Tel: 7676775624 | Mail: info@yellowandred.in

Language: EN KAN

    Follow us :


ಶ್ರೀರಂಗ ಏತ ನೀರಾವರಿ ಯೋಜನೆ ವರ್ಷದೊಳಗೆ ಪೂರ್ಣ: ಡಾ.ಅಶ್ವತ್ಥನಾರಾಯಣ ಭರವಸೆ

Posted date: 05 Jun, 2020

Powered by:     Yellow and Red

ಶ್ರೀರಂಗ ಏತ ನೀರಾವರಿ ಯೋಜನೆ ವರ್ಷದೊಳಗೆ ಪೂರ್ಣ: ಡಾ.ಅಶ್ವತ್ಥನಾರಾಯಣ ಭರವಸೆ

ಮುಂದಿನ ಸಂಪುಟ ಸಭೆಯಲ್ಲಿ  ೩೨೪.೬೭ ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಒಪ್ಪಿಗೆ; ಮಾಗಡಿ ಮತ್ತು ಕುಣಿಗಲ್ ತಾಲೂಕುಗಳ ೨೭೭ ಹಳ್ಳಿಗಳಿಗೆ ನೀರುದೊಗಿಸುವ ಯೋಜನೆ ಇದು


ಬೆಂಗಳೂರು: ರಾಮನಗರ ಜಿಲ್ಲೆಯ ಮಾಗಡಿ ಮತ್ತು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕುಗಳ ೨೭೭ ಹಳ್ಳಿಗಳಿಗೆ ಕುಡಿಯುವ ನೀರೊದಗಿಸುವ ಶ್ರೀರಂಗ ಏತ ನೀರಾವರಿ ಯೋಜನೆಯ ೩೨೪.೬೭ ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯುವುದಾಗಿ ಹೇಳಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ನಂತರದ ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.


ಶ್ರೀರಂಗ ಏತ ನೀರಾವರಿ ಯೋಜನೆಯ ಪ್ರಗತಿ ಕುರಿತಂತೆ ಶುಕ್ರವಾರ ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಾ.ಅಶ್ವತ್ಥನಾರಾಯಣ, "೨೦೧೪ ರಿಂದ ಕುಂಟುತ್ತಾ ಸಾಗಿರುವ ಈ ಯೋಜನೆಯ ಕಾಮಗಾರಿಯನ್ನು ಚುರುಕುಗೊಳಿಸಬೇಕು. ಅದಕ್ಕೆ ಅಗತ್ಯವಿರುವ ಭೂಮಿ ಸ್ವಾಧೀನಪಡಿಸಿಕೊಳ್ಳಲು ಇರುವ ತೊಡಕುಗಳನ್ನು ತಕ್ಷಣ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟಾಜ್ಞೆ ಮಾಡಿದರು.


"ಮಾಗಡಿ ತಾಲೂಕಿನ ೨೧೧ ಹಳ್ಳಿಗಳು, ಕುಣಿಗಲ್‌ ತಾಲೂಕಿನ ೬೬ ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತದೆ. ಇದರಿಂದಾಗಿ ಮಾಗಡಿಯ ೬೬ ಕೆರೆಗಳು, ಕುಣಿಗಲ್‌ನ ೧೭ ಕೆರೆಗಳನ್ನು ತುಂಬಿಸಲು ಹೇಮಾವತಿ ನದಿಯಿಂದ ಏತ ನೀರಾವರಿ ಮೂಲಕ ಹರಿಸುವ ೨೭೭.೫ ಕೋಟಿ ರೂ. ವೆಚ್ಚದ ಯೋಜನೆಯನ್ನು ೨೦೧೪ ರಲ್ಲಿ ಆರಂಭಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಿ ಕಾಮಗಾರಿ ಪುನಾರಂಭಿಸಲಾಗುವುದು," ಎಂದರು.


"ಭೂಸ್ವಾಧೀನ ಸಮಸ್ಯೆಯಿಂದ ಕಾಮಗಾರಿ ವಿಳಂಬವಾಗುವುದನ್ನು ತಪ್ಪಿಸಲು ೨೭೭ ಕಿ.ಮೀ. ಉದ್ದದ ರಸ್ತೆ ಬದಿ ಗ್ರ್ಯಾವಿಟಿ ಮೈನ್ ಪೈಪ್ ಅಳವಡಿಸಲು ನಿರ್ಧರಿಸಿದ್ದರಿಂದ ಯೋಜನೆಗೆ ೫೩.೪೨ ಕೋಟಿ ರೂ. ಹೆಚ್ಚುವರಿ ಅನುದಾನ ಬೇಕಾಗಿದ್ದು, ಯೋಜನಾ ವೆಚ್ಚ ೩೨೪.೬೭ ಕೋಟಿ ರೂ.ಗೆ ಏರಿಕೆಯಾಗಿದೆ. ಈಗಾಗಲೇ ಪರಿಷ್ಕೃತ ಅಂದಾಜು ಸಿದ್ಧವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುವುದು," ಎಂದು ತಿಳಿಸಿದರು.


ಭೂಸ್ವಾಧೀನ ತ್ವರಿತಗೊಳಿಸಲು ಸೂಚನೆ

ಯೋಜನೆಗೆ ರಾಮನಗರ ಜಿಲ್ಲೆಯಲ್ಲಿ ೫೭ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾಗಿದ್ದು, ೧೪ ಎಕರೆ, ೨೪ ಗುಂಟೆ ಜಮೀನನ್ನು ನೇರ ಖರೀದಿ ಮೂಲಕ ಸ್ವಾಧೀನಪಡಿಸಿಕೊಳ್ಳಲಾಗಿದೆ. ಉಳಿದ ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಕುಣಿಗಲ್‌ ತಾಲೂಕಿನಲ್ಲಿ ೨೩ ಎಕರೆ ಜಮೀನು ಬೇಕಾಗಿದ್ದು, ರೈತರು ಭೂಮಿ ನೀಡಲು ಸಿದ್ಧರಿಲ್ಲ. ಹೀಗಾಗಿ ಸಾಮಾಜಿಕ ಪರಿಣಾಮ ನಿರ್ಧರಣಾ ಅಧ್ಯಯನ (ಎಸ್ಐಎ) ನಡೆಸಲು ನಿರ್ಧರಿಸಲಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು. 


ಇದಕ್ಕೆ ಪ್ರತಿಕ್ರಿಯಿಸಿದ ಡಾ.ಅಶ್ವತ್ಥನಾರಾಯಣ, "ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಇದಕ್ಕೆ ಇರುವ ತೊಡಕುಗಳನ್ನು ತಕ್ಷಣವೇ ಬಗೆಹರಿಸಿ ಅಗತ್ಯ ಭೂಮಿ ಸ್ವಾಧೀನಪಡಿಸಿಕೊಂಡು ಕಾಮಗಾರಿ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕಾಗಿದೆ. ಸುಮಾರು ೩೨೪.೬೭ ಕೋಟಿ ರೂ. ವೆಚ್ಚದ ಈ ಯೋಜನೆ ೨೦೧೪ ರಲ್ಲೇ ಆರಂಭಗೊಂಡರೂ ಇದುವೆರೆಗೆ ೧೬೩.೩೮ ಕೋಟಿ ರೂ. ವೆಚ್ಚದ ಕಾಮಗಾರಿ ಮಾತ್ರ ನಡೆದಿದೆ. ಮುಂದೆ ಈ ರೀತಿಯ ವಿಳಂಬ ಆಗಬಾರದು. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಆದ್ಯತೆ ಮೇಲೆ ಈ ಕುರಿತು ಕ್ರಮ ಕೈಗೊಳ್ಳಬೇಕು" ಎಂದು ಸೂಚನೆ ನೀಡಿದರು.


ಮಾಗಡಿ ಶಾಸಕ ಮಂಜುನಾಥ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಾಕೇಶ ಸಿಂಗ್‌, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ್‌ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑