Tel: 7676775624 | Mail: info@yellowandred.in

Language: EN KAN

    Follow us :


ಕೊರೊನಾ: ಚನ್ನಪಟ್ಟಣ ದ ಮೂರು ಪ್ರಕರಣ ಸೇರಿ ಜಿಲ್ಲೆಯಲ್ಲಿ ಇಂದು ಆರು ಪ್ರಕರಣ ದಾಖಲು. ಜಿಲ್ಲಾಧಿಕಾರಿ.

Posted date: 05 Jul, 2020

Powered by:     Yellow and Red

ಕೊರೊನಾ: ಚನ್ನಪಟ್ಟಣ ದ ಮೂರು ಪ್ರಕರಣ ಸೇರಿ ಜಿಲ್ಲೆಯಲ್ಲಿ ಇಂದು ಆರು ಪ್ರಕರಣ ದಾಖಲು. ಜಿಲ್ಲಾಧಿಕಾರಿ.

ರಾಮನಗರ:ಜು/೦೫/೨೦/ಭಾನುವಾರ. ಚನ್ನಪಟ್ಟಣ ದ ಮೂರು ಪಾಸಿಟಿವ್ ಸೇರಿ  ಜಿಲ್ಲೆಯಲ್ಲಿ ಇಂದು ಆರು ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ರವರು ತಿಳಿಸಿದ್ದಾರೆ.


ಇಂದು ಕನಕಪುರ ೧, ಮಾಗಡಿ ೧, ಚನ್ನಪಟ್ಟಣ ೩ ಮತ್ತು ರಾಮನಗರದಲ್ಲಿ ೧ ಪ್ರಕರಣಗಳು ಪತ್ತೆಯಾಗಿದೆ. ಇವರನ್ನು ರಾಮನಗರದ ಕೋವಿಡ್-೧೯ ಆಸ್ಪತ್ರೆಗೆ ದಾಖಲಿಸಲಾಗಿದೆ.

*ಚನ್ನಪಟ್ಟಣ ದ ವರದಿ*
ಚನ್ನಪಟ್ಟಣ ನಗರದ ತಟ್ಟೆಕೆರೆ ಯ ೩೪ ವರ್ಷದ ವ್ಯಕ್ತಿಗೆ ಹಾಗೂ ಈಡಿಗರ ಬೀದಿಯ ೪೮ ವರ್ಷದ ವ್ಯಕ್ತಿಯೋರ್ವರಿಗೆ ಇಂದು ಸೋಂಕು ದೃಢಪಟ್ಟಿದೆ.
ಮೂರನೆ ಪ್ರಕರಣವು ಗೊಂದಲದಲ್ಲಿದ್ದು, ಇದೊಂದು ಶಾನುಭೋಗನಹಳ್ಳಿ ಗ್ರಾಮದ ಹಳೆಯ ಪ್ರಕರಣವಾಗಿದ್ದು, ಇದು ಲೆಕ್ಕದಲ್ಲಿ ಕೈ ಬಿಟ್ಟು ಹೋಗಿತ್ತು. ಇವರು ಈಗಾಗಲೇ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಅದನ್ನು ಜಿಲ್ಲಾಡಳಿತ ಇಂದು ಸೇರಿಸಿದೆ ಎಂದು ತಾಲ್ಲೂಕು ಆಡಳಿತ ಸಮರ್ಥಿಸಿದೆ.

ಮತ್ತೊಂದು ಮಾಹಿತಿ ಯ ಪ್ರಕಾರ ಇದು ಒಂದು ಗ್ರಾಮದ ಹೊಸ ಪ್ರಕರಣವಾಗಿದ್ದು, ೩೫ ವರ್ಷದ ಯುವಕನೋರ್ವನಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ. ಯಾವುದು ಸರಿ ಯಾವುದು ತಪ್ಪು ಎಂಬ ಮಾಹಿತಿಯನ್ನು ಜಿಲ್ಲಾಡಳಿತ ನೀಡಬೇಕಾಗಿದೆ.

*ಇಂದಿನ ತನಕ ಜಿಲ್ಲೆಯ ವರದಿ*
ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಇಂದು ಯಾರು ಕೂಡ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದಿಲ್ಲ. ಜಿಲ್ಲೆಯಲ್ಲಿ ಈವರೆಗೆ ಒಟ್ಟು ೧೦೫ ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಕನಕಪುರ ೪೬, ಮಾಗಡಿ ೧೯, ಚನ್ನಪಟ್ಟಣ ೨೩ ಮತ್ತು ರಾಮನಗರದ ೧೭ ಜನರು ಸೇರಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ ೨೩೩ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಕನಕಪುರ ೬೩, ಮಾಗಡಿ ೮೪, ಚನ್ನಪಟ್ಟಣ ೪೩ ಮತ್ತು ರಾಮನಗರದ ೪೩ ಪ್ರಕರಣಗಳು ಸೇರಿವೆ.

ಇದುವರೆಗೆ ಜಿಲ್ಲೆಯಲ್ಲಿ ಒಟ್ಟು ೫ ಮಂದಿ ಸಾವನ್ನಪ್ಪಿದ್ದಾರೆ. ರಾಮನಗರದಲ್ಲಿ ಒಬ್ಬರು ಮತ್ತು ಮಾಗಡಿಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ.

 *ಜಿಲ್ಲಾ ಆರೋಗ್ಯ ಇಲಾಖೆ ವರದಿ:*
ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಭಾನುವಾರ (ಜುಲೈ ೫) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ ೧೦,೧೦೮ (ಹೊಸದಾಗಿ ಇಂದಿನ ೩೩೯ ಸೇರಿ). ಒಟ್ಟು ೩,೦೪೬ ಜನ ೧೪ ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. ೨೮೧ ಜನರು ಇಂದು ಹೋಂ ಕ್ವಾರಂಟೈನ್ ಅವಧಿಯನ್ನು ಪೂರೈಸಿದ್ದು, ಇವರ ಒಟ್ಟಾರೆ ಸಂಖ್ಯೆ ೩,೧೬೭ ಕ್ಕೆ ಏರಿಕೆಯಾಗಿದೆ.

ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು ೮೯ ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ ೩,೦೮೭ ಮಂದಿ ತಪಾಸಣೆಗೆ ಮಾಡಿಸಿ ಕೊಂಡಿದ್ದಾರೆ. ಒಟ್ಟು ೧೨ ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಇನ್ಸಟ್ಯೂಷನಲ್ ಕ್ವಾರಂಟೈನ್ ಗೆ ಇಂದು ೫೮ ಜನ ಸೇರ್ಪಡೆಯಾಗುವುದರೊಂದಿಗೆ ಒಟ್ಟಾರೆ ಸಂಖ್ಯೆ ೩೪೧ ಕ್ಕೆ ಇಳಿಕೆಯಾಗಿದೆ.

ಇಂದು ಹೊಸದಾಗಿ ೩೩೯ ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು ೧೦,೪೨೬ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದಿನ ೮,೬೧೯ ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ ೩೩೯ ಬಾಕಿ ವರದಿ ಸೇರಿ ಒಟ್ಟು ೧,೫೭೪ ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ.

ಗೋ ರಾ ಶ್ರೀನಿವಾಸ...
ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑