Tel: 7676775624 | Mail: info@yellowandred.in

Language: EN KAN

    Follow us :


ಬೈರಮಂಗಲ ಗ್ರಾಮದ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಿದ ಬಾಲಕೃಷ್ಣ

Posted date: 08 Mar, 2018

Powered by:     Yellow and Red

ಬೈರಮಂಗಲ ಗ್ರಾಮದ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಿದ ಬಾಲಕೃಷ್ಣ

ರಾಮನಗರ : ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬಿಡದಿ ಹೋಬಳಿ ಬೈರಮಂಗಲ ಗ್ರಾಮದ ಸಾಗುವಳಿದಾರರಿಗೆ ಶಾಸಕ ಎಚ್.ಸಿ. ಬಾಲಕೃಷ್ಣ ಹಕ್ಕು ಪತ್ರ ವಿತರಣೆ ಮಾಡಿದರು.
    ಶಾಸಕ ಎಚ್.ಸಿ. ಬಾಲಕೃಷ್ಣ ಮಾತನಾಡಿ ಕಾನೂನು ಬದ್ದವಾಗಿ ಫಾರಂ.50 ಮತ್ತು 53 ಅಡಿಯಲ್ಲಿ ಅರ್ಜಿ ಹಾಕಿರುವ ಬಗರ್ ಹುಕುಂ ಸಾಗುವಳಿ ನಡೆಸುತ್ತಿರುವ ರೈತರಿಗೆ ಅಧಿಕಾರಿಗಳು ಪರಿಶೀಲನೆ ಮಾಡಿ ಕ್ರಮಬದ್ದವಾಗಿರುವ ರೈತರಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
    ಬೈರಮಂಗಲ ಗ್ರಾಮದ 10 ಜನರಿಗೆ ಸಾಂಕೇತಿಕವಾಗಿ ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದ್ದು, ಬಿಡದಿ ಮತ್ತು ಕೂಟಗಲ್ ಹೋಬಳಿಯ ಭಾಗದಲ್ಲಿ ಈ ಹಿಂದೆ ಸಲ್ಲಿಸಿರುವ ಅರ್ಜಿಯನ್ನು ಪರಿಶೀಲಿಸಿ, ಸ್ಥಳ ಪರಿಶೀಲನೆಯನ್ನು ಅಧಿಕರಿಗಳು ಮಾಡಿದ್ದು, ಅವುಗಳಲ್ಲಿ ಕಾನೂನಾತ್ಮಕವಾಗಿರುವ ರೈತರಿಗೆ ಜಮೀನು ಮಂಜೂರು ಹಕ್ಕು ಪತ್ರವನ್ನು ನೀಡಲಾಗುತ್ತಿದ್ದು ಕೆಲವರು ಅಪಪ್ರಚಾರ ಮಾಡಲು ಹೊರಟಿದ್ದಾರೆ ಅವರಿಗೆ ಹಕ್ಕುಪತ್ರ ನೀಡುವ ಮೂಲಕ ಉತ್ತರ ನೀಡುತ್ತಿದ್ದೇನೆ ಎಂದರು.
ಬಗರ್‍ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವ ವಿಚಾರದಲ್ಲಿ ಸರ್ಕಾರದ ನಿರ್ಧಾರ ಪ್ರಕಟವಾಗುತ್ತಲೇ ತಾವು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ತಾವೇ ಖುದ್ದು ಪರಿಶೀಲನೆ ನಡೆಸಿರುವುದಾಗಿ, ಅಧಿಕಾರಿಗಳು ಸಹ ಪರಿಶೀಲನೆ ನಡೆಸಿದ್ದಾರೆ. ಸತ್ಯಾಸತ್ಯೆಯನ್ನು ಅರಿತು ದಾಖಲೆಗಳು ಸಿದ್ದವಾಗಿವೆ, ಈ ನಡುವೆ ತಮ್ಮ ರಾಜಕೀಯ ವಿರೋಧಿಗಳು ಇದೆಲ್ಲಾ ಗಿಮ್ಮಿಕ್, ಬೋಗಸ್ ಎಂದು ಟೀಕಿಸಿದ್ದರು. ತಮ್ಮ ವಿರೋಧಿಗಳ ಟೀಕೆಗೆ ಉತ್ತರವಾಗಿ ಹಕ್ಕುಪತ್ರಗಳ ವಿತರಣೆ ಆರಂಭವಾಗಿದೆ ಎಂದರು.
ಹಿಂದೆ ಹಣವನ್ನು ಪಾವತಿಸಿರುವ ರೈತರಿಗೂ ಹಕ್ಕುಪತ್ರ ವಿತರಣೆ ಮಾಡಲಾಗುವುದು. ಈಗ ಮಂಜೂರಾಗಿರುವ ರೈತರಿಗೆ ಹಣ ಕಟ್ಟಿಸಿಕೊಳ್ಳಲು ನೋಟೀಸ್ ನೀಡಿ ವಿಸ್ತೀರ್ಣಕ್ಕೆ ತಕ್ಕಂತೆ ಕಿಮ್ಮತ್ತು ಕಟ್ಟಿಸಿಕೊಳ್ಳಲಾಗುವುದು. ಸ್ವಾಧೀನದಲ್ಲಿರುವವರು ಕಡಿಮೆ ಮಂಜೂರಾತಿ ಹಾಗಿದ್ದರೆ, ಆ ಬಗ್ಗೆ ಆಕ್ಷೇಪಣೆಗಳು ಬಂದರೆ ಮರು ಪರಿಶೀಲನೆಗೆ ಸರ್ವೆ ಅಧಿಕಾರಿಗಳಿಗೆ ಆದೇಶಿಸಲಾಗುವುದು ಎಂದರು.
ರಾಜ್ಯದಲ್ಲಿ ಕಾಗೋಡು ತಿಮ್ಮಪ್ಪ ಐದು ವರ್ಷದ ಹಿಂದೆಯೆ ಕಂದಾಯ ಸಚಿವರಾಗಿದ್ದರೆ ರೈತರ ಸಮಸ್ಯೆಗಳೆಲ್ಲ ಬಗೆಹರಿಯುತ್ತಿದ್ದವು. 20 ವರ್ಷಗಳಿಂದ ಬಗೆಹರಿಯದ ಸಮಸ್ಯೆಯನ್ನು ಬಗೆಹರಿಸಲು ಅವರಲ್ಲಿರುವ ಇಚ್ಚಾಸಕ್ತಿಯೆ ಕಾರಣ. ಅದರ ಜೊತೆಗೆ ಈ ಕೆಲಸಕ್ಕೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು. ನೈಸ್ ಸಮಸ್ಯೆ ಇರುವ ಅರ್ಜಿಗಳ ಸಂಬಂಧ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಆ ವಿಚಾರವಾಗಿ ಅಧಿಕಾರಿಗಳು ಸರ್ಕಾರದ ನಿರ್ದೇಶನದಂತೆ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಈ ಸಂಧರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಮಾರುತಿ ಪ್ರಸನ್ನ, ತಾಲ್ಲೂಕು ಪಂಚಾಯಿತಿ ಸದಸ್ಯ ಗಾಣಕಲ್ ನಟರಾಜು ಉಪಸ್ಥಿತಿರಿದ್ದರು. 
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑