Tel: 7676775624 | Mail: info@yellowandred.in

Language: EN KAN

    Follow us :


ಗ್ರಾಮೀಣ ಭಾಗದ ಮನೆಮನೆಗೆ ನೀರು ಒದಗಿಸುವ ಜಲ ಜೀವನ್ ಮಿಷನ್ ಸಿಇಓ ಇಕ್ರಂ

Posted date: 30 Apr, 2020

Powered by:     Yellow and Red

ಗ್ರಾಮೀಣ ಭಾಗದ ಮನೆಮನೆಗೆ ನೀರು ಒದಗಿಸುವ ಜಲ ಜೀವನ್ ಮಿಷನ್ ಸಿಇಓ ಇಕ್ರಂ

ರಾಮನಗರ:ಏ/೩೦/೨೦/ಗುರುವಾರ. ಗ್ರಾಮೀಣ ಭಾಗದ ಮನೆಗಳಿಗೆ ನಿರ್ದಿಷ್ಟ ಪಡಿಸಲಾದ ಪರಿಮಾಣ ಹಾಗೂ ಗುಣಮಟ್ಟದ ನೀರನ್ನು ನಳ ಸಂಪರ್ಕದ ಮೂಲಕ ನಿಯಮಿತವಾಗಿ ಒದಗಿಸುವುದು ಜಲ ಜೀವನ್ ಮಿಷನ್ ಯೋಜನೆಯ ಉದ್ದೇಶವಾಗಿದೆ ಎಂದು ರಾಮನಗರ ಜಿಲ್ಲಾ ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಇಕ್ರಂ ಉಲ್ಲಾ ಷರೀಫ್ ತಿಳಿಸಿದ್ದಾರೆ.


ನಳ ಸಂಪರ್ಕದ ಮೂಲಕ ಎಲ್ಲಾ ಮನೆಗಳಿಗೆ ಸಮಾನವಾಗಿ ನಿಗದಿತ ಪರಿಮಾಣದ ಅಂದರೆ ೫೫ ಲೀಟರ್ ಪ್ರತಿ ವ್ಯಕ್ತಿಗೆ ದಿನವೊಂದಕ್ಕೆ ನಿರ್ದಿಷ್ಟ ಪಡಿಸಲಾದ ಗುಣಮಟ್ಟದ ನೀರನ್ನು (೧೦,೫೦೦) ನಿರಂತರವಾಗಿ ಬಹುಕಾಲದ ವರೆಗೆ ಒದಗಿಸಲು ಗ್ರಾಮದಲ್ಲಿನ ನೀರು ಸರಬರಾಜು ಮೂಲ ಸೌಕರ್ಯಗಳು, ಹಾಲಿ ಇರುವ ಯೋಜನೆಯ ಮರು ಸುಧಾರಣೆ, ಹಾಲಿ ಇರುವ ಜಲ ಮೂಲಗಳು ಹಾಗೂ ಇತರೆ ಭಾಗಗಳನ್ನು ಬಲವರ್ಧನೆಗೊಳಿಸಬೇಕಿರುತ್ತದೆ.


ರಾಮನಗರ ಜಿಲ್ಲೆಯಲ್ಲಿ ಈ ಯೋಜನೆಯ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾ ಪಂಚಾಯತ್ ಹಾಗೂ  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿಗಳು, ಗ್ರಾಮ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ-ವಿಭಾಗ ಅಧಿಕಾರಿಗಳಿಗೆ ಹಾಗೂ ಶಾಖಾಧಿಕಾರಿಗಳಿಗೆ ಒಂದು ದಿನದ ಕಾರ್ಯಗಾವನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸ ಅವರು ಮಾಹಿತಿ ನೀಡಿದರು.


ಕಾರ್ಯಾಗಾರದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ಚಂದ್ರಹಾಸ್ ಅವರು ಭಾಗವಹಿಸಿ ನೀರು ಜೀವನಕ್ಕೆ ಬೇಕಾಗಿರುವ ಅತ್ಯಮೂಲ್ಯ ಅವಶ್ಯಕತೆಗಳಲ್ಲಿ ಒಂದು. ಭರವಸೆಯಿಂದ ಸಿಕ್ಕುವ ಶುದ್ದ ನೀರು ಮಾನವನ ಅಭಿವೃದ್ದಿಗೆ ಪೂರಕ. ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಕುಡಿಯುವ ನೀರು ಒದಗಿಸಿರುವುದರಿಂದ ಗ್ರಾಮೀಣ ಭಾಗದ ಜನರ ಆರೋಗ್ಯವನ್ನು ಸುಧಾರಿಸಬಹುದು ಎಂದರು.


ಪ್ರತಿ ಗ್ರಾಮವಾರು ಸಿಗುವ ನೀರಿನ ಬಗ್ಗೆ ಹಾಗೂ ನೀರನ್ನು ಈ ಯೋಜನೆಯಡಿ ಉಪಯೋಗಿಸುವ ಬಗ್ಗೆ ಯೋಜನೆ ಸಿದ್ಧಪಡಿಸಿ ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕಿರುತ್ತದೆ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಉಮೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑