Tel: 7676775624 | Mail: info@yellowandred.in

Language: EN KAN

    Follow us :


ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ : ಆದಿತ್ಯ ಮಹೇಶ್ ಗೌಡ

Posted date: 08 Mar, 2018

Powered by:     Yellow and Red

ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ : ಆದಿತ್ಯ ಮಹೇಶ್ ಗೌಡ

ಕನಕಪುರ : ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಕ್ಷೇತ್ರದ ಮತದಾರರಿಗೆ ತಿಳಿಸುವಂತಹ ಕೆಲಸವನ್ನು ಯುವ ಕಾರ್ಯಕರ್ತರು ಮನೆಮನೆಗೂ ತೆರಳಿ ಪ್ರಚಾರ ನಡೆಸುವುದಾಗಿ ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ಆದಿತ್ಯ ಮಹೇಶ್‍ಗೌಡ ತಿಳಿಸಿದರು.
ಪಟ್ಟಣದ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಭಾರತದೇಶದಲ್ಲಿ ಶೇ 60% ರಷ್ಟು ಯುವಶಕ್ತಿ ಇದ್ದು ಅವರಿಗೆ ದುಡಿಯುವಂತಹ ಉದ್ಯೋಗವನ್ನು ರೂಪಿಸುವ ದೂರದೃಷ್ಟಿಯಿಂದ ಪ್ರಧಾನಿ ನರೇಂದ್ರಮೋದಿಯವರು ಮೇಕ್ ಇನ್ ಇಂಡಿಯಾ ಘೋಷ ವಾಕ್ಯದೊಂದಿಗೆ ಯೋಜನೆಯನ್ನು ಜಾರಿಗೆ ತಂದಿದ್ದು ಇದರಿಂದ ಮುಂದಿನ ದಿನಗಳಲ್ಲಿ ಭಾರತದೇಶವು ಉತ್ಪಾದನೆಯಲ್ಲಿ ಸ್ವಾವಲಂಭನೆಗಳಿಸಿ ಅಭಿವೃದ್ಧಿ ರಾಷ್ಟ್ರಗಳಲ್ಲಿ ಮೊದಲನೆ ಸ್ಥಾನ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಇಡೀ ವಿಶ್ವದಲ್ಲೇ ಭಾರತ ದೇಶವನ್ನು ಗೌರವಿಸುವಂತಹ ವಾತಾವರಣವನ್ನು ಪ್ರಧಾನಮಂತ್ರಿಯವರು ತಂದುಕೊಟ್ಟಿದ್ದು ಅವರ ಸ್ವಚ್ಛ ಆಡಳಿತ ಹಾಗೂ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಂತಹ ಕೆಲಸವಾಗಬೇಕಾಗಿದ್ದು ಇದರಲ್ಲಿ ಪ್ರಮುಖವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಖಾತೆ ತೆರೆದಿರುವ ಪ್ರತಿಯೊಬ್ಬ ನಾಗರೀಕರಿಗೂ ಮಾಸಿಕೆ ಕಡಿಮೆ ವಿಮೆ ಕಂತನ್ನು ಜಾರಿಗೆ ತಂದಿದ್ದು ಹತ್ತು ಲಕ್ಷದ ವರೆವಿಗೂ ವಿಮಾ ಸೌಲಭ್ಯವನ್ನು ಜಾರಿಗೆ ತಂದಿರುವುದು ಸ್ವಚ್ಛಭಾರತ ಯೋಜನೆಯಡಿ ರಾಜ್ಯದ ಪ್ರತಿಷ್ಟಿತ ನಗರಗಳಲ್ಲಿ ಹಮ್ಮಿಕೊಂಡಿರುವ ಸ್ವಚ್ಛತಾ ಆಂದೋಲನ, ಮೈಸೂರು-ಬೆಂಗಳೂರು ರೈಲು ಬ್ರಾಡ್‍ಗೇಜ್ ಮಾರ್ಗ, ಆರುಪಥದ ರಸ್ತೆ, ಫಸಲ್‍ಭೀಮಾ ಯೋಜನೆ, ಉಜ್ವಲಯೋಜನೆ, ನರೇಗಾ ಕಾಮಗಾರಿಗಳು ಕೇಂದ್ರ ಸರ್ಕಾರದ ಕೊಡುಗೆಗಳಾಗಿವೆ. 
ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಹಿಂದಿನ ಬಿ.ಜೆ.ಪಿ ಸರ್ಕಾರದಲ್ಲಿ ಮಾನ್ಯ ಯಡಿಯೂರಪ್ಪ ನವರು ಹತ್ತು ಸಾವಿರ ಮನೆಗಳನ್ನು ನೀಡಿದ್ದು ರಸ್ತೆ ಅಗಲೀಕರಣ ಹಾಗೂ ಪಟ್ಟಣ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿಗಳನ್ನು ನೀಡಿದರ ಫಲವಾಗಿ ಇಂದು ಕನಕಪುರದಲ್ಲಿ ಬದಲಾವಣೆಯ ಗಾಳಿ ಬೀಸಿದ್ದು ಇವೆಲ್ಲಾ ವಿಚಾರಗಳನ್ನು ಮತದಾರರಿಗೆ ತಲುಪಿಸಿ ಯಾರೇ ಪಕ್ಷದ ಅಭ್ಯರ್ಥಿಯಾದರೂ ಅವರನ್ನು ಜಯಶೀಲರನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಮುಖಂಡರುಗಳಾದ ಚೀರಣಕುಪ್ಪೆ ರಾಜೇಶ್, ಟೌನ್ ಉಪಾಧ್ಯಕ್ಷ ಆಟೋಕುಮಾರ್, ಪ್ರಧಾನಕಾರ್ಯದರ್ಶಿ ಮಹೇಶ್ ಸೇರಿದಂತೆ ಕಾರ್ಯಕರ್ತರುಗಳು ಭಾಗವಹಿಸಿದ್ದರು.
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑