Tel: 7676775624 | Mail: info@yellowandred.in

Language: EN KAN

    Follow us :


ಹೊರ ರಾಜ್ಯದಿಂದ ಬಂದವರ ಮೇಲೆ ಹೆಚ್ಚಿನ ನಿಗಾ ವಹಿಸಿ: ಜಗದೀಶ್

Posted date: 16 May, 2020

Powered by:     Yellow and Red

ಹೊರ ರಾಜ್ಯದಿಂದ ಬಂದವರ ಮೇಲೆ ಹೆಚ್ಚಿನ ನಿಗಾ ವಹಿಸಿ: ಜಗದೀಶ್

ರಾಮನಗರ:ಮೇ/೧೬/೨೦/ಶನಿವಾರ. ಹೊರ ರಾಜ್ಯದಿಂದ ಬರುತ್ತಿರುವ ಬಹಳಷ್ಟು ಜನರು ಕೋವಿಡ್ ಸೋಂಕಿತರಾಗುತ್ತಿರುವುದು ಕಂಡುಬಂದಿದ್ದು, ಈ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಜೆ. ಜಗದೀಶ್ ಅವರು ತಿಳಿಸಿದರು.

ಅವರು ಇಂದು ಕನಕಪುರ ತಾಲ್ಲೂಕು ಕಚೇರಿಯಲ್ಲಿ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿ ರಾಮನಗರ ಜಿಲ್ಲೆಯು ಹಸಿರು ವಲಯದಲ್ಲಿದ್ದು, ಕೇಂದ್ರ ಸರ್ಕಾರ ಹೊರ ರಾಜ್ಯ ಹಾಗೂ ಜಿಲ್ಲೆಯವರಿಗೆ ಸೇವಾಸಿಂಧೂವಿನಲ್ಲಿ ಅರ್ಜಿ ಸಲ್ಲಿಸಿ ಜಿಲ್ಲೆಗೆ ಬರಲು ಅನುಮತಿ ನೀಡಿದೆ. ಈ ಅವಧಿಯಲ್ಲಿ ಅಧಿಕಾರಿಗಳು ಇನ್ನೂ ಹೆಚ್ಚಿನ ಶ್ರಮವಹಿಸಿ ಕೆಲಸ ನಿರ್ವಹಿಸಬೇಕಿದೆ. ಕೆಲವು ಸಂದರ್ಭಗಳಲ್ಲಿ ಸೇವಸಿಂಧೂವಿನಲ್ಲಿ ಅರ್ಜಿ ಸಲ್ಲಿಸದೆ ಜಿಲ್ಲೆಗೆ ಹೊರ ರಾಜ್ಯ ಹಾಗೂ ಜಿಲ್ಲೆಯವರು ಆಗಮಿಸುವ ಸಂಭವವಿರುತ್ತದೆ. ಎಲ್ಲಾ ಚೆಕ್‌ಪೋಸ್ಟ್ಗಳಲ್ಲಿ ಜಾಗೃತವಾಗಿ ಕಾರ್ಯನಿರ್ವಹಿಸಿ ಎಂದರು.


ಹೊರ ರಾಜ್ಯದಿಂದ ಬಂದರೆ ಅವರನ್ನು ಕ್ವಾರಂಟೈನ್‌ಗೊಳಿಸುವುದು ಕಡ್ಡಾಯವಾಗಿರುತ್ತದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಸಹಾಯಕರು ಹಾಗೂ ಗ್ರಾಮ ಪಂಚಾಯತ್ ಜಾಗೃತ ಸಮಿತಿಗಳಿಗೆ ಮಾಹಿತಿ ನೀಡಿ ಗ್ರಾಮದಲ್ಲಿ ಹೊರಗಿನಿಂದ ಬರುವವರನ್ನು ಗಮನಿಸಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ತಿಳಿಸಿ ಎಂದರು.


ಜಿಲ್ಲೆಯಲ್ಲಿ ಕೋವಿಡ್-೧೯ ಪರೀಕ್ಷಾ ಲ್ಯಾಬ್ ಪ್ರಾರಂಭಿಸಲು ಸಿದ್ಧತೆ ನಡೆಯುತ್ತಿದೆ. ಇದಕ್ಕೆ ಪೂರಕವಾಗಿ ಲ್ಯಾಬ್‌ನಲ್ಲಿ ಕಾರ್ಯನಿರ್ವಹಿಸಲು ಬೇಕಿರುವ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡು ತರಬೇತಿ ನೀಡಿ ಕಾರ್ಯನಿರ್ವಹಿಸಲು ಅವರನ್ನು ಸಜ್ಜುಗೊಳಿಸಿ ಜಿಲ್ಲೆಯಲ್ಲಿ ಕೋವಿಡ್-೧೯ ಪ್ರಕರಣ ವರದಿಯಾದಲ್ಲಿ ಚಿಕಿತ್ಸೆ ನೀಡಲು ಬೇಕಿರುವ ಎಲ್ಲಾ ಆರೋಗ್ಯ ಸಲಕರಣೆಗಳೊಂದಿಗೆ ಸಿದ್ಧವಾಗಿರಬೇಕು ಎಂದರು.


ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳ ಕಾರ್ಯನಿರ್ವಹಣೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಕಾರ್ಯದರ್ಶಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-೧೯ ಪ್ರಕರಣಗಳು ಕಂಡುಬಂದರೆ ಆರೋಗ್ಯ ಇಲಾಖೆಗೆ ವರದಿ ಮಾಡುವಂತೆ ತಿಳಿಸಿ ಪರೀಕ್ಷೆಗೆ ಒಳಪಡಿಸಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ ಉಲ್ಲಾ ಷರೀಫ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್, ಉಪವಿಭಾಗಾಧಿಕಾರಿ ದಾಕ್ಷಾಯಣಿ, ಕನಕಪುರ ತಹಶೀಲ್ದಾರ್ ವರ್ಷ ಒಡೆಯರ್, ಆರೋಗ್ಯ ಇಲಾಖೆಯ ಆರ್.ಸಿ.ಎಚ್. ಅಧಿಕಾರಿ ಡಾ. ಪದ್ಮ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑