Tel: 7676775624 | Mail: info@yellowandred.in

Language: EN KAN

    Follow us :


ಚಿರತೆ ದಾಳಿಯಿಂದ ಮೃತರಾದ ಗಂಗಮ್ಮ ಅವರ ಮನೆಗೆ ಅರಣ್ಯ ಸಚಿವ ಆನಂದಸಿಂಗ್ ಭೇಟಿ

Posted date: 17 May, 2020

Powered by:     Yellow and Red

ಚಿರತೆ ದಾಳಿಯಿಂದ ಮೃತರಾದ ಗಂಗಮ್ಮ ಅವರ ಮನೆಗೆ ಅರಣ್ಯ ಸಚಿವ ಆನಂದಸಿಂಗ್ ಭೇಟಿ

ರಾಮನಗರ/ಮಾಗಡಿ:ಮೇ/೧೭/೨೦/ಭಾನುವಾರ. ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಹೋಬಳಿಯ ಕೊಟ್ಟಗಾಣಹಳ್ಳಿಯ ೬೨ ವರ್ಷದ ಮಹಿಳೆ ಚಿರತೆ ದಾಳಿಗೆ ಮೃತಪಟ್ಟ ಹಿನ್ನಲೆಯಲ್ಲಿ  ಇಂದು ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಸಚಿವರಾದ ಆನಂದ್ ಸಿಂಗ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು‌‌.


ಚಿರತೆ ದಾಳಿ ನಡೆಸಿದ ಸ್ಥಳ ಪರಿಶೀಲನೆ ನಡೆಸಿದ ಸಚಿವರು ಗ್ರಾಮಸ್ಥರಲ್ಲಿ ದೈರ್ಯ ತುಂಬಿ  ಚಿರತೆ ಸೆರೆಗೆ ಸಾರ್ವಜನಿಕರು ಸಹ ಸಹಕರಿಸಬೇಕು. ಸಂಜೆಯಾದ ನಂತರ ಒಬ್ಬೊಬ್ಬರೆ ಓಡಾಡಬೇಡಿ. ರಾತ್ರಿ ವೇಳೆ ಪಡಸಾಲೆಗಳಲ್ಲಿ ಹಾಗೂ ಮನೆಯಿಂದ ಹೊರಗೆ ನಿದ್ರೆ ಮಾಡಬೇಡಿ. ಸಂಜೆ ವೇಳೆ ಪಟಾಕಿ ಸಿಡಿಸಿ ಎಂದರು.


ಮೃತರ ಕುಟುಂಬಕ್ಕೆ ೧೦ ಲಕ್ಷ ರೂ ಪರಿಹಾರ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಆದರೆ ಲಾಕಡೌನ್ ನಿಂದಾಗಿ ಆರ್ಥಿಕ ಸಂಕಷ್ಟದಿಂದಾಗಿ ೭.೫ ಲಕ್ಷ ರೂ ಪರಿಹಾರ ಮಂಜೂರು ಮಾಡಲಾಗಿದೆ. ಇಂದು ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದು, ಗ್ರಾಮದ ಜನರು, ಜನಪ್ರತಿನಿಧಿಗಳಿಂದ ಸಲಹೆಗಳನ್ನು ಸ್ವೀಕರಿಸಿ ಚರ್ಚಿಸಿ ಉತ್ತಮ ಸಲಹೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು. 


ಗ್ರಾಮದ ಜನರು ಹೆಚ್ಚಿನ ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಬೋನುಗಳನ್ನು ಇಡುವಂತೆ, ಸೆರೆ ಹಿಡಿಯುವ ಚಿರತೆಗಳಿಗೆ ಮೈಕ್ರೋ ಚಿಪ್ ಅಳವಡಿಸುವಾಗ ಸೆರೆ ಹಿಡಿದ ಸ್ಥಳದ ವಿವರವನ್ನು ನಮೂದಿಸುವಂತೆ ಕೋರಿರುತ್ತಾರೆ ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.


ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯ ವತಿಯಿಂದ ಮಾನವ-ಪ್ರಾಣ ಹಾನಿ ಘಟನೆ ನಡೆದ ಸ್ಥಳದ ಸುತ್ತಮುತ್ತ ಕ್ಯಾಮರಾ ಟ್ರ್ಯಾಪ್‌ಗಳನ್ನು ಹಾಗೂ ಬೋನುಗಳನ್ನು  ಅಳವಡಿಸಲಾಗಿದೆ. ಸಾರ್ವಜನಿಕರು ಸಹ ಚಿರತೆ ಕಂಡ ಕೂಡಲೇ ಅರಣ್ಯ ಇಲಾಖೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದರು.


ಇದೇ ಸಂದರ್ಭದಲ್ಲಿ ಶಾಸಕರಾದ ಮಂಜುನಾಥ ಅವರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑