Tel: 7676775624 | Mail: info@yellowandred.in

Language: EN KAN

    Follow us :


ಸೋಮವಾರದಿಂದ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳು ಪ್ರಾರಂಭ; ಮಾರ್ಗಸೂಚಿ ಬಿಡುಗಡೆ ಮಾಡಿದ ಯಡಿಯೂರಪ್ಪ

Posted date: 06 Jun, 2020

Powered by:     Yellow and Red

ಸೋಮವಾರದಿಂದ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳು ಪ್ರಾರಂಭ; ಮಾರ್ಗಸೂಚಿ ಬಿಡುಗಡೆ ಮಾಡಿದ ಯಡಿಯೂರಪ್ಪ

ಬೆಂಗಳೂರು:ಜೂ/೦೬/೨೦/ಶನಿವಾರ. ಕೇಂದ್ರ ಸರ್ಕಾರದ ಮಾರ್ಗ ಸೂಚಿಗಳನ್ವಯ ರಾಜ್ಯದಲ್ಲಿ ಜೂನ್ ೦೮ ರಿಂದ ಹೋಟೆಲ್‌ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ.

ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾರ್ಗಸೂಚಿ ಬಿಡುಗಡೆ ಮಾಡಿ ಎಚ್ಚರಿಸಿದರು.


ಸರ್ಕಾರದ ಮಾರ್ಗ ಸೂಚಿಗಳನ್ನು ಪಾಲಿಸುವುದಾಗಿ ಹೋಟೆಲ್‌ಗಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪನಿಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು.

ಮುಖ್ಯಮಂತ್ರಿಗಳು ಇಂದು ರಾಜ್ಯದಲ್ಲಿ ಪ್ರವಾ ಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕೆಲವು ತೊಡಕುಗಳ ನಿವಾರಣೆ ಕುರಿತು ಪ್ರವಾಸೋದ್ಯಮ ಹಾಗೂ ಸಾರಿಗೆ ಇಲಾಖೆ ಮತ್ತು ವಿವಿಧ ಭಾಗೀದಾರರ ಜೊತೆಗೆ ಚರ್ಚೆ ನಡೆಸಿದರು.


ಸಭೆಯಲ್ಲಿ ಭಾಗವಹಿಸಿದ್ದ ಬಸ್ ಮಾಲೀಕರ ಸಂಘ, ಹೋಟೆಲ್ ಮಾಲೀ ಕರ ಸಂಘ ಹಾಗೂ ಟ್ಯಾಕ್ಸಿ ಮಾಲಿಕರ ಸಂಘಗಳ ನಿಯೋಗವು ಸರ್ಕಾರದ ಮುಂದೆ ಕೆಲ ಬೇಡಿಕೆಗಳನ್ನು ಇಟ್ಟರು. ಅವರ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.


ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರವಾಸೋದ್ಯಮ ಇಲಾಖೆಯು ಹೋಟೆಲ್‌ಗಳು, ಆತಿಥ್ಯ ಘಟಕಗಳು ಮತ್ತು ಪ್ರವಾಸಿ ತಾಣಗಳನ್ನು ತೆರೆಯುವ ಹಿನ್ನೆಲೆಯಲ್ಲಿ ಅನುಸರಿ ಸಬೇಕಾದ ಮಾರ್ಗಸೂಚಿಗಳ ಕೈಪಿಡಿಯನ್ನು ಬಿಡುಗಡೆ ಮಾಡಿದರು.

ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪ್ರವಾಸೋ ದ್ಯಮ ಸಚಿವ ಸಿ.ಟಿ. ರವಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರುತಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿ ಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑