಐದು ಮಂದಿ ಕೆಲಸ ನಿರ್ವಹಿಸುವಂತೆ ನಿರ್ದೇಶಿಸಿ ಕೆಲಸ ಪ್ರಾರಂಭಿಸಬೇಕೆಂದು ಇದೇ ವೇಳೆ ಅಧ್ಯಕ್ಷ ರಾಜಣ್ಣ ತಿಳಿಸಿದರು.


ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಚಂದ್ರು ಮಾತನಾಡಿ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ ಪಡೆಗಳನ್ನು ರಚಿಸಲಾಗಿದೆ. ಕೋಡಂಬಳ್ಳಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಗಳಿಗೆ ಗಲಾಟೆ ಮಾಡುತ್ತಿದ್ದರಿಂದ ಕ್ರಮ ಜರುಗಿಸಿದ್ದೇವೆ.

ವಲಸೆ ಕಾರ್ಮಿಕರಿಗೂ ಸಹ ಅನೇಕ ಕಾರ್ಖಾನೆಯ ಮುಖ್ಯಸ್ಥರು ನೀಡಿದ ಕಿಟ್ ಗಳನ್ನು ಪ್ರಾಮಾಣಿಕವಾಗಿ ವಿತರಿಸುತ್ತಿದ್ದೇವೆ ಇದಕ್ಕೆಲ್ಲಾ ಮಾಧ್ಯಮದವರ ಸಹಕಾರ ಅತ್ಯಗತ್ಯ ಎಂದರು.


ತಹಶಿಲ್ದಾರ್ ಸುದರ್ಶನ್ ರವರು ಮಾತನಾಡಿ ಪೋಲೀಸರು, ಪೌರಕಾರ್ಮಿಕರು ಸೇರಿದಂತೆ ಅನೇಕ ಇಲಾಖೆಯ ವರ್ಗದವರು ಕೊರೊನಾ ತಡೆಗಟ್ಟಲು ಸಹಕಾರ ನೀಡಿದ್ದಾರೆ. ಆರೋಗ್ಯ ಇಲಾಖೆಯಂತು‌ ಕೊರೊನಾ ಸೋಂಕಿತರನ್ನು ಗುರುತಿಸಿ, ಅವರನ್ನು ಒಪ್ಪಿಸಿ, ಕ್ವಾರಂಟೈನ್ ಮಾಡಿಸುತ್ತಿರುವುದು ಸವಾಲಿನ ಕೆಲಸವಾಗಿದ್ದು ಅವರು ನಿಭಾಯಿಸುತ್ತಿರುವುದು ಶ್ಲಾಘನೀಯ ಎಂದರು.

ಎಪಿಎಂಸಿ ಗೆ ಸಂಬಂಧಿಸಿದಂತೆ ಹಲವಾರು ದೂರುಗಳಿದ್ದು ಇಂದು ಅಧಿಕಾರಿಗಳ‌ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.


ಪೋಲೀಸ್ ಉಪ ಅಧೀಕ್ಷಕ ಓಂಪ್ರಕಾಶ್ ಮಾತನಾಡಿ ರಾಮನಗರ ಜಿಲ್ಲೆಯು ಕೊರೊನಾ ಗೆ ಸಂಬಂಧಿಸಿದಂತೆ ಝೀರೋ ಹಂತದಲ್ಲಿ ಇದೆ. ಮುಂದೆಯೂ ಅದನ್ನೇ ಉಳಿಸಿಕೊಳ್ಳಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿವೆ.

ಪಾಸ್ ವಿತರಣೆಗೆ ಜಿಲ್ಲಾ ಪೋಲೀಸ್ ಇಲಾಖೆಯ ವತಿಯಿಂದ ಆನ್ಲೈನ್ ಮೂಲಕ ವಿತರಿಸುತ್ತಿದ್ದು, ಮೆಡಿಕಲ್ ಮತ್ತು ಸಾವಿಗೆ ಸಂಬಂಧಿಸಿದಂತೆ ವಿತರಣೆ ಮಾಡಲಾಗುತ್ತಿದೆ. ನಮ್ಮ ಸುತ್ತಲಿನ ಎಲ್ಲಾ ಜಿಲ್ಲೆಗಳಲ್ಲೂ ಕರೋನಾ ಪಾಸಿಟಿವ್ ಇದ್ದು, ನಮ್ಮ ಜಿಲ್ಲೆಯನ್ನು ಕೊರೊನಾ ಮುಕ್ತ ಜಿಲ್ಲೆಯನ್ನಾಗಿ ಉಳಿಸಿಕೊಳ್ಳಲು ಪ್ರಯತ್ನಿಸುತ್ತೇವೆ ಎಂದು ಅಭಿಪ್ರಾಯ ಪಟ್ಟರು.


ಇತ್ತೀಚೆಗೆ ಕೊರೊನಾ ಗೆ ಸಂಬಂಧಿಸಿದ ಯಾವುದೇ ಲಕ್ಷ ಇಲ್ಲದಿರುವವರೆಗೂ ರೋಗ ಹರಡುತ್ತಿರುವುದು ದುರದೃಷ್ಟಕರ. ರಾಮನಗರ ಸುತ್ತಲಿನ ಎಲ್ಲಾ ಜಿಲ್ಲೆಗಳಲ್ಲೂ ಪಾಸಿಟಿವ್ ಇರುವುದರಿಂದ ನಾವು ಬಹಳ ಎಚ್ಚರಿಕೆಯಿಂದಿರಬೇಕು, ಆರೋಗ್ಯ ಇಲಾಖೆಯ ಕೆಲಸ ಶ್ಲಾಘನೀಯವಾಗಿದ್ದು, ಮಾಧ್ಯಮದವರು ಅರಿವು ಮೂಡಿಸುತ್ತಿರುವುದು ಅಭಿನಂದನೀಯ ಎಂದು ತಿಳಿಸಿದರು.


ತಾಲ್ಲೂಕು ಆರೋಗ್ಯ ಅಧಿಕಾರಿ ಡಾ ರಾಜು ಮಾತನಾಡಿ ಕೊರೊನಾ ಗೆ ಸಂಬಂಧಿಸಿದ ಹಾಗೆ ಮೊದಲು ಸಾರ್ವಜನಿಕರು ಕೈಗೊಳ್ಳಬೇಕಾದ ಕೆಲಸ ಎಂದರೆ ಅಂತರ ಕಾಯ್ದುಕೊಳ್ಳುವುದು. ಎಲ್ಲಾ ಕಾಯಿಲೆಗಳಂತೆ ಇದು ಒಂದು ಕಾಯಿಲೆ. ಎಲ್ಲಾ ಕಾಯಿಲೆಗಳಲ್ಲೂ ಸಾವು ನೋವು ಇರುತ್ತವೆ.

ಅನಿವಾರ್ಯವಾಗಿ ಕ್ವಾರಂಟೈನ್ ಮಾಡಲು ಅವಕಾಶ ನೀಡದೆ ತಾವುಗಳೇ ಮನೆಯಲ್ಲಿ ಕ್ವಾರಂಟೈನ್ ಇರುವುದು ಸೂಕ್ತ.

ಸೋಂಕಿತರನ್ನು ಐಸೋಲೇಷನ್ ನಲ್ಲಿ ಇಡುತ್ತೇವೆ, ಶಂಕಿತರನ್ನು ಕ್ವಾರಂಟೈನ್ ನಲ್ಲಿ ಇಡುತ್ತೇವೆ.

ನಮ್ಮ ಜಿಲ್ಲೆ ಮತ್ತು ತಾಲ್ಲೂಕಿನಲ್ಲಿ ಸದ್ಯ ಯಾವುದೇ ಸೋಂಕಿತರು ಇಲ್ಲ.


ಮುನ್ನೆಚ್ಚರಿಕೆಯ ಕ್ರಮವಾಗಿ ಹೊನ್ನನಾಯಕನಹಳ್ಳಿ ಹಾಸ್ಟೆಲ್ ನಲ್ಲಿ ೧೦೦ ಹಾಸಿಗೆಯ ಆಸ್ಪತ್ರೆ ನಿರ್ಮಾಣ ಮಾಡಿದ್ದೇವೆ. ಅವಶ್ಯಕತೆ ಬಿದ್ದರೆ  ಹತ್ತಿರದಲ್ಲಿರುವ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯನ್ನು ವಶಪಡಿಸಿಕೊಂಡು ಆಸ್ಪತ್ರೆ ನಿರ್ಮಾಣ ಮಾಡಲು ಆದೇಶವಿದೆ.

೧೪೭ ಮಂದಿಯನ್ನು ಹಲವಾರು ಕಾರಣಗಳಿಂದಾಗಿ ಐಸೋಲೇಷನ್ ಮಾಡಿದ್ದೀವಿ. ೧೪೭ ಮಂದಿಯಲ್ಲಿ ೬೦ ಮಂದಿ ವಿದೇಶದಿಂದ ಬಂದವರು. ೨೪ ಮಂದಿ ಸ್ಥಳೀಯರನ್ನು ಐಸೋಲೇಷನ್ ನಲ್ಲಿ ಇರಿಸಲಾಗಿದೆ.

ಅದೇಶ ಉಲ್ಲಂಘಿಸಿದವರೂ ಸಹ‌ ನಮ್ಮಲ್ಲಿದ್ದು ಆರಕ್ಷಕರ ಮೂಲಕ ಕ್ವಾರಂಟೈನ್ ಒಳಪಡಿಸಿದ್ದೆವೆ. ೧೨ ಮಂದಿ ಹೊರ ರಾಜ್ಯದವರಿದ್ದು, ಮಿಕ್ಕವರು ರಾಜ್ಯದೊಳಗಿನ ರೋಗಿಗಳನ್ನು ಕ್ವಾರಂಟೈನ್ ಮಾಡಿದ್ದೇವೆ.


ಇದುವರೆಗೂ ಎಂಭತ್ತು ಮಂದಿಯ ಸ್ವಾಬ್ ತೆಗೆದಿದ್ದು ಎಲ್ಲವೂ ನೆಗೆಟಿವ್ ಬಂದಿದೆ. ಈ ಎಲ್ಲಾ ಕೆಲಸಗಳನ್ನು ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಯ ಸಹಕಾರದಿಂದ ಮಾಡಿದ್ದೇವೆ. ಎಲ್ಲಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಮಾಧ್ಯಮದವರ ಸಹಕಾರ ಲಭಿಸಿದೆ. ಎಲ್ಲರಿಗೂ ಅಭಾರಿಯಾಗಿದ್ದೇವೆ ಎಂದರು.


ಶಂಕಿತರು ಮತ್ತು ಸೋಂಕಿತರಿಗೂ ವ್ಯತ್ಯಾಸವಿದ್ದು ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ ಹರಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಾಗುವುದು. ಯಾರ ಬಗ್ಗೆಯಾದರೂ ಶಂಕೆ ಮೂಡಿದರೆ ನಿಖರವಾಗಿ ತಿಳಿದುಕೊಂಡು ತಿಳಿಸಿದರೆ ಅವರ ಮನವೊಲಿಸಿ ಕ್ವಾರಂಟೈನ್ ಮಾಡಲು ಶ್ರಮಿಸುತ್ತೇವೆ ಎಂದು ತಿಳಿಸಿದರು.

ಎಪಿಎಂಸಿ ಗೆ ಬರುವ ಎಲ್ಲಾ ಲಾರಿಗಳು ಮತ್ತು ಸಿಬ್ಬಂದಿಗಳು ಕನಿಷ್ಠ ನಾಲ್ಕು ಚೆಕ್ ಪೋಸ್ಟ್ ಗಳನ್ನು ದಾಟಿ ಬರುತ್ತಾರೆ. ಎಲ್ಲಾ ಚೆಕ್ ಪೋಸ್ಟ್ ಗಳಲ್ಲೂ ಅವರಿಗೆ ಕೆಮ್ಮು, ಜ್ವರ, ನೆಗಡಿ, ತಲೆನೋವು ಎಲ್ಲವನ್ನೂ ಪರೀಕ್ಷಿಸಿಯೇ ಕಳುಹಿಸುತ್ತಾರೆ. ಇಲ್ಲಿಗೆ ಬಂದ ನಂತರವೂ ಅವರಿಗೆ ಯಾವುದೇ ಸಣ್ಣ ರೋಗ ಕಂಡು ಬಂದರು ಅವರನ್ನು ಪರೀಕ್ಷಿಸಿ ಕ್ರಮ ಕೈಗೊಳ್ಳುತ್ತೇವೆ. ಸಾರ್ವಜನಿಕರಿಗೆ ಆತಂಕ ಬೇಡ ಎಂದು ತಿಳಿಸಿದರು.


ಇದೇ ವೇಳೆ ಮಾಧ್ಯಮ ಮಿತ್ರರಿಗೆ ಪ್ರಥಮ ದರ್ಜೆ ಗುತ್ತಿಗೆದಾರ ಆಣಿಗೆರೆ ಸಿದ್ದರಾಜು ರವರ ಸಹಯೋಗದೊಂದಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ಗಳನ್ನು ತಾಲ್ಲೂಕು ಪಂಚಾಯತಿ ವತಿಯಿಂದ ವಿತರಿಸಲಾಯಿತು.


ಸಭೆಯಲ್ಲಿ ಎಇಓ ಲೋಕೇಶ್, ಪೌರಾಯುಕ್ತ ಶಿವನಂಕಾರಿಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜು, ಪಶು ಸಹಾಯಕ ನಿರ್ದೇಶಕ ಡಾ ಜಯರಾಮು, ರೇಷ್ಮೆ ಸಹಾಯಕ ನಿರ್ದೇಶಕ ಮಂಜುನಾಥ, ತೋಟಗಾರಿಕೆ ಸಹಾಯಕ ನಿರ್ದೇಶಕ ವಿವೇಕ್, ಸಿಡಿಪಿಓ ಕಾಂತರಾಜು, ಸ್ಥಳೀಯ ಮಾಧ್ಯಮ ಮಿತ್ರರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑