Tel: 7676775624 | Mail: info@yellowandred.in

Language: EN KAN

    Follow us :


ಕೆಡಿಪಿ ಸಭೆಗೆ ಮುನ್ನ ಶ್ರೀರಾಮನ ದರ್ಶನ ಪಡೆದ ಡಿಸಿಎಂ ಅಶ್ವಥ್ ನಾರಾಯಣ

Posted date: 19 Jun, 2020

Powered by:     Yellow and Red

ಕೆಡಿಪಿ ಸಭೆಗೆ ಮುನ್ನ ಶ್ರೀರಾಮನ  ದರ್ಶನ ಪಡೆದ ಡಿಸಿಎಂ ಅಶ್ವಥ್ ನಾರಾಯಣ

ರಾಮನಗರ:ಜೂ/೧೯/೨೦/ಶುಕ್ರವಾರ. ಶತಶತಮಾನಗಳು ಕಳೆದರೂ ಶ್ರೀರಾಮನ ಮೇಲಿರುವ ಭಾರತೀಯರ ನಂಬಿಕೆ, ಭಕ್ತಿಯನ್ನು ಬದಲಾಯಿಸಲು ಸಾಧ್ಯವಿಲ್ಲ. ನಮ್ಮ ನರನಾಡಿಗಳಲ್ಲೂ ಆ ಸೀತಾರಾಮನೇ ತುಂಬಿಹೋಗಿದ್ದಾನೆ. ಪ್ರಸಕ್ತ ಕಾಲಘಟ್ಟದಲ್ಲಿ ನಾವು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೆ ರಾಮ ತತ್ತ್ವದಲ್ಲೇ ಪರಿಹಾರವಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರು ಪ್ರತಿಪಾದಿಸಿದರು.


ರಾಮನಗರದಲ್ಲಿ ಶುಕ್ರವಾರ ಜಿಲ್ಲೆಯ ಮೊದಲ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸಮೀಪದ ಶ್ರೀ ರಾಮದೇವರ ಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಪಟ್ಟಾಭಿರಾಮನ ದರ್ಶನ ಪಡೆದ ನಂತರ ಮಾತನಾಡಿದ ಅವರು, ರಾಮನನ್ನು ನಾವೆಲ್ಲರೂ ಮತ್ತೆಮತ್ತೆ ಸ್ಮರಿಸುತ್ತೇವೆ. ನಿರಂತರವಾಗಿ ಪೂಜಿಸುತ್ತೇವೆ. ಭವಿಷ್ಯದಲ್ಲಿ ಇನ್ನೆಷ್ಟೇ ತಲೆಮಾರುಗಳು ಕಳೆದರೂ ಆ ಮರ್ಯಾದಾ ಪುರುಷೋತ್ತಮನ ಆದರ್ಶ, ಮೌಲ್ಯಗಳು ನಮ್ಮನ್ನು ಕೈಹಿಡಿದು ಸದಾ ನಡೆಸುತ್ತಲೇ ಇರುತ್ತವೆ ಎಂದು ಹೇಳಿದರು.


ಅದೆಷ್ಟೋ ವರ್ಷಗಳಿಂದ ಇದ್ದ ಅಡ್ಡಿಗಳೆಲ್ಲ ನಿವಾರಣೆಯಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಬಿದ್ದ ಕೆಲ ದಿನಗಳಲ್ಲೇ ಈ ರಾಮಗಿರಿಯಲ್ಲಿ ಪಟ್ಟಾಭಿರಾಮನ ದರ್ಶನ ಭಾಗ್ಯ ಸಿಕ್ಕಿದ್ದು ನನ್ನ ಪೂರ್ವಜನ್ಮದ ಫಲ. ಸಕಲ ಪ್ರಜೆಗಳ ಪಾಲಿನ ದೈವ ಈ ರಾಮ ಸನ್ನಿಧಿಯಿಂದ ನಾನು ನೇರವಾಗಿ ಕೆಡಿಪಿ ಸಭೆಗೆ ಹೋಗುತ್ತಿದ್ದೇನೆ. ಇಂದಿನಿಂದ ರಾಮನಗರ ಜಿಲ್ಲೆಯ ಅಭಿವೃದ್ಧಿಯಲ್ಲೂ ನವಶಕೆ ಆರಂಭವಾಗಲಿದೆ ಎಂದು ಡಿಸಿಎಂ ಹೇಳಿದರು.


ಜಾತಿ, ಧರ್ಮ ಬೇಧವಿಲ್ಲದೆ ಪ್ರತಿಯೊಬ್ಬರನ್ನು ಒಟ್ಟಿಗೆ ಕರೆದುಕೊಂಡು ಮುನ್ನಡೆಯುವುದು ನನ್ನ ಉದ್ದೇಶ. ರಾಮ ಹಾಕಿಕೊಟ್ಟ ಸನ್ಮಾರ್ಗದಲ್ಲಿಯೇ ಪ್ರಗತಿಯ ರಥಚಕ್ರಗಳು ಸಾಗಲಿವೆ. ಎಲ್ಲರ ಸಹಕಾರದಿಂದ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಸಾಧಿಸಬೇಕು ಎಂಬುದು ನನ್ನ ಇಚ್ಚೆಯಾಗಿದೆ. ಆ ಕಾರ್ಯಕ್ಕೆ ಈ ರಾಮ ಸನ್ನಿಧಿಯಿಂದಲೇ ಚಾಲನೆ ಸಿಕ್ಕಿದೆ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.


*ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತಿದರು:*

ಸುಮಾರು ೪೦೦ ಮೆಟ್ಟಿಲುಗಳ ಎತ್ತರದ ರಾಮಗಿರಿ ಬೆಟ್ಟವನ್ನು ಅಶ್ವತ್ಥನಾರಾಯಣ ಅವರು ಎಲ್ಲಿಯೂ ನಿಲ್ಲದೇ ಕಾಲ್ನಡಿಗೆಯಲ್ಲಿಯೇ ಹತ್ತಿದರು. ಪುರಾಣ ಪ್ರಸಿದ್ಧವಾದ ಈ ತಾಣವನ್ನು ವೀಕ್ಷಿಸಿದರಲ್ಲದೆ ಅಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಸಂಬಂಧಪಟ್ಟವರಿಂದ ಮಾಹಿತಿ ಪಡೆದರು. ಬಳಿಕ ಬೆಟ್ಟದ  ಮೇಲಿರುವ ಪಟ್ಟಾಭಿರಾಮ ಸ್ವಾಮಿ ಹಾಗೂ ಶಿವನಿಗೆ ಪೂಜೆ ಸಲ್ಲಿಸಿದರು.


*ಕ್ಷೇತ್ರದ ಐತಿಹ್ಯ, ಪ್ರಕೃತಿಗೆ ಮಾರುಹೋದ ಡಿಸಿಎಂ:*

ನಮ್ಮ ಪಾಲಿಗೆ ಈ ಶ್ರೀ ರಾಮ ಕ್ಷೇತ್ರ ಬಹಳ ವಿಶೇಷ. ಈ ಬೆಟ್ಟದಲ್ಲಿ ಶ್ರೀರಾಮಚಂದ್ರರು ಸೀತಾ ಸಮೇತರಾಗಿ ೫ ರಿಂದ ೬ ವರ್ಷ ತಂಗಿದ್ದರು. ಇಲ್ಲಿರುವ ಪಟ್ಟಾಭಿರಾಮ ದೇವರನ್ನು ವಾನರ ಅರಸ ಸುಗ್ರೀವನೇ ಸ್ಥಾಪಿಸಿದನೆಂದು ಹಾಗೂ ಇಲ್ಲಿರುವ ಶಿವಲಿಂಗವನ್ನು ಸಾಕ್ಷಾತ್ ಶ್ರೀರಾಮರೇ ಸ್ಥಾಪನೆ ಮಾಡಿದರೆಂದೂ ಪುರಾಣಗಳು ಹೇಳುತ್ತವೆ. ಜತೆಗೆ ಬೆಟ್ಟವು ರಣಹದ್ದು ಸಂರಕ್ಷಣಾ ಧಾಮವೂ ಆಗಿದೆ. ಹೀಗಾಗಿ ಸರ್ವರೀತಿಯಲ್ಲೂ ಈ ತಾಣವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಕೆಡಿಪಿ ಸಭೆಯ ನಾಮಕರಣ ಸದಸ್ಯ ಎಂ.ರುದ್ರೇಶ ಮತ್ತು ಅಧಿಕಾರಿಗಳು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑