Tel: 7676775624 | Mail: info@yellowandred.in

Language: EN KAN

    Follow us :


ಕೊರೊನಾ ಹಿನ್ನೆಲೆ: ಸರಳವಾಗಿ ಆಚರಣೆಗೊಂಡ ಬಕ್ರೀದ್ ಹಬ್ಬ

Posted date: 01 Aug, 2020

Powered by:     Yellow and Red

ಕೊರೊನಾ ಹಿನ್ನೆಲೆ: ಸರಳವಾಗಿ ಆಚರಣೆಗೊಂಡ ಬಕ್ರೀದ್ ಹಬ್ಬ

ಚನ್ನಪಟ್ಟಣ:ಆ/01/20 ಮುಸಲ್ಮಾನರ ಕೆಲವೇ ಹಬ್ಬಗಳಲ್ಲಿ ಬಕ್ರೀದ್ ಒಂದು ಪ್ರಮುಖ ಹಬ್ಬ. ತ್ಯಾಗ ಬಲಿದಾನದ ಸಂಕೇತವಾಾದ ಈ ಹಬ್ಬವನ್ನುವ ಭಾರತವೂ ಸೇರಿದಂತೆ ವಿಶ್ವದ್ಯಾಂತ ಮುಸ್ಲಿಮರು  ಶ್ರದ್ಧೆ ಭಕ್ತಿಯಿಂದ  ಇಂದು ಆಚರಿಸಿದರು.


ಈ ಹಿಂದೆ ತಾಲ್ಲೂಕಿನಾದ್ಯಂತ ಇರುವ ಮಸ್ಜಿದ್ ಗಳು ಸೇರಿದಂತೆ ನಗರದ ಬೆಂಗಳೂರು ಮೈಸೂರು ಹೆದ್ದಾರಿಯ ನ್ಯಾಯಾಲಯ ಸಂಕೀರ್ಣದ ದರ್ಗಾ ಪ್ರದೇಶದಲ್ಲಿ ಜಮಾಯಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಈ ವರ್ಷ ಧರ್ಮಗುರುಗಳ ಜೊತೆಗೆ ಬೆರಳೆಣಿಕೆಯಷ್ಟು ಮಂದಿ ಮಾತ್ರ ಪ್ರಾರ್ಥನೆ ಸಲ್ಲಿಸಿದರೆ ಉಳಿದ ಮಂದಿ ತಂತಮ್ಮ ಮನೆಗಳಲ್ಲೇ ಪ್ರಾರ್ಥನೆ ಸಲ್ಲಿಸುವ ಮೂಲಕ ಬಕ್ರೀದ್ ಹಬ್ಬವನ್ನು ಆಚರಿಸಿದರುಬ


ಬಲಿ ಕೊಟ್ಟ ಪ್ರಾಣಿಯ ಮಾ೦ಸವನ್ನು ಮೂರು ಭಾಗಗಳಾಗಿ ವಿ೦ಗಡಿಸಿ ಒಂದು ಭಾಗವನ್ನು ನೆ೦ಟರಿಗೆ ಕೊಡುತ್ತಾರೆ. ಎರಡನೆಯ ಭಾಗವನ್ನು ಬಡವರಿಗೆ ಹ೦ಚುತ್ತಾರೆ. ಉಳಿದ ಮೂರನೆಯ ಭಾಗವನ್ನು ಮಾತ್ರ ತಮ್ಮ ಸ್ವಂತಕ್ಕೆ ಉಪಯೋಗಿಸಿಕೊಳ್ಳುತ್ತಾರೆ.


ಈ ಹಬ್ಬದ ದಿವಸ ಮುಸ್ಲಿಮರು ರ೦ಜಾನ್ ಹಬ್ಬದ ಹಾಗೆಯೇ "[[ಈದ್‌ಗಾಹ್]]"ಗೆ ಹೋಗಿ ಪ್ರಾರ್ಥನೆ ಇತ್ಯಾದಿಗಳನ್ನು ಸಲ್ಲಿಸುತ್ತಾರೆ. ಒಟ್ಟಿನಲ್ಲಿ ಮುಸ್ಲಿಮರಲ್ಲಿ ಹಬ್ಬಗಳ ಆಚರಣೆಯಲ್ಲಿ ಒಂದು ಬಗೆಯ ವೈಶಿಷ್ಟ್ಯವಿದೆ. ಅವು ಆ ಜನರಲ್ಲಿ ಒಂದು ಬಗೆಯ ಚೈತನ್ಯವನ್ನೂ, ಸೋದರ ಭಾವನೆಯನ್ನೂ ಉ೦ಟು ಮಾಡುತ್ತದೆ. ಈದ್‌ಗಾಹ್‌ಗಳಲ್ಲಿ ಇಮಾಮರ ಹಿ೦ದೆ ಸಾಲುಸಾಲಾಗಿ ನಿ೦ತು "ಅಲ್ಲಾಹು ಅಕ್ಬರ್", "ಅಲ್ಲಾಹು ಅಕ್ಬರ್" ಎಂದು ಘೋಷಣೆ ಮಾಡುತ್ತಾ ಸ೦ವ್ಯೂಹಕವಾಗಿ ಎಲ್ಲರೂ ತಲೆ ಬಾಗುವ, ದೇವರಿಗೆ ಶರಣು ಹೋಗುವ ಆ ಅಭೂತಪೂರ್ವ ದೃಶ್ಯ ರೋಮಾ೦ಚನಕಾರಿಯಾಗಿಯೂ, ನಯನ ಮನೋಹರವಾಗಿಯೂ ಇರುತ್ತದೆ. ನಮಾಜ್ನಂತರ ಒಬ್ಬರನೊಬ್ಬರು ಆಲಿ೦ಗನ ಮಾಡಿಕೊಳ್ಳುವುದು, ಕೈ ಕುಲುಕುವುದು, "ಈದ್ ಮುಬಾರಕ್" ಅ೦ದರೆ "ಈ ಹಬ್ಬ ನಿಮಗೆ ಶುಭವನ್ನು೦ಟು ಮಾಡಲಿ" ಎನ್ನುವುದು ಗಮನಾರ್ಹ.


ದೃಷ್ಟಿ ತೆಗೆಯುವ ನೆಪದಲ್ಲಿ ಅವರು ಹಬ್ಬದ "ಈದೀ" ಅ೦ದರೆ ಇನಾ೦ ವಸೂಲು ಮಾಡದೇ ಬಿಡುವುದಿಲ್ಲ. ಪ್ರಾರ್ಥನೆಯಿ೦ದ ಹಿ೦ದಿರುಗಿದ ನಂತರ ಕಿರಿಯರು ಸಾಮಾನ್ಯವಾಗಿ ತಮ್ಮ ತ೦ದೆ, ತಾಯಿ, ಅಣ್ಣ, ಅಕ್ಕ೦ದಿರು ಮೊದಲಾದ ಹಿರಿಯರ ಬಳಿ ಹೋಗಿ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸುವುದು ಮುಸ್ಲಿಮರಲ್ಲಿ ಒಂದು ಸ೦ಪ್ರದಾಯ. ಆಗ ಹಿರಿಯರು ಅವರನ್ನು ಯಥೇಚ್ಛವಾಗಿ ಹರಸುತ್ತಾರೆ.


ಈ ಹಬ್ಬಗಳಲ್ಲಿ ಎಲ್ಲರಿಗೂ ಎಲ್ಲಾ ಮನೆಗಳಲ್ಲೂ ಆಮ೦ತ್ರಣ. ಸ್ವಲ್ಪವಾದರೂ ತಿನ್ನಲೇಬೇಕು. ಉಕ್ಕಿ ಬರುವ ಆನಂದವನ್ನು ಎಲ್ಲರೊಂದಿಗೆ ಹಂಚಿಕೊಳ್ಳಲೇಬೇಕು.ಹಬ್ಬದ ದಿನ ಆನ೦ದ ಪಡೆಯದವನು ಅಭಾಗ್ಯನೆ೦ದು ಹೇಳಿಕೊಳ್ಳುವುದು ಮುಸ್ಲಿಮರ ಒಂದು ವಾಡಿಕೆಯಾಗಿದೆ.


ತಾಲ್ಲೂಕಿನ ಗಣ್ಯರನೇಕರು ಬಕ್ರೀದ್ ಹಬ್ಬಕ್ಕೆ ಶುಭಕೋರಿದ್ದಾರೆ.


ಗೋ ರಾ ಶ್ರೀನಿವಾಸ...


ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑