Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಸಾಲುಮರದ ನಿಂಗಣ್ಣ, ಎಸ್.ಸಿ. ವೀರಭದ್ರಯ್ಯ ಅವರಿಗೆ ಸನ್ಮಾನ

Posted date: 06 Jun, 2020

Powered by:     Yellow and Red

ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಸಾಲುಮರದ ನಿಂಗಣ್ಣ, ಎಸ್.ಸಿ. ವೀರಭದ್ರಯ್ಯ ಅವರಿಗೆ ಸನ್ಮಾನ

ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಸಾಲುಮರದ ನಿಂಗಣ್ಣ, ಎಸ್.ಸಿ. ವೀರಭದ್ರಯ್ಯ ಅವರನ್ನ ಸನ್ಮಾನಿಸಲಾಯಿತು.

ರಾಮನಗರ : ಮಾನವ ತನ್ನ ದುರಾಸೆಯಿಂದ ಪರಿಸರ ಅಸಮತೋಲನಕ್ಕೆ ಕಾರಣನಾಗುತ್ತಿದ್ದಾನೆ ಎಂದು ಚನ್ನಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ವಿ. ರುಕ್ಮಿಣಿ ತಿಳಿಸಿದರು.

ನಗರದ ಶ್ರೀ ಶಾರದಾಂಬೆ ದೇವಾಲಯದಲ್ಲಿ ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಪರಿಸರ ದಿನಾಚರಣೆ ಅಂಗವಾಗಿ ಪರಿಸರವಾದಿಗಳಾದ ಸಾಲುಮರದ ನಿಂಗಣ್ಣ, ಸುಗ್ಗನಹಳ್ಳಿಯ ಎಸ್.ಸಿ. ವೀರಭದ್ರಯ್ಯ ಅವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವನ ಸ್ವಾರ್ಥ ಮನೋಭಾವದಿಂದ ಇಲ್ಲಿನ ಪರಿಸರ ಇನ್ನಷ್ಟು ಹದಗೆಡುತ್ತಿದೆ. ಅಸಹನೀಯ ವಾತಾವರಣ ನಿರ್ಮಾಣವಾಗುತ್ತಿದೆ ಎಂದರು.

ಪ್ರಾಣಿ, ಪಕ್ಷಿ ಮತ್ತು ಕೀಟಗಳಿಗೆ ಅಪಾಯಕಾರಿಯಗಿ ಪರಿಣಮಿಸಿರುವ ಮಾನವನು, ತನ್ನ ಐಶಾರಾಮಿ ಜೀವನಕ್ಕಾಗಿ ಸುಂದರ ಪರಿಸರ ನಾಶಪಡಿಸುತ್ತಿದ್ದಾನೆ. ದಿನದಿಂದ ದಿನಕ್ಕೆ ವಾಹನ ದಟ್ಟಣೆ ಹೆಚ್ಚುತ್ತಿದ್ದು, ಪರಿಸರದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ ಎಂದು ತಿಳಿಸಿದರು.


ಯುವಜನರು ಪರಿಸರವನ್ನು ಉಳಿಸಿಕೊಳ್ಳದಿದ್ದಲ್ಲಿ, ಮುಂದಿನ ದಿನಗಳಲ್ಲಿ ಗಂಭೀರ ಸ್ವರೂಪದ ಸಮಸ್ಯೆಗಳನ್ನು, ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಪರಿಹಾರ ಕಂಡುಕೊಳ್ಳಲಾಗದಷ್ಟು ಸಮಸ್ಯೆ ಜಟಿಲವಾಗುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.


ಪ್ರತಿಯೊಬ್ಬರು ಜನ್ಮದಿನ ಆಚರಿಸುವ ಸಂದರ್ಭದಲ್ಲಿ ಕೇಕ್ ಕತ್ತರಿಸುವ ಬದಲು ಸಸಿ ನೆಡುವ ಮನೋಭಾವ ಬೆಳೆಸಿಕೊಳ್ಳಬೇಕು. ಪ್ಲಾಸ್ಟಿಕ್ ಚೀಲಗಳ ಬದಲು ಹತ್ತಿ ಮತ್ತು ಸೆಣಬು ಬಟ್ಟೆಯಿಂದ ನೇಯ್ದ ಕೈಚೀಲ ಬಳಸಬೇಕು ಎಂದು ತಿಳಿಸಿದರು.

ಹಿರಿಯ ಸಮಾಜ ಸೇವಕ ಕೆ.ಎಲ್. ಶೇಷಗಿರಿರಾವ್, ಜನಪದ ಕಲಾವಿದ ಪಾರ್ಥಸಾರಥಿ, ಜಿಲ್ಲಾ ಲೇಖಕರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಸ್. ರುದ್ರೇಶ್ವರ, ಸಾಮಾಜಿಕ ಕಾರ್ಯಕರ್ತೆ ಎಸ್. ಪದ್ಮರೇಖ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಆರ್. ವಿನುತ, ಸಂಯೋಜಕ ಎಂ.ಎಸ್. ಚನ್ನವೀರಪ್ಪ, ಎನ್.ಜಿ. ರೂಪಶ್ರೀ, ವನವಾಸಿ ಕಲ್ಯಾಣ ಸಮಿತಿಯ ಖಜಾಂಚಿ ಕೆ.ಆರ್. ಸತೀಶ್, ಅಮೃತ ವಿಕಲಚೇತನ ಚಾರಿಟಬಲ್ ಟ್ರಸ್ಟಿನ ಕಾರ್ಯದರ್ಶಿ ಟಿ. ರಮೇಶ್, ಸ್ವಪ್ನ, ಉಪನ್ಯಾಸಕ ಅಕ್ಕೂರು ಬಸವರಾಜ್, ಯಲ್ಲೊ ಅಂಡ್ ರೆಡ್ ಸಂಸ್ಥೆಯ ಆನಂದಶಿವ, ಕೃಷ್ಣಜೋಶಿ, ಅರ್ಚಕ ಶ್ರೀನಿವಾಸಬಾಬು ಇತರರು ಉಪಸ್ಥಿತರಿದ್ದರು.  


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑