Tel: 7676775624 | Mail: info@yellowandred.in

Language: EN KAN

    Follow us :


ಸರ್ಕಾರಿ ಮತ್ತು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕರಿಗೆ ಒಂದು ದಿನದ ಪುನರ್‍ಮನನ ಕಾರ್ಯಕ್ರಮ

Posted date: 06 Mar, 2018

Powered by:     Yellow and Red

ಸರ್ಕಾರಿ ಮತ್ತು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕರಿಗೆ ಒಂದು ದಿನದ ಪುನರ್‍ಮನನ ಕಾರ್ಯಕ್ರಮ

ಮಾಗಡಿ : ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರ್ಕಾರಿ ಮತ್ತು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕರಿಗೆ ಒಂದು ದಿನದ ರಾಜ್ಯ ಮಟ್ಟದ ಪುನರ್‍ಮನನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
    ಹಿರಿಯ ಸಂಶೋಧಕ ಡಾ. ಮುನಿರಾಜಪ್ಪ ಮಾತನಾಡಿ ಅಧ್ಯಾಪಕರು ಅಧ್ಯಯನಾಶೀಲರಾದಾಗ ಮಾತ್ರ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ. ಕಾಲೇಜಿಗೆ ಬರುವ ಅಧ್ಯಾಪಕರು ಕೇವಲ ಪುಸ್ತಕದಲ್ಲಿರುವುದನ್ನು ಮಾತ್ರ ಹೇಳಿ ಇಷ್ಟೇ ತಮ್ಮ ಕರ್ತವ್ಯವೆಂದು ಹೋಗುತ್ತಿದ್ದಾರೆ. ಇಂದಿನ ದಿನಗಳಲ್ಲಿ ಬಹಳಷ್ಟು ಅಧ್ಯಾಪಕರು ವಿದ್ಯಾರ್ಥಿಗಳಿಗೆ ಗುಣ ಮಟ್ಟದ ಶಿಕ್ಷಣ ನೀಡುತ್ತಿಲ್ಲ. ಅಧ್ಯಾಪಕರು ತಿಂಗಳಿಗೆ ಒಂದಾದರೂ ಪುಸ್ತಕವನ್ನು ಹಾಗೂ ನಿಯತ ಕಾಲಿಕಗಳನ್ನು ಓದುವುದರ ಮೂಲಕ ಹೊಸ ಹೊಸ ವಿಷಯಗಳನ್ನು ತಿಳಿದುಕೊಂಡು ಅದನ್ನು ವಿದ್ಯಾರ್ಥಿಗಳಿಗೆ ಭೋಧಿಸಿದಾಗ ಮಾತ್ರ ಉತ್ತಮ ಶಿಕ್ಷಣ ನೀಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕಾಲೇಜುಗಳಲ್ಲಿ ಅಧ್ಯಾಪಕರು ವಿದ್ಯಾರ್ಥಿಗಳಿಗೆ ಮಾದರಿಯಾಗಿರುವುದರಿಂದ ಅಧ್ಯಾಪಕರು ತಮ್ಮ ವರ್ತನೆ ನಡೆ-ನುಡಿಯನ್ನು ಉತ್ತಮ ಮಟ್ಟದಲ್ಲಿಟ್ಟುಕೊಳ್ಳುವುದು ಅತ್ಯವಶ್ಯಕ. ಅಧ್ಯಾಪಕರು ಅಧ್ಯಯನಾಶೀಲ ಪ್ರವೃತ್ತಿಯನ್ನು ಬೆಳೆಸಿಕೊಂಡರೆ ವಿದ್ಯಾರ್ಥಿಗಳು ಸಹ ತಮ್ಮ ಗುರುಗಳ ಮಾರ್ಗವನ್ನು ಅನುಸರಿಸುತ್ತಾರೆ ಎಂದು ತಿಳಿಸಿದರು.
 ನಮ್ಮ ದೇಶದಲ್ಲಿ ನೂರಾರು ವರ್ಷಗಳ ಹಿಂದೆ ಅಸ್ಥಿತ್ವದಲ್ಲಿದ್ದ ನಳಂದ ವಿಶ್ವವಿದ್ಯಾಲಯ ದೇಶದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲಿಯೂ ಸಹ ಪ್ರಖ್ಯಾತಿ ಹೊಂದಿತ್ತು. ಬಹಳಷ್ಟು ವಿದೇಶಿಗರು ನಳಂದ ವಿಶ್ವವಿದ್ಯಾಲಯಕ್ಕೆ ಬಂದು ಶಿಕ್ಷಣ ಪಡೆದಿದ್ದಾರೆ. ಇದು ಹೆಸರುವಾಸಿಯಾಗಲು ಆಗ ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಧ್ಯಾಪಕರುಗಳಿಂದ ಸಾಧ್ಯವಾಗಿತ್ತು. ಅಧ್ಯಾಪಕರು ಮನಸ್ಸು ಮಾಡಿದರೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ ಎಂದ ಅವರು ಉನ್ನತ ವ್ಯಾಸಂಗಕ್ಕೆಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳನ್ನು ಕೋಟ್ಯಾಂತರ ರೂ. ಅನುದಾನವನ್ನು ನೀಡುತ್ತಿದ್ದರೂ ಸಹ ನಮ್ಮ ರಾಜ್ಯದಲ್ಲಿ ಸ್ನಾತಕೋತ್ತರ ಶಿಕ್ಷಣವನ್ನು ಪಡೆಯುತ್ತಿರುವವರ ವಿದ್ಯಾರ್ಥಿಗಳ ಸಂಖ್ಯೆ ಬಹಳಷ್ಟು ಕಡಿಮೆ ಇದೆ ಎಂದು ಮುನಿರಾಜಪ್ಪ ಬೇಸರ ವ್ಯಕ್ತಪಡಿಸಿದರು.
 ಪ್ರಾಧ್ಯಪಕರಾದ ಗುರುಮೂರ್ತಿ ಮಾತನಾಡಿ ಅಧ್ಯಾಪಕರು ವಿದ್ಯಾರ್ಥಿಗಳಿಗೆ ಕೇವಲ ವಿದ್ಯೆಯನ್ನು ಮಾತ್ರ ಕಲಿಸದೇ ಅವರಲ್ಲಿ ದೇಶಭಕ್ತಿ ಉತ್ತಮ ನಡವಳಿಕೆ, ಸೇವಾ ಮನೋಭಾವ, ಕ್ರೀಡೆಗಳಲ್ಲಿ, ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮನೋಭಾವವನ್ನು ಬೆಳೆಸಿ, ಸಮಾಜಿಕ ಕಳಕಳಿಯನ್ನು ಹೊಂದುವಂತಹ ಸತ್ಪ್ರಜೆಗಳನ್ನಾಗಿ ರೂಪಿಸಬೇಕು. ವಿದ್ಯಾರ್ಥಿಗಳ ದೈಹಿಕ ಹಾಗೂ ಭೌದ್ಧಿಕ ಬೆಳವಣಿಗೆಗೆ ಅಧ್ಯಾಪಕರು ಶ್ರಮಿಸುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
 ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಡಾ.ಹೆಚ್.ಎಸ್.ಗಣೇಶ್‍ಭಟ್ ವಿಶೇಷ ಉಪನ್ಯಾಸ ನೀಡಿದರು. ಪ್ರಾಂಶುಪಾಲ ಹೆಚ್.ಆರ್.ಮೂರ್ತಿ, ಅಧ್ಯಾಪಕರುಗಳಾದ ನಂಜುಂಡ, ತಿಮ್ಮಹನುಮಯ್ಯ, ಜಗದೀಶ್ ನಡುವಿನಮಠ್, ಮಂಜುನಾಥ್, ಜಿ.ಎಸ್.ವೀಣಾ ಮುಂತಾದವರು ಉಪಸ್ಥಿತರಿದ್ದರು. 
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑