Tel: 7676775624 | Mail: info@yellowandred.in

Language: EN KAN

    Follow us :


ಕೊರೊನಾ ಭಯ; ಭಕ್ತ ಗಣವಿಲ್ಲದೆ ಕಳೆಗುಂದಿದ ಶ್ರಾವಣ

Posted date: 25 Jul, 2020

Powered by:     Yellow and Red

ಕೊರೊನಾ ಭಯ; ಭಕ್ತ ಗಣವಿಲ್ಲದೆ ಕಳೆಗುಂದಿದ ಶ್ರಾವಣ

ಸಾಧಾರಣ ಅಲಂಕಾರ ಮತ್ತು ಪೂಜೆಯಲ್ಲಿ ಕೆಂಗಲ್ ಆಂಜನೇಯ ಸ್ವಾಮಿ

ಚನ್ನಪಟ್ಟಣ:ಜು/೨೫/೨೦/ಶನಿವಾರ. ಕೊರೊನಾ ಎಂಬ ಮಹಾಮಾರಿಯಿಂದ ಮೊದಲನೆಯ ಶ್ರಾವಣ ಮಾಸದ ಶನಿವಾರವು ವಿಗ್ರಹಗಳಿಗೆ ವಿಶೇಷ ಪೂಜೆಯಿಲ್ಲದೆ, ದರ್ಶಿಸಲು ಭಕ್ತಗಣವೂ ಇಲ್ಲದೆ ಸಂಪೂರ್ಣ ಕಳೆಗುಂದಿತ್ತು.


ಮೊದಲ ಶ್ರಾವಣದಲ್ಲೂ ಬಾಗಿಲು ಮುಚ್ಚಿರುವ ಶ್ರೀ ಅಪ್ರಮೇಯ ಸ್ವಾಮಿ ದೇವಾಲಯ


ಮೊದಲನೆಯ ಶ್ರಾವಣ ಮಾಸದಲ್ಲಿ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹತ್ತರಿಂದ ಹದಿನೈದು ಸಾವಿರ ಮಂದಿ ಸೇರುತ್ತಿದ್ದರು. ಕೊನೆಯ ಶ್ರಾವಣ ಮುಗಿಯುವ ತನಕವೂ, ಪ್ರತಿ ಶನಿವಾರವೂ ಅಯ್ಯನಗುಡಿಯ ಜಾತ್ರೆಯಂತೆಯೇ ನಡೆಯುತ್ತಿತ್ತು. ಕಲ್ಯಾಣಿ ಪೂಜೆ, ಗರುಡಗಂಭ ಪೂಜೆಯಿಂದ ಮೊದಲ್ಗೊಂಡು, ಕಳಶಾರಾಧನೆ, ಬೆಣ್ಣೆ ಅಲಂಕಾರ, ವಿಶೇಷ ಹೂವಿನ ಅಲಂಕಾರ ನಡೆದು ಸರತಿ ಸಾಲಿನಲ್ಲಿ ನಿಂತ ಭಕ್ತರು ಹರ್ಷದ್ಘಾರಗಳೊಂದಿಗೆ ಪೂಜೆ ಸಲ್ಲಿಸುತ್ತಿದ್ದರು. ಕೊರೊನಾ ಸೋಂಕಿನ ಭಯದಿಂದ ಕೇವಲ ಅರ್ಚಕರು ಮಾತ್ರ ಎಂದಿನ ಪೂಜೆ ಪುನಸ್ಕಾರ ಮಾಡಿ ಬಾಗಿಲು ಮುಚ್ಚಿದರು.


ನಗರದ ದೊಡ್ಡಮಳೂರು ಗ್ರಾಮದ ಶ್ರೀ ಅಪ್ರಮೇಯ ಸ್ವಾಮಿ ದೇವಾಲಯವಂತು ಬೆಳಗ್ಗಿನ ಹನ್ನೊಂದು ಗಂಟೆಯಾದರೂ ಬಾಗಿಲು ತೆರೆದಿರಲಿಲ್ಲ. ನಗರದ ಹೊರವಲಯದ ನೀಲಕಂಠನಹಳ್ಳಿ ಗ್ರಾಮದಲ್ಲಿರುವ ಶ್ರೀ ಶ್ರೀನಿವಾಸ ದೇವಾಲಯದಲ್ಲಿ ಎಂದಿನಂತೆ ಸಾಧಾರಣ ಪೂಜಾ ಕೈಂಕರ್ಯಗಳು ನಡೆದವು. ಇಲ್ಲಿಯೂ ಸಹ ಹೇಳಿಕೊಳ್ಳುವ ಭಕ್ತರು ಸೇರಿರಲಿಲ್ಲ.

ಸಾಧಾರಣ ಅಲಂಕಾರ ಮತ್ತು ಪೂಜೆಯಲ್ಲಿ ಕೆಂಗಲ್ ಆಂಜನೇಯ ಸ್ವಾಮಿ


ಕೋಟೆ ಪ್ರದೇಶದಲ್ಲಿರುವ ಶ್ರೀ ವರದರಾಜ ಸ್ವಾಮಿ ದೇವಾಲಯದಲ್ಲಿಯೂ ಸಹ ಸಾಧಾರಣ ಪೂಜೆ ನಡೆಯಿತೇ ವಿನಹ ವಿಶೇಷ ಪೂಜೆಗಳು ಇರಲಿಲ್ಲ. ಶ್ರಾವಣದ ಹಿಂದಿನ ದಿನ ನಗರದ ಬಹುತೇಕ ಪ್ರದೇಶಗಳಲ್ಲಿ ಸ್ವಾಮಿಯ ಮೆರವಣಿಗೆ ನಡೆಯುತ್ತಿತ್ತು. ಶುಕ್ರವಾರ ಮಧ್ಯಾಹ್ನ ಒಂದು ಗಂಟೆಗೆ ಸ್ವಾಮಿ ಹೊರಟರೆ ರಾತ್ರಿ ಹತ್ತು ಗಂಟೆಗೆ ಮತ್ತೆ ದೇವಾಲಯಕ್ಜೆ ಬಿಜಂಗೈಯುತ್ತಿತ್ತು. ಆದರೆ ಈ ವರ್ಷ ಯಾವುದೇ ರೀತಿಯ ಕಾರ್ಯಕ್ರಮಗಳು ನಡೆಯಲಿಲ್ಲ.


ನಗರದ ಲಕ್ಷ್ಮಿ ನಾರಾಯಣ ದೇವಾಲಯ ಸೇರಿದಂತೆ ತಾಲ್ಲೂಕಿನಾದ್ಯಂತ ಇರುವ ವೆಂಕಟೇಶ್ವರ, ಹನುಮಂತ ದೇವಾಲಯಗಳು, ಇನ್ನಿತರ ದೇವರುಗಳ ದೇವಾಲಯಗಳು ಕೊರೊನಾ ಭಯದಿಂದ ಬೆಳಗಿನ ಸಾಧಾರಣ ಪೂಜೆಗಷ್ಟೇ ಸೀಮಿತವಾಗಿದ್ದರಿಂದ ಭಕ್ತರು ನಿರಾಸೆಯಾಗಿದ್ದರು. ಇನ್ನೂ ಕೆಲ ಭಕ್ತಾದಿಗಳು ದೇವಾಲಯಗಳ ಬಾಗಿಲಿನ್ನೇ ಪೂಜಿಸುವ ಮೂಲಕ ತಮ್ಮ ಭಕ್ತಿಯನ್ನು ಮೆರದು ಸಾರ್ಥಕಗೊಂಡರು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑