Tel: 7676775624 | Mail: info@yellowandred.in

Language: EN KAN

    Follow us :


ಮಹಿಳೆಯರಿಂದಲೇ ಆಸ್ತಿ ಅಳತೆ, ರಾಮನಗರದಲ್ಲಿ ಯಶಸ್ವಿ ಪ್ರಯೋಗ; ರಾಜ್ಯಾದ್ಯಂತ ವಿಸ್ತರಣೆ ಗುರಿ ಎಂದ ಡಿಸಿಎಂ

Posted date: 12 Jun, 2020

Powered by:     Yellow and Red

ರಾಮನಗರ:೧೨/೨೦/ಶುಕ್ರವಾರ. ರಾಜ್ಯದ ಗ್ರಾಮೀಣ ಜೀವನೋಪಾಯ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯೆಯರು ಇದೀಗ ಮತ್ತೊಂದು ದಿಟ್ಟ ಹೆಜ್ಜೆಯನ್ನು ಇರಿಸಿದ್ದು, ಮನೆ/ ಆಸ್ತಿ ಅಳತೆ, ತೆರಿಗೆ ಅಂದಾಜು ಮಾಡುವ ಮೂಲಕ ಕೊರೊನಾ (ಕೋವಿಡ್-೧೯) ಸಂಕಷ್ಟದ ಕಾಲದಲ್ಲೂ ಹೊಸ ಜೀವನೋಪಾಯ ಮಾರ್ಗವನ್ನು ಕಂಡುಕೊಂಡಿದ್ದಾರೆ. ಇದನ್ನು ಕಣ್ಣಾರೆ ಕಂಡು ಪರಿಶೀಲಿಸಿದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.


ಜಿಲ್ಲೆಯ ಮೂರು ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರು ಸರ್ವೇ ಕಾರ್ಯ ನಡೆಸುತ್ತಿದ್ದು, ಗ್ರಾಮೀಣ ಜೀವನೋಪಾಯ ಇಲಾಖೆ ಉಸ್ತುವಾರಿ ಹೊಂದಿರುವ ಉಪ ಮುಖ್ಯಮಂತ್ರಿಗಳು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರಲ್ಲದೆ ಆ ಮಹಿಳೆಯರ ಜತೆ ಸಂವಾದವನ್ನೂ ನಡೆಸಿದರು. ಇದೇ ವೇಳೆ ಮಾತನಾಡಿದ ಅವರು, ಪ್ರಾಯೋಗಿಕವಾಗಿ ರಾಮನಗರ ಜಿಲ್ಲೆಯಲ್ಲಿ ಮಾಡಲಾಗಿರುವ ಈ ಪ್ರಯತ್ನವೂ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ಗ್ರಾಮೀಣಾಭಿವೃದ್ಧಿ-ಪಂಚಾಯತ್ ರಾಜ್ ಸಚಿವಾಲಯದ ಜತೆ ಚರ್ಚಿಸಿ ಈ ಅಭಿಯಾನವನ್ನು ರಾಜ್ಯವ್ಯಾಪಿ ವಿಸ್ತರಿಸಲಾಗುವುದು. ಈ ಮೂಲಕ ಮಹಿಳಾ ಸಬಲೀಕರಣಕ್ಕೆ ಹೊಸಬಾಷ್ಯ ಬರೆಯಲಾಗುವುದು ಎಂದು ಪ್ರಕಟಸಿದರು.


ಗ್ರಾಮೀಣ ಮಹಿಳೆಯರ ದಿಟ್ಟತನ, ಸ್ವಾವಲಂಬನೆಯ ಹೆಗ್ಗುರಿಗೆ ಇದೊಂದು ಉತ್ತಮ ಉದಾಹರಣೆ. ಇನ್ನು ಮುಂದೆ ರಾಜ್ಯಾದ್ಯಂತ ಆಸ್ತಿಗಳ ಸರ್ವೆ, ತೆರಿಗೆ ಅಂದಾಜನ್ನು ಮಹಿಳೆಯರೇ ಮಾಡಲಿದ್ದಾರೆ. ಜತೆಗೆ ಮುಂದೆ ಆಸ್ತಿ ತೆರಿಗೆಯನ್ನೂ ಮಹಿಳೆಯರೇ ಸಂಗ್ರಹಿಸಲಿದ್ದಾರೆ ಎಂದು ಅವರು ಘೋಷಿಸಿದರು. 


ಕೋವಿಡ್ ಬಿಕ್ಕಟ್ಟನ್ನು ಸದುಪಯೋಗ ಮಾಡಿಕೊಂಡಿರುವ ಈ ಮಹಿಳೆಯರು ಜಿಲ್ಲಾಡಳಿತದ ನೆರವಿನಿಂದ ಕೈಕೊಂಡಿರುವ ಈ ಜೀವನೋಪಾಯ ಚಟುವಟಿಕೆ ಆರ್ಥಿಕವಾಗಿಯೂ ಅವರಿಗೆ ಅನುಕೂಲ ಮಾಡಿಕೊಟ್ಟಿದೆ. ಇವರೆಲ್ಲರೂ ಮಾಸಿಕ ತಲಾ ೧೫ ರಿಂದ ೨೦ ಸಾವಿರ ರೂಪಾಯಿ ಆದಾಯ ಗಳಿಸಿದ್ದಾರೆಂದು ಉಪ ಮುಖ್ಯಮಂತ್ರಿಗಳು ಸಂತಸ ವ್ಯಕ್ತಪಡಿಸಿದರು.


ಇದೇ ವೇಳೆ ಮಹಿಳೆಯರ ಜತೆ ಸಂವಾದ ನಡೆಸಿದ ಅವರು, ನಿಮ್ಮ ಪ್ರಯತ್ನದಿಂದ ನನ್ನ ಮನಸ್ಸು ತುಂಬಿಬಂದಿದೆ. ಆರ್ಥಿಕವಾಗಿ ಸಬಲರಾಗಬೇಕು ಎಂಬ ನಿಮ್ಮ ಉದ್ದೇಶ ಅತ್ಯಂತ ಉತ್ತಮವಾದ್ದು. ನಿಮಗೆ ಬೇಕಿರುವ ಎಲ್ಲ ಸವಲತ್ತುಗಳನ್ನು ನೀಡಲು ಸರಕಾರ ಸಿದ್ಧವಿದೆ. ನಿಮ್ಮ ಉನ್ನತಿಯಲ್ಲೇ ರಾಜ್ಯ, ದೇಶದ ಉನ್ನತಿ ಅಡಗಿದೆ ಎಂದು ನುಡಿದರು.


*ಏನಿದು ಯೋಜನೆ?:*


ಸ್ವಸಹಾಯ ಗುಂಪುಗಳಲ್ಲಿ ಜೀವನೋಪಾಯ ಚಟುವಟಿಕೆಗಳಲ್ಲಿ ನಿರತರಾಗಿದ್ದ ಮಹಿಳೆಯರು, ಜಿಲ್ಲೆಯ ಕಂಚುಗಾರನಹಳ್ಳಿ, ಲಕ್ಷ್ಮೀಪುರ ಮತ್ತು ಬನ್ನಿಕುಪ್ಪೆ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಆಸ್ತಿ ಸರ್ವೇ ಕೆಲಸವನ್ನು ಕೈಗೊಂಡಿದ್ದರು. ಜಿಲ್ಲೆಯ ಕಂದಾಯ ಇಲಾಖೆ ಇವರಿಗೆ ತಾಂತ್ರಿಕ ನೆರವು ನೀಡಿತ್ತು. ಇವರು ಸುಮಾರು ೩,೧೧೬  ಮನೆಗಳನ್ನು ಅಳತೆ ಮಾಡಿದ್ದು, ಪ್ರತಿ ಮನೆಯ ಅಳತೆಗೆ ೫೦ ರೂ. ನಿಗದಿ ಮಾಡಲಾಗಿದೆ ಎಂದು ಅಭಿಯಾನದ ನಿರ್ದೇಶಕಿ ಡಾ. ಬಿ.ಆರ್. ಮಮತಾ ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.


ಇಡೀ ರಾಜ್ಯದಲ್ಲಿಯೇ ಇದು ವಿಭಿನ್ನ ಅಭಿಯಾನವಾಗಿದ್ದು, ಸಂಜೀವಿನಿ ಸ್ವಸಹಾಯ ಗುಂಪುಗಳ ಸದಸ್ಯರಾಗಿರುವ, ೧೦ ನೇ ತರಗತಿ ಪಾಸಾಗಿರುವ ಕ್ರಿಯಾಶೀಲ ಮಹಿಳೆಯರನ್ನು ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಿದ ನಂತರ ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇವರಿಗೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ತಾಂತ್ರಿಕ ತಂಡ ಅಗತ್ಯ ಮಾರ್ಗದರ್ಶನ ನೀಡುತ್ತದೆ. ಈ ಪ್ರಯತ್ನದಿಂದ ಆಸ್ತಿ ತೆರಿಗೆ ಪ್ರಮಾಣ ಮುಂದಿನ ದಿನಗಳಲ್ಲಿ ಗಣನೀಯವಾಗಿ ಹೆಚ್ಚಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.


ಸಂವಾದದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಅಡುಗೆ ಮನೆಗೆ ಸೀಮಿತವಾಗಬೇಕಿದ್ದ ನಮ್ಮ ಕ್ರಿಯಾಶೀಲತೆಯನ್ನು ಗುರುತಿಸಿ ಆಸ್ತಿ ಆಳತೆ ಕಾರ್ಯಕ್ಕೆ ನೀಯೋಜಿಸಿದ್ದು ನಮಗೆ ಹೆಚ್ಚು ಅನುಕೂಲವನ್ನು ಉಂಟು ಮಾಡಿದೆ. ಆದಾಯ ಗಳಿಸುವುದರ ಜತೆಗೆ ಹೊಸ ಉದ್ಯೋಗದ ಸಾಧ್ಯತೆಯೂ ನಮಗೆ ಸಿಕ್ಕಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಎಂ. ಎಸ್. ಅರ್ಚನಾ, ಸಿಇಒ ಇಕ್ರಂ ಅವರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑