Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲೆಯಾದ್ಯಂತ ೫೦೫ ಕಡೆ ಅಬಕಾರಿ ದಾಳಿ ಮದ್ಯ ವಶ, ಹದಿಮೂರು ಅಪರಾಧಿಗಳ ದಸ್ತಗಿರಿ. ದೂರು ದಾಖಲು

Posted date: 22 Apr, 2020

Powered by:     Yellow and Red

ಜಿಲ್ಲೆಯಾದ್ಯಂತ ೫೦೫ ಕಡೆ ಅಬಕಾರಿ ದಾಳಿ ಮದ್ಯ ವಶ, ಹದಿಮೂರು ಅಪರಾಧಿಗಳ ದಸ್ತಗಿರಿ. ದೂರು ದಾಖಲು

ರಾಮನಗರ:ಏ/೨೨/೨೦/ಬುಧವಾರ. ರಾಮನಗರ ಜಿಲ್ಲೆಯಲ್ಲಿ ಕೊರೋನಾ ವೈರಸ್ (ಕೋವಿಡ್-೧೯) ತಡೆಗಟ್ಟುವ ಸಲುವಾಗಿ ರಾಮನಗರ ಜಿಲ್ಲೆಯಾದ್ಯಂತ ಮೇ ೦೩ ರ ಮಧ್ಯರಾತ್ರಿ ಯವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟ, ಹಂಚಿಕೆ, ಸಾಗಾಣಿಕೆ ಇತ್ಯಾದಿಗಳನ್ನು ಹಾಗೂ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮದ್ಯ ಮಾರಾಟ ಸನ್ನದುಗಳನ್ನು ಮುಚ್ಚಲು ಆದೇಶಿಸಲಾಗಿದೆ.


ಈ ಸಂಬಂಧ ರಾಮನಗರ ಜಿಲ್ಲೆಯಲ್ಲಿ ಅಕ್ರಮ ಮದ್ಯ/ನಕಲಿ ಮದ್ಯ/ಕಳ್ಳಭಟ್ಟಿ ಸಾರಾಯಿ ತಯಾರಿಕೆ, ಸಂಗ್ರಹ, ಮಾರಾಟ, ಹಂಚಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಜಿಲ್ಲಾ ವಿಭಾಗ ಮತ್ತು ತಾಲ್ಲೂಕು ಮಟ್ಟದಲ್ಲಿ ಅಧಿಕಾರಿ/ಸಿಬ್ಬಂದಿ ಗಳನ್ನೊಳಗೊಂಡ ತಂಡಗಳನ್ನು ರಚಿಸಿ, ಜಾರಿ ಮತ್ತು ತನಿಖಾ ಕಾರ್ಯವನ್ನು ಚುರುಕುಗೊಳಿಸಲಾಗಿರುತ್ತದೆ.


ಸದರಿ ತನಿಖಾ ತಂಡಗಳು ದಿನಾಂಕ:೨೨.೦೩.೨೦೨೦ ರಿಂದ ದಿನಾಂಕ:೨೦.೦೪.೨೦೨೦ ರವರಗೆ ಜಿಲ್ಲೆಯಾದ್ಯಂತ ೫೦೫ ದಾಳಿಗಳನ್ನು ಕೈಗೊಂಡು, ೧೮೭.೩೦೫ ಲೀ ಮದ್ಯ ಮತ್ತು ೧೦೧೨.೧೧೦ ಲೀ. ಬಿಯರ್ ಮತ್ತು ೯೫.೩೫೫ ಲೀ ವೈನ್‌ನ್ನು ಜಫ್ತುಪಡಿಸಿಕೊಂಡು ೧೩ ಜನ ಆರೋಪಿಗಳನ್ನು ದಸ್ತಗಿರಿ ಮಾಡಿ, ಒಟ್ಟು ೪ ಘೋರ ಮತ್ತು ೦೨ ೧೫(ಎ) ಮೊಕದ್ದಮೆಗಳನ್ನು ದಾಖಲು ಮಾಡಿರುತ್ತಾರೆ.

ಕೋರೋನಾ ವೈರಸ್ (ಕೊವೀಡ್-೧೯) ತಡೆಗಟ್ಟುವ ಸಲುವಾಗಿ ರಾಮನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮದ್ಯ ಮಾರಾಟ ಸನ್ನದುಗಳನ್ನು ಮುಚ್ಚಲಾಗಿದ್ದರೂ ಸನ್ನದುದಾರರು ಮದ್ಯವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸ್ವೀಕೃತವಾದ ದೂರುಗಳ ಹಿನ್ನೆಲೆಯಲ್ಲಿ ಅಬಕಾರಿ ಅಧಿಕಾರಿ/ಸಿಬ್ಬಂದಿಗಳು ಸನ್ನದುಗಳಿಗೆ ಭೇಟಿ ನೀಡಿ ತಪಾಸಣೆ ಕೈಗೊಂಡ ಸಮಯದಲ್ಲಿ ಲೆಕ್ಕದ ಪುಸ್ತಕಕ್ಕಿಂತ ಭೌತಿಕ ದಾಸ್ತಾನಿನಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಕಡಿಮೆ ಕಂಡುಬಂದ ದಾಸ್ತಾನಿಗೆ ನಗದು ರಸೀದಿ ಹಾಜರುಪಡಿಸದ ಕಾರಣ ಸನ್ನದುದಾರರ ವಿರುದ್ಧ ಕರ್ನಾಟಕ ಅಬಕಾರಿ ಕಾಯಿದೆ ೧೯೬೫ ಮತ್ತು ಸನ್ನದು ಷರತ್ತುಗಳ ಉಲ್ಲಂಘನೆಗಾಗಿ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿರುತ್ತದೆ.


ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು *ಸದರಿ ಸನ್ನದುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ದಿನಾಂಕ:೩೦.೦೬.೨೦೨೦ ರವರೆಗೆ ಅಮಾನತ್ತುಪಡಿಸಿ ಆದೇಶ ಹೊರಡಿಸಿದ್ದಾರೆ.

ವಿವರ ಇಂತಿದೆ: ರಾಮನಗರ ತಾಲ್ಲೂಕಿಗೆ ವೆಂಕಟಗಿರಯ್ಯ, ಸಿಎಲ್-೯ ಸನ್ನದುದಾರರು, ಮೆ||ಸೋನಾ ಬಾರ್ ಅಂಡ್ ರೆಸ್ಟೋರೆಂಟ್, ಕಟ್ಟಡ ಸಂ;೧೩೨೩, ಬಿ.ಎಂ.ರಸ್ತೆ, ರಾಮನಗರ ಟೌನ್, ಚನ್ನಪಟ್ಟಣ ತಾಲ್ಲೂಕಿಗೆ ಎಂ.ಸಿ.ವೆಂಕಟೇಶ್, ಸಿಎಲ್-೨ ಸನ್ನದುದಾರರು, ಮೆ||ರವಿಚಂದ್ರ ವೈನ್ಸ್, ಮಳಿಗೆ ಸಂಖ್ಯೆ:೧೮೯೭/೧ಡಿ, ಬಿ.ಎಂ.ರಸ್ತೆ, ಕುಡಿನೀರು ಕಟ್ಟೆ, ಹನುಮಂತನಗರ, ಚನ್ನಪಟ್ಟಣ ಟೌನ್ ಹಾಗೂ ಬಾಲಾಜಿ ಎಂಟರ್ ಪ್ರೈಸಸ್, ಸಿಎಲ್-೯ ಸನ್ನದುದಾರರು, ಮೇ//ಲಕ್ಷ್ಮಿ ಬಾರ್ ಅಂಡ್ ರೆಸ್ಟೋರೆಂಟ್, ನಂ.೪೯೦/೧೨೩ಸಿ, ಸಿಂಗರಾಜೀಪುರ ಗ್ರಾಮ ಚನ್ನಪಟ್ಟಣ ತಾಲ್ಲೂಕು, ಕನಕಪುರ ತಾಲ್ಲೂಕಿಗೆ ಸಿ.ದೇಶಯ್ಯ, ಸಿಎಲ್-೨ ಸನ್ನದುದಾರರು, ಮೆ|| ಶ್ರೀನಿವಾಸ ವೈನ್ಸ್, ಖಾನೇಷುಮಾರಿ ಸಂಖ್ಯೆ:೨೪೭/೨೧೯/೧೧/೨ಎ, ಚೌಕಸಂದ್ರ ಗ್ರಾಮ, ಕಸಬಾ ಹೋಬಳಿ, ಕನಕಪುರ ತಾಲ್ಲೂಕು.*


ರಾಮನಗರ ಜಿಲ್ಲೆಯಲ್ಲಿ ಯಾವುದೇ ರೀತಿಯ ಕಳ್ಳಭಟ್ಟಿ ಅಥವಾ ನಕಲಿ ಮದ್ಯದ ಮೊರೆ ಹೋಗದಂತೆ ತಮ್ಮ ಆರೋಗ್ಯ ಕಾಪಾಡಿಕೊಳ್ಳುವಂತೆ ಅಬಕಾರಿ ಇಲಾಖೆ ಪ್ರಕಟಣೆ ತಿಳಿಸಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑