ಕಳ್ಳಿಹೊಸೂರು ಗ್ರಾಮದಲ್ಲಿ ರಸ್ತೆ ಒತ್ತುವರಿ ಮಾಡಿ ಮನೆ ನಿರ್ಮಾಣ: ಸಿಇಓ, ತಹಶಿಲ್ದಾರ್ ಆದೇಶಿದ್ದರೂ ತೆರವುಗೊಳಿಸದ ಪಿಡಿಓ
ಚನ್ನಪಟ್ಟಣ:ಜೂ/೧೧/೨೦/ಗುರುವಾರ. ತಾಲ್ಲೂಕಿನ ಕಸಬಾ ಹೋಬಳಿ, ತಿಟ್ಟಮಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳ್ಳಿಹೊಸೂರ ಗ್ರಾಮದ ಗೌರಮ್ಮ ಎಂಬುವವರು ಸರ್ವೇ ನಂಬರ್ ೧೮ ರ ಸಾರ್ವಜನಿಕ ರಸ್ತೆಯ ೦೦.೧೮ ಗುಂಟೆ ಜಾಗವನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿದ್ದು, ಒತ್ತುವರಿ ತೆರವುಗೊಳಿಸಲು ಗ್ರಾಮದ ಸಂದೀಪ್ ಎಂಬುವವರು ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದರು. ತದ ನಂತರ ಸರ್ವೇ ಮಾಡಿ ತೆರವುಗೊಳಿಸಲು ಸೂಚಿಸಿದ್ದರೂ ಸಹ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತೆರವುಗೊಳಿಸದೇ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಸಾಮಾಜಿಕ ಕಾರ್ಯಕರ್ತ ಸಂದೀಪ್ ರವರು ಈ ಬಗ್ಗೆ ತಹಶಿಲ್ದಾರ್ ಮತ್ತು ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾ ಅಧಿಕಾರಿಗೆ ದೂರು ಸಲ್ಲಿಸಿದ್ದು ತಹಶಿಲ್ದಾರ್ ಸುದರ್ಶನ್ ಮತ್ತು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಚಂದ್ರು ರವರು ಭೇಟಿ ನೀಡಿ, ಸರ್ವೇ ಮಾಡಿಸಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಒತ್ತುವರಿ ಯನ್ನು ತೆರವುಗೊಳಿಸುವಂತೆ ಕ್ರಮವಾಗಿ ಸಂ.ಎನ್ ಸಿಆರ್,/ಸಿಆರ್/೯೮/೨೦೧೮/೧೯ ಹಾಗೂ ಸಂ.ರಾ.ಜಿ.ಪಂ.ಸಿ೮/ಸಾದೂ/ಸಿಆರ್-೫೦೧/೨೧/೦೬/೦೪/೨೦ ರಲ್ಲಿ ಆದೇಶ ನೀಡಿದ್ದರೂ ಸಹ ತೆರವು ಗೊಳಿಸಿಲ್ಲ.
ಈ ಬಗ್ಗೆ ಪ್ರತಿಕ್ರಿಯೆ ನೀಡಲು ತಹಶಿಲ್ದಾರ್ ಸುದರ್ಶನ್ ರವರಿಗೆ ಕರೆ ಮಾಡಲಾಗಿ ಅವರು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ್ದರಿಂದ ಸಂಪರ್ಕಿಸಲು ಸಾಧ್ಯವಾಗಲಿಲ್ಲ.
ಪಿಡಿಓ ಗೆ ತೆರವುಗೊಳಿಸಲು ಸೂಚಿಸಿದ್ದು, ನಿನ್ನೆ ದಿನವೇ ಎಚ್ಚರಿಕೆ ನೀಡಿ ಬಂದಿದ್ದಾರೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.
*ಚಂದ್ರು ಇಓ ಚನ್ನಪಟ್ಟಣ*
ಅರವತ್ತು ಎಪ್ಪತ್ತರ ದಶಕದ ಹಿಂದಿನಿಂದಲೂ ಒತ್ತುವರಿಯಾಗಿದ್ದು, ಈಗಾಗಲೇ ಮನೆ ನಿರ್ಮಾಣವಾಗಿರುವುದರಿಂದ ತಾಲ್ಲೂಕಿನ ದಂಡಾಧಿಕಾರಿಗಳು ಮಾನವೀಯ ದೃಷ್ಟಿಯಿಂದ ಆದೇಶ ನೀಡಿ ಕ್ರಮ ಕೈಗೊಳ್ಳಬೇಕಾಗಿದೆ.
*ರಾಜಣ್ಣ. ತಾಲ್ಲೂಕು ಪಂಚಾಯತಿ ಅಧ್ಯಕ್ಷರು*
ನಿನ್ನೆ ದಿನ ಒತ್ತುವರಿ ಜಾಗಕ್ಕೆ ಅರ್ಜಿದಾರರು ಮತ್ತು ತಾಲ್ಲೂಕು ಪಂಚಾಯತಿ ಅಧ್ಯಕ್ಷರು ಸೇರಿ ಪರಿಶೀಲಿಸಿದ್ದು ಅರ್ಜಿದಾರರು ಮತ್ತು ಒತ್ತುವರಿದಾರರಿಗೆ ಮಾತಿನ ಚಕಮಕಿ ನಡೆಯಿತು. ಇಂದು ಇಓ ಮತ್ತು ತಹಶಿಲ್ದಾರ್ ರವರಿಗೆ ಇದರ ಸಂಪೂರ್ಣ ಮಾಹಿತಿಯನ್ನು ನೀಡಿ ಮುಂದಿನ ಅವರ ಆದೇಶದಂತೆ ಕ್ರಮ ಜರುಗಿಸುತ್ತೇನೆ.
*ಮಾದೇಗೌಡ. ಪಿಡಿಓ*
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು