Tel: 7676775624 | Mail: info@yellowandred.in

Language: EN KAN

    Follow us :


ಹಕ್ಕು ಚಲಾಯಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಿ: ನ್ಯಾ. ಪ್ರಕಾಶ್ ನಾಡಿಗೇರ್ 

Posted date: 08 Mar, 2018

Powered by:     Yellow and Red

ಹಕ್ಕು ಚಲಾಯಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಿ: ನ್ಯಾ. ಪ್ರಕಾಶ್ ನಾಡಿಗೇರ್ 

ರಾಮನಗರ :  ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಪ್ರಜಾಪ್ರಭುತ್ವ ಉಳಿಸುವ ಜವಾಬ್ದಾರಿ ಮತದಾರರ ಮೇಲಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ನ್ಯಾ. ಪ್ರಕಾಶ್.ಎಲ್. ನಾಡಿಗೇರ್ ಅವರು ಅಭಿಪ್ರಾಯಪಟ್ಟರು.
 ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಚುನಾವಣಾ ಲಾಂಛನವನ್ನು ಬಿಡುಗಡೆ ಮಾಡಿ ಮಾತನಾಡಿದರು.
ಚುನಾಯಿತರಾಗುವ ಜನಪ್ರತಿನಿಧಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು, ಶೇ. 20 ರಿಂದ 30 ಮತಗಳನ್ನು ಪಡೆಯುವ ಅಭ್ಯರ್ಥಿಗಳೂ ಸಹ ಇಂದು ಚುನಾಯಿತರಾಗುತ್ತಿದ್ದಾರೆ. ಇದಕ್ಕೆ ಮತದಾನದ ಪ್ರಮಾಣ ಕಡಿಮೆಯಾಗುವುದೇ ಕಾರಣ. ಈ ದಿಸೆಯಲ್ಲಿ ಯುವ ಮತದಾರರ ಹೆಚ್ಚಿನ ಜವಾಬ್ದಾರಿ ವಹಿಸಬೇಕು. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಆಡಳಿತ ವ್ಯವಸ್ಥೆಯನ್ನು ಉತ್ತಮ ಪಡಿಸಬೇಕು ಎಂದರು.
ಈ ದೇಶವನ್ನು ಆಳುವ ನಮ್ಮ ಜನಪ್ರತಿನಿಧಿಗಳು ನಾವು ಚಲಾಯಿಸುವ ಮತ ಪಡೆದು ಅಧಿಕಾರದ ಗದ್ದುಗೆ ಹಿಡಿಯುತ್ತಾರೆ.  ಅಧಿಕಾರವನ್ನು ಪಡೆಯುವವರು ಜನತೆಯ ಒಳಿತಿಗಾಗಿ ದುಡಿಯಬೇಕು, ಚುನಾವಣೆಯಲ್ಲಿ ಅಂತಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು, ಮತದಾನದಲ್ಲಿ ಯಾವುದೇ ಸಬೂಬು ನೀಡದೆ ಹಕ್ಕು ಚಲಾಯಿಸಬೇಕು ಈ ಬಗ್ಗೆ ತಮ್ಮ ಪರಿಸರದಲ್ಲಿ ಅರಿವು ಮೂಡಿಸಬೇಕು ಎಂದದು ವಿದ್ಯಾರ್ಥಿಗಳಿಗೆ ಅವರು ಕರೆ ನೀಡಿದರು. 
ಸಮಾಜಕ್ಕೆ ನಮ್ಮ ಜವಾಬ್ದಾರಿ ಇದೆ ಎಂಬ ಅರಿವಿಟ್ಟುಕೊಂಡು ಮತ ಚಲಾಯಿಸಬೇಕು, ಅದನ್ನು ಕಳೆದುಕೊಳ್ಳಬಾರದು ಎಂದು ಅವರು ತಿಳಿಸಿದರು. 
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ. ಬಿ.ಆರ್. ಮಮತಾ ಅವರು ಮಾತನಾಡಿ, ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸಬೇಕು ಅವುಗಳಲ್ಲಿ ಮತ ಚಲಾವಣೆ ಮೊದಲ ಕರ್ತವ್ಯವಾಗಿದೆ, ಅರ್ಹರೆಲ್ಲರೂ ಮತದಾನ ಮಾಡುವಂತೆ ಅವರು ಕರೆ ನೀಡಿದರು.
ಪ್ರಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್. ಲತಾ ಅವರು, ಈ ವರ್ಷ ರಾಜ್ಯ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಅರ್ಹ ಮತದಾರರೆಲ್ಲರೂ ಮತದಾನ ಮಾಡಬೇಕು, ಪ್ರಸಕ್ತ ಸಾಲಿನಲ್ಲಿ ಯಾವುದೇ ಒಬ್ಬ ವಿಕಲಚೇತನ ಅರ್ಹ ಮತದಾರ ಮತದಾನದ ಹಕ್ಕು ಚಲಾವಣೆಯಿಂದ ವಂಚಿತರಾಗಬಾರದು ಎನ್ನುವ ದೃಷ್ಠಿಯಲ್ಲಿ ಚುನಾವಣಾ ಆಯೋಗ ಮತಗಟ್ಟೆಗಳಲ್ಲಿ ಅವರಿಗೆ ನೆರವು ನೀಡುವ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿಕೊಡುತ್ತಿದೆ. ಲಿಂಗತ್ವ ಅಲ್ಪಸಂಖ್ಯಾತರು ಕೂಡ ನಿರ್ಭಯವಾಗಿ ಮತಚಲಾಯಿಸಬೇಕು, ಈ ಬಾರಿ ಚುನಾವಣೆಯಲ್ಲಿ ಶೇ. 100 ರಷ್ಟು ಮತದಾನವಾಗುವ ಉದ್ದೇಶದಿಂದ ಮತದಾನ  ಮಹತ್ವದ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ಚುನಾವಣಾ ಲಾಂಛನವನ್ನು ಅನಾವರಣ ಮಾಡಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ 2 ಸಾವಿರಕ್ಕೂ ಹೆಚ್ಚು ಶಾಲಾ, ಕಾಲೇಜು, ವಿದ್ಯಾರ್ಥಿಗಳು ಭಾಗವಹಿಸಿ, ಇಂಗ್ಲಿಷ್ ವರ್ಣಮಾಲೆಯ ವೋಟ್ ಎಂಬ ಪದದ ವಿನ್ಯಾಸವನ್ನು ರಚಿಸಿದ್ದು ಆಕರ್ಷಕವಾಗಿತ್ತು ಹಾಗೂ ವಿಕಲಚೇತನರು ಗಾಲಿ ಖುರ್ಚಿಯಲ್ಲಿ ಕುಳಿತ ಸಂಕೇತವನ್ನು ರಚಿಸಲಾಯಿತು.  ಅಲ್ಲದೇ ವಿಕಲಚೇತನರಿಗಾಗಿ ಚುನಾವಣಾ ಆಯೋಗ ಈ ಬಾರಿ ನೀಡಿರುವ ಸೌಲಭ್ಯಗಳನ್ನು ಬಗ್ಗೆಯೂ ಅರಿವು ಮೂಡಿಸಲಾಯಿತು. 
ಜಾಥಾ: ನಗರದ ನಾಗರೀಕರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಬೃಹತ್ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್. ಲತಾ ಅವರು ಜಾಥಾಗೆ ಚಾಲನೆ ನೀಡಿದರು. 
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮೇಶ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪುಟ್ಟಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ.ಎಚ್. ಗಂಗಮಾರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಮರನಾಥ್, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಕನಕ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಗಣ್ಯರು ಭಾಗವಹಿಸಿದ್ದರು.  
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑