Tel: 7676775624 | Mail: info@yellowandred.in

Language: EN KAN

    Follow us :


ಮಾರ್ಚ್ 11ರಿಂದ ಎರಡನೆ ಪಲ್ಸ್ ಪೋಲಿಯೋ ಪ್ರಾರಂಭ

Posted date: 08 Mar, 2018

Powered by:     Yellow and Red

ಮಾರ್ಚ್ 11ರಿಂದ ಎರಡನೆ ಪಲ್ಸ್ ಪೋಲಿಯೋ ಪ್ರಾರಂಭ

ರಾಮನಗರ : ಎರಡನೇ ಸುತ್ತಿನ ಪಲ್ಸ್ ಪೋಲಿಯೋ ಅಭಿಯಾನ ಇದೇ ಮಾ.11 ರಿಂದ ಆರಂಭವಾಗಲಿದ್ದು, ಈ ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಆರ್. ಪ್ರಶಾಂತ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 
ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಎರಡನೇ ಸುತ್ತಿನ ಪಲ್ಸ್ ಪೋಲಿಯೋ ಅಭಿಯಾನ ಕಾರ್ಯಕ್ರಮದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 
ಕಳೆದ ಜ.28 ರಿಂದ 31ರ ವರೆಗೆ ನಡೆದ ಮೊದಲ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆ ಶೇ.106.63ರಷ್ಟು ಸಾಧನೆ ಮಾಡಿದೆ, ಎರಡನೇ ಸುತ್ತಿನಲ್ಲಿಯೂ ಕೂಡ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದಕ್ಕಿಂತಲೂ ಉತ್ತಮ ಸಾಧನೆ ಮಾಡಬೇಕಿದ್ದು, ಎಲ್ಲಾ ಅರ್ಹ ಮಕ್ಕಳಿಗೂ ಪೋಲಿಯೋ ಹನಿ ನೀಡಬೇಕು ಎಂದವರು ಹೇಳಿದರು.
ಆರ್‍ಸಿಎಚ್ ಅಧಿಕಾರಿ ಲಕ್ಷ್ಮೀಪತಿ ಮಾತನಾಡಿ, ಪೋಲಿಯೋ ನಿರ್ಮೂಲನೆಯಲ್ಲಿ ದೇಶ ಗಣನೀಯ ಪ್ರಗತಿ ಸಾಧಿಸಿದೆ.  ದೇಶದಲ್ಲಿ 2011 ರಿಂದ ಹೊಸ ಪೋಲಿಯೋ ಪ್ರಕರಣ ಕಂಡು ಬಂದಿಲ್ಲ. ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರವನ್ನಾಗಿ ಘೋಷಿಸಿದೆ ಎಂದು ಹೇಳಿದರು.
ಪಾಕಿಸ್ತಾನ, ಆಘ್ಘಾನಿಸ್ತಾನ ಮತ್ತು ನೈಜೇರಿಯಾದಲ್ಲಿ ಪೋಲಿಯೋ ಪ್ರಕರಣ ಕಂಡು ಬಂದಿರುವುದರಿಂದ ಪೋಲಿಯೋ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಲಸಿಕೆ ಮುಂದುವರಿಸಲಾಗುತ್ತಿದೆ. ಮಾ. 11ರಂದು ನಡೆಯಲಿರುವ ಎರಡನೇ ಹಂತದ ಪೋಲಿಯೋ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಹಾಗೂ ಪೋಲಿಯೋ ಕುರಿತು ಜಾಗೃತಿ ಮೂಡಿಸಲು ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಅಮರನಾಥ್ ಸೇರಿ ಜಿಲ್ಲೆಯ ಆರೋಗ್ಯ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. 
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑