Tel: 7676775624 | Mail: info@yellowandred.in

Language: EN KAN

    Follow us :


ಬ್ರಾಹ್ಮಣ ಸೇರಿದಂತೆ 144 ಜಾತಿಗಳಿಗೆ ಶೇಕಡಾ 10 ಮೀಸಲಾತಿ; ಪ್ರಧಾನಿ ಮತ್ತು ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿದ ಬ್ರಾ ಅ ಮಂ

Posted date: 07 Aug, 2020

Powered by:     Yellow and Red

ಬ್ರಾಹ್ಮಣ ಸೇರಿದಂತೆ 144 ಜಾತಿಗಳಿಗೆ ಶೇಕಡಾ 10 ಮೀಸಲಾತಿ; ಪ್ರಧಾನಿ ಮತ್ತು ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿದ ಬ್ರಾ ಅ ಮಂ

ಚನ್ನಪಟ್ಟಣ:ಆ/06/20/ಶುಕ್ರವಾರ. ಬ್ರಾಹ್ಮಣ ಜಾತಿ ಸೇರಿದಂತೆ ೧೪೪ ಜಾತಿಗೆ ಶೇಕಡಾ 10 ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರ ಘೋಷಿಸಿದ್ದು, ಮುಖ್ಯಮಂತ್ರಿಗಳು ಜಾರಿಗೆ ತರಲು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ತಾಲ್ಲೂಕು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಪದಾಧಿಕಾರಿಗಳು ಅವರಿಗೆ ಅಭಿನಂದನೆಗಳನ್ನು ತಿಳಿಸಿದರು.

ನರದ ಕೋಟೆ ಯಲ್ಲಿರುವ ಶ್ರೀ ರಾಘವೇಂದ್ರ ಮಠ ದ ಸಭಾ ಮಂಟಪದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯ ಮೂಲಕ ಅಭಿನಂದನೆ ಸಲ್ಲಿಸಿದರು.


ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಪವನಕುಮಾರ್ ಮಾತನಾಡಿ, ಈಗಾಗಲೇ ನಮಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ ಪಡೆಯಲು ಅನುಮೋದನೆ ಸಿಕ್ಕಿದೆ. ಶಿಕ್ಷಣ ಮತ್ತು ಉದ್ಯೋಗಕ್ಕೂ ಮೀಸಲಾತಿಯನ್ನು ಶೀಘ್ರವಾಗಿ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ನವರ ಬಳಿ ಚರ್ಚಿಸಿದ್ದೇವೆ. ಅವರು ಶೀಘ್ರವಾಗಿ ಜಾರಿ ಮಾಡುವುದಾಗಿ ಭರವಸೆ‌ ನೀಡಿದ್ದಾರೆ ಆ ನಿಟ್ಟಿನಲ್ಲಿ ಮಾಧ್ಯಮದ ಮೂಲಕ ಅವರಿಗೆ ಅಭಿನಂದನೆ ಸಲ್ಲಿಸಿತ್ತಿದ್ದೇವೆ ಎಂದು ತಿಳಿಸಿದರು.


ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಬ್ರಾಹ್ಮಣ ವಿದ್ಯಾರ್ಥಿಗಳು, ಸಾಧಕರಿಗೆ ಎಲ್ಲಾ ರೀತಿಯ ಸೌಕರ್ಯಗಳನ್ನು ಸಹ ನೀಡಲು ಉದ್ದೇಶಿಸಲಾಗಿದೆ.


ಇವುಗಳಲ್ಲಿ ಪ್ರಮುಖವಾಗಿ ಸಾಂದೀಪನಿ ಶಿಷ್ಯ ವೇತನ, ಆಚಾರ್ಯತ್ರಯ ವೇದ ಶಿಷ್ಯ ವೇತನ, ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ, ಚಾಣಕ್ಯ ಆಡಳಿತ ತರಬೇತಿ ಯೋಜನೆ, ಸನ್ನಿಧಿ ಯೋಜನೆ, ಸರ್ ಎಂ ವಿಶ್ವೇಶ್ವರಯ್ಯ ಕೌಶಲ್ಯಾಭಿವೃದ್ಧಿ ಯೋಜನೆ, ಬ್ರಾಹ್ಮಣ ಮಹಿಳೆಯರಿಗೆ ಕರಕುಶಲ ವಸ್ತುಗಳ ತಯಾರಿಕೆಗಾಗಿ/ಗುಡಿ ಕೈಗಾರಿಕಾ ತರಬೇತಿ, ಸಹಾಯಧನ ಪಾವತಿ ಹಾಗೂ ಮಾರುಕಟ್ಟೆ ನಿರ್ಮಾಣ. ಬ್ರಾಹ್ಮಣ ಸ್ವಸಹಾಯ ಸಂಘಗಳ ಸ್ಥಾಪನೆ, ಪುರುಷೋತ್ತಮ ಯೋಜನೆ, ಸ್ವಯಂ ಉದ್ಯೋಗಕ್ಕೆ ಪ್ರೇರಣೆ ಹಾಗೂ ಸಹಾಯ. ಅನ್ನದಾತ ಯೋಜನೆ, ಎಲ್ಲಾ ಯೋಜನೆಗಳಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿ ಸಲ್ಲಿಕೆಯ ವಿವರಗಳ ಬಗ್ಗೆ ಸೂಕ್ತ ಪ್ರಕಟಣೆ ಹೊರಡಿಸುವುದು, ಸುಭದ್ರ, ಸೌಕ್ಯ, ಕಲ್ಯಾಣ, ಚೈತನ್ಯ ಉತ್ಸವ ಸೇರಿದಂತೆ ಇನ್ನಿತರ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ವಿವರಿಸಿದರು.


ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಬ್ರಾಹ್ಮಣ ಸಭಾ ಅಧ್ಯಕ್ಷ ರಾಮಪ್ರಸಾದ್, ಚಂದ್ರಶೇಖರ, ರಾಘವೇಂದ್ರ ಮಯ್ಯ, ಹೊಯ್ಸಳ, ರವಿಕುಮಾರ್ ಮತ್ತು ಡಾ ಶಶಿಕುಮಾರ್ ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑