Tel: 7676775624 | Mail: info@yellowandred.in

Language: EN KAN

    Follow us :


ನರ ಭಕ್ಷಕ ಶೀಘ್ರ ಚಿರತೆ ಸೆರೆ : ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ವಿಶ್ವಾಸ

Posted date: 17 May, 2020

Powered by:     Yellow and Red

ನರ ಭಕ್ಷಕ ಶೀಘ್ರ ಚಿರತೆ ಸೆರೆ : ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ವಿಶ್ವಾಸ

ರಾಮನಗರ:ಮೇ/೧೬/೨೦/ಶನಿವಾರ. ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ಅದರಲ್ಲೂ ಮಾಗಡಿ ಜನತೆಯಲ್ಲಿ ಭೀತಿ ಮೂಡಿಸಿರುವ ಚಿರತೆಯನ್ನು ಶೀಘ್ರದಲ್ಲಿ ಸೆರೆ ಹಿಡಿಯಲಾಗುವುದು. ಚಿರತೆ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರು ತಿಳಿಸಿದ್ದಾರೆ.


ಮಾಗಡಿ ತಾಲೂಕಿನ ಸೋಲೂರು ಹೋಬಳಿಯ ಕೊತ್ತಗಾನಹಳ್ಳಿ ಗ್ರಾಮದ ೬೨ ವರ್ಷದ ವೃದ್ದೆ ಗಂಗಮ್ಮನನ್ನು ಚಿರತೆ ಕೊಂದು ಹಾಕಿರುವುದು ದುರದೃಷ್ಟಕರ. ಹಾಗೆಯೇ ಕಳೆದ ಶನಿವಾರ (ಮೇ ೦೯) ಕದರಯ್ಯನ ಪಾಳ್ಯದಲ್ಲಿ ಚಿರತೆಗೆ ಮೂರು ವರ್ಷದ ಬಾಲಕ ಬಲಿಯಾಗಿದ್ದು ಸಹ ದುರದೃಷ್ಟಕರ ಸಂಗತಿ.


ಎರಡು ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿರುವ ಉಪಮುಖ್ಯಮಂತ್ರಿಗಳು ಸರ್ಕಾರದ ವತಿಯಿಂದ ಪರಿಹಾರವನ್ನು ಗಂಗಮ್ಮ ಅವರ ಕುಟುಂಬದವರಿಗೆ ದೊರಕಿಸಿಕೊಡುವುದಾಗಿ ತಿಳಿಸಿದ್ದಾರೆ.


ಚಿರತೆಯನ್ನು ಹಿಡಿಯಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು. ಅಗತ್ಯವಿರುವ ಬೋನ್ ಹಾಗೂ ಇನ್ನಿತರ ಸಲಕರಣೆಗಳನ್ನು ತರಿಸಿಕೊಂಡು ಚಿರತೆಯನ್ನು ಹಿಡಿಯಲು ಪ್ರಯತ್ನಿಸಲಾಗುವುದು. ಜನರು ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.


ಸಂಬಂಧಿಸಿದ ಅಧಿಕಾರಿಗಳೊಂದಿಗೆ ಈಗಾಗಲೇ ಈ ಬಗ್ಗೆ ಚರ್ಚಿಸಿದ್ದು, ಶೀಘ್ರವೇ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕು ಗೊಳಿಸುವಂತೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದ್ದಾರೆ.


*ಪರಿಹಾರ ನೀಡಿಕೆ:* ಚಿರತೆಗೆ ಬಲಿಯಾದ ಬಾಲಕನ ಕುಟುಂಬದವರಿಗೆ ಈಗಾಗಲೇ ೭.೫ ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರದ ವತಿಯಿಂದ ನೀಡಲಾಗಿದೆ.


ಮೃತ ಗಂಗಮ್ಮನ ಕುಟುಂಬದವರಿಗೂ ಸಹ ದಾಖಲೆಗಳನ್ನು ಸಲ್ಲಿಸಿದ ಬಳಿಕ ೭.೫ ಲಕ್ಷ ರೂ.ಗಳನ್ನು ಪರಿಹಾರ ರೂಪದಲ್ಲಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑